- ಹರಿಹರದಲ್ಲಿ ಬಿ.ವೈ.ವಿಜಯೇಂದ್ರ ಹೇಳಿಕೆ । ಬಿಜೆಪಿ-ಜೆಡಿಎಸ್ ರೋಡ್ ಶೋ - - - ಕನ್ನಡಪ್ರಭ ವಾರ್ತೆ ಹರಿಹರ
ನಗರದಲ್ಲಿ ಗುರುವಾರ ಬಿಜೆಪಿ ಹಾಗೂ ಜೆಡಿಎಸ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ರೋಡ್ ಶೋ ನಡೆಸಿ ಮಾತನಾಡಿದ ಅವರು, ವಿಶ್ವ ಮೆಚ್ಚಿದ ನಾಯಕ ನರೇಂದ್ರ ಮೋದಿ ನೇತೃತ್ವದಲ್ಲಿ 10 ವರ್ಷ ಯಾವುದೇ ಕಪ್ಪು ಚುಕ್ಕೆಯಿಲ್ಲದೆ, ಭ್ರಷ್ಟಾಚಾರ ರಹಿತ ಆಡಳಿತ ನೀಡಿರುವ ಬಿಜೆಪಿ ಸರ್ಕಾರ ಭಾರತವನ್ನು ಜಗತ್ತಿನಲ್ಲೇ ಶಕ್ತಿಶಾಲಿ ರಾಷ್ಟ್ರವನ್ನಾಗಿಸಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಪರಿಣಾಮ ಕಾಂಗ್ರೆಸ್‌ಗೆ ಭಯ ಶುರುವಾಗಿದೆ. ದೇಶದ ಮುಂದಿನ ಭವಿಷ್ಯ ಉಜ್ವಲವಾಗಲಿ ಎನ್ನುವ ದೃಷ್ಠಿಯಿಂದ ಮಾಜಿ ಪ್ರದಾನ ಮಂತ್ರಿ ದೇವೆಗೌಡರು ಎನ್‌ಡಿಎ ಒಕ್ಕೂಟಕ್ಕೆ ಬೆಂಬಲ ನೀಡಿದ್ದಾರೆ. ಎನ್‌ಡಿಎ ರಾಜ್ಯದ ಎಲ್ಲ ೨೮ ಕ್ಷೇತ್ರಗಳನ್ನು ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಗ್ಯಾರಂಟಿ ಎಂದ ಅವರು ಒಬ್ಬರಿಂದ ಕ್ಕಿತ್ತುಕೊಂಡು ಇನ್ನೊಬ್ಬರಿಗೆ ಕೊಡಲು ಇವರೇ ಬೇಕಾ? ಇವರ ಗ್ಯಾರಂಟಿ ಯೋಜನೆಗಳಿಗೆ ₹೫೬ ಸಾವಿರ ಕೋಟಿ ಹಣ ಬೇಕು. ಇದೇನು ಅವರಪ್ಪನ ಮನೆಯಿಂದ ತರಲ್ಲ. ನಿಮ್ಮಿಂದಲೇ ತೆಗೆದುಕೊಂಡು, ನಿಮಗೆ ಕೊಡುತ್ತಾರೆ ಎಂದು ಆರೋಪ ಮಾಡಿದರು.
ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಮಾತನಾಡಿ, ದೇವೇಗೌಡರು ಎನ್‌ಡಿಎ ಒಕ್ಕೂಟಕ್ಕೆ ಬೆಂಬಲ ಘೋಷಣೆ ಮಾಡಿದ ಮರು ಕ್ಷಣದಿಂದಲೇ ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ದಾವಣಗೆರೆ ಸೇರಿದಂತೆ ರಾಜ್ಯ ೨೮ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲುವುದರಲ್ಲಿ ಅನುಮಾನವಿಲ್ಲ ಎಂದರು.
- - - -೨೫ ಎಚ್‌ಆರ್‌ಆರ್೨:
ಹರಿಹರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿದ್ದ ರೋಡ್ ಶೋ ನಲ್ಲಿ ಭಾಗವಹಿಸಿದ ಜನಸ್ತೋಮ.