ಕನ್ನಡಪ್ರಭ ವಾರ್ತೆ ಚಿತ್ತಾಪುರ
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ಹೆಮ್ಮೆಯ ಸುಪುತ್ರರಾಗಿರುವ ಹಿರಿಯ ಕಾಂಗ್ರೆಸ್ ಕಟ್ಟಾಳು ಡಾ, ಮಲ್ಲಿಕಾರ್ಜುನ ಖರ್ಗೆ ಅವರು ದೇಶವೇ ಮೆಚ್ಚುವಂತಹ ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದಾರೆ. ಇಂತಹ ರಾಜಕಾರಣಿಯ ವಿರುದ್ಧ ಡಾ. ಜಾಧವ ಅವರು ಸೋಲುವ ಭೀತಿಯಿಂದ ಸುಳ್ಳು ಆರೋಪ ಮಾಡುತ್ತಾ ಅವರ ವರ್ಚಸ್ಸಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ನನಗೆ ಅಧಿಕಾರದ ಆಸೆ, ನಮ್ಮ ಸಮಾಜವನ್ನು ಎಸ್ಟಿಗೆ ಸೇರಿಸುವುದೇ ಗುರಿಯಾಗಿದೆ. ಅದಕ್ಕಾಗಿ ನಾನು ಅಧಿಕಾರಕ್ಕೆ ಆಸೆ ಪಡದೇ ನನ್ನ ವಿಧಾನ ಪರಿಷತ್ ಸದಸ್ಯ ಸ್ಥಾನ, ಅಂಬಿಗರ ಚೌಡಯ್ಯ ನಿಗಮ ಅಧ್ಯಕ್ಷ ಸ್ಥಾನ, ಹಾಗೂ ನನ್ನ ಧರ್ಮಪತ್ನಿ ಅಮರೇಶ್ವರಿ ಚಿಂಚನಸೂರ ಅವರು ಕೇಂದ್ರ ಆಹಾರ ನಿಗಮದ ನಿರ್ದೇಶಕ ಸ್ಥಾನವನ್ನು ಧಿಕ್ಕರಿಸಿ ಬಿಜೆಪಿಗೆ ರಾಜಿನಾಮೆ ನೀಡಿದ್ದಾಗಿ ಹೇಳಿದರು.ಡಾ. ಉಮೇಶ ಜಾಧವ ಅವರು ಕಳೆದ ಐದು ವರ್ಷಗಳಲ್ಲಿ ಜಿಲ್ಲೆಗೆ ಯಾವುದೇ ಕೊಡುಗೆ ನೀಡಿಲ್ಲ. ಬರೀ ಸುಳ್ಳು ಭರವಸೆಗಳನ್ನು ನೀಡುತ್ತಾ ಡಾ. ಜಾಧವ ಹಾಗೂ ಅವರ ಪುತ್ರ ಅವಿನಾಶ ಜಾಧವ ಸ್ವಂತ ಅಭಿವೃದ್ಧಿ ಮಾಡಿಕೊಂಡು ಮತದಾರರಿಗೆ ಯಾವುದೇ ಸೌಲಭ್ಯವನ್ನು ಒದಗಿಸದೇ ಇರುವ ಕಾರಣ ಸೋಲಿನ ಭಯದಿಂದ ಈಗ ಚುನಾವಣೆಯಲ್ಲಿ ಮತ ಕೇಳಲು ನೈತಿಕತೆ ಇಲ್ಲದೇ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಡಾ.ಶರಣಪ್ರಕಾಶ ಪಾಟೀಲ್ ವಿರುದ್ಧ ಸುಳ್ಳು ಆರೊಪಗಳನ್ನು ಮಾಡುತ್ತಾ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದರು.
ಈಗ ಕೋಲಿ ಸಮಾಜವನ್ನು ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಹಾಗೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ. ಶರಣಪ್ರಕಾಶ ಪಾಟೀಲ್ ಅವರ ಮುಂದಾಳಾತ್ವದಲ್ಲಿ ಎಸ್.ಟಿ ಸೇರ್ಪಡೆ ಸೇರ್ಪಡೆ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ನನಗೆ ತಾಯಿ ತಂದೆ ಮಕ್ಕಳು ಮರಿಗಳು ಯಾರೂ ಇಲ್ಲಾ ನನ್ನ ಸಮಾಜವೇ ನನಗೆ ಎಲ್ಲಾ. ನಾನು ಹಾಗೂ ನನ್ನ ಧರ್ಮ ಪತ್ನಿಯವರು ಕೋಲಿ ಸಮಾಜವನ್ನು ಎಸ್.ಟಿಗೆ ಸೇರಿಸುವವರೆಗೂ ಸಾಯುವುದಿಲ್ಲಾ ಎಸ್.ಟಿ ಸೇರ್ಪಡೆ ನಂತರ ದಿ. ವಿಠಲ್ ಹೆರೂರ ಅವರ ಸಮಾಧಿಗೆ ಅರ್ಪಿಸಿ ಅವರ ಕೊನೆಯ ಆಸೆಯನ್ನು ಈಡೇರಿಸುತ್ತೇವೆ ಎಂದರು.ಕೋಲಿ ಸಮಾಜದ ಹಿರಿಯ ಮುಖಂಡ ಭೀಮಣ್ಣ ಸಾಲಿ, ತಾಲೂಕು ಕೋಲಿ ಸಮಾಜದ ಅಧ್ಯಕ್ಷ ರಾಮಲಿಂಗ ಬಾನರ್ ಸುದ್ದಿಗೋಷ್ಠಿಯಲ್ಲಿದ್ದರು.