ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕಾರ್ಯಕ್ರಮದಲ್ಲಿ ವಿಪ ಸದಸ್ಯರಾದ ಪಿ.ಎಚ್.ಪೂಜಾರ ಹಾಗೂ ಹನಮಂತ ನಿರಾಣಿ ಮಾತನಾಡಿ, ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ, ಕಾರ್ಯಕರ್ತರು ಪಕ್ಷದ ತತ್ವಗಳನ್ನು, ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರುಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಅವರು ಮಾತನಾಡಿ, ಪಕ್ಷದ ಸೈದ್ಧಾಂತಿಕ ಮೌಲ್ಯಗಳು, ಸಂಘಟನಾ ಚಾತುರ್ಯ ಹಾಗೂ ರಾಷ್ಟ್ರೀಯ ಚಿಂತನೆಗಳನ್ನು ತಳಮಟ್ಟದ ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಪ್ರಶಿಕ್ಷಣ ವರ್ಗಗಳು ಅತ್ಯಂತ ಮಹತ್ವದ ಪಾತ್ರವಹಿಸುತ್ತವೆ. ಏಕಾತ್ಮ ಮಾನವತಾವಾದದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟಿಸಲು ಈ ತರಬೇತಿಯು ಪ್ರೇರಣೆಯಾಗಲಿದೆ ಎಂದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ ಅವರು ಪ್ರಸ್ತಾವಿಕವಾಗಿ ಮಾತನಾಡಿದರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಟಿ.ಉಪಾಧ್ಯ, ರಾಜು ಮುದೇನೂರ, ರಾಜು ರೇವಣಕರ್. ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮುತ್ತಣ್ಣ ಬೇಣ್ಣೂರ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಭಾಗಿರಥಿ ಪಾಟೀಲ, ಲಕ್ಷ್ಮೀ ನಾರಾಯಣ ಕಾಸಟ್, ಸತ್ಯನಾರಾಯಣ ಹೆಮಾದ್ರಿ, ನಗರ ಮಂಡಲ ಅದ್ಯಕ್ಷ ಬಸವರಾಜ ಹುನಗುಂದ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೋಣ್ಣೂರ, ಪ್ರಶಿಕ್ಷಣ ವರ್ಗದ ಸಂಚಾಲಕರಾದ ಶಂಕರ ಹುನೂರ, ಮಲ್ಲೇಶ ವಿಜಾಪುರ, ಕಲ್ಲಪ್ಪ ಭಗವತಿ ಸೇರಿದಂತೆ ಗ್ರಾಮೀಣ ಹಾಗೂ ನಗರ ಮಂಡಲದ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ದೇಶದ ಸರ್ವಾಂಗೀಣ ಅಭಿವೃದ್ದಿಯೇ ಭಾರತೀಯ ಜನತಾ ಪಕ್ಷದ ಜನ್ಮವಾಗಿದ್ದು, ಪಕ್ಷಕ್ಕೆ ರಾಷ್ಟ್ರಭಕ್ತಿ ಹಾಗೂ ದೇಶ ಮೊದಲು ಎಂಬ ಧ್ಯೇಯೋದ್ದೇಶಗಳೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಶೂನ್ಯ ಆಡಳಿತದಿಂದ ಜನ ಬೇಸತ್ತಿದ್ದಾರೆ. ಮುಂದೆ ಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲಿದ್ದು, ರಾಜ್ಯದಲ್ಲಿ ಸರ್ಕಾರ ರಚಿಸಲಿದೆ.