ಕನ್ನಡಪ್ರಭ ವಾರ್ತೆ ಬೀದರ್
ಇಲ್ಲಿನ ಗಣೇಶ ಮೈದಾನದಲ್ಲಿ ಬುಧವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಪರವಾಗಿ ಪ್ರಜಾಧ್ವನಿ -02 ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
6 ಜನ ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಮೂಲಕ ಮಹಿಳೆಯರಿಗೆ ಆದ್ಯತೆ ನೀಡಿದ್ದಲ್ಲದೆ ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಮರಾಠಾ ಸಮುದಾಯದವರಿಗೆ ಟಿಕೆಟ್ ನೀಡುವ ಪ್ರಯತ್ನ ಮಾಡುವ ಮೂಲಕ ಸರ್ವರಿಗೂ ಸಮಪಾಲು ಸಮ ಬಾಳು ಆಗಬೇಕು ಎಂಬ ಕಳಕಳಿ ನಮ್ಮದು. ದೇಶದ ಎಲ್ಲರಿಗೂ ಅಧಿಕಾರದಲ್ಲಿ ಸಂಪತ್ತಿನಲ್ಲಿ ಪಾಲು ಸಿಗಬೇಕು. ಆಗ ಮಾತ್ರ ದೇಶದ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಹೊರತು ಕೆಲವೇ ಜನರ ಬಳಿ ಸಂಪತ್ತು ಹಾಗೂ ಅಧಿಕಾರ ಇದ್ದರೆ ಸಾಧ್ಯವಿಲ್ಲ ಎಂದರು.ಅಧಿಕಾರ ಹಾಗೂ ಸಂಪತ್ತು ಎಲ್ಲವೂ ಬಲಾಢ್ಯರ ಕೈಯಲ್ಲಿದ್ದರೆ ಶೋಷಣೆ ನಿಲ್ಲೋಲ್ಲ. ದೇಶಕ್ಕೆ ರಾಜಕೀಯ ಸ್ವಾತಂತ್ರ್ಯ ಸಿಕ್ಕಿದೆ. ಆದರೆ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ ಸಿಕ್ಕಿಲ್ಲ ಎಂದು ಅಂದೇ ಡಾ. ಬಿಆರ್ ಅಂಬೇಡ್ಕರ್ ಹೇಳಿದ್ದರು ಈ ನಿಟ್ಟಿನಲ್ಲಿ ಕಾಂಗ್ರೆಸ್ ಮಾತ್ರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಅದಕ್ಕೆ ಇಂದಿರಾ ಗಾಂಧಿ ಅವರ ಗರೀಬಿ ಹಠಾವೋ ಆಂದೋಲನ ಸಾಕ್ಷಿ ಎಂದು ತಿಳಿಸಿದರು.
ನರೇಂದ್ರ ಮೋದಿಯವರು 10 ವರ್ಷಗಳಲ್ಲಿ ನೀಡಿದ್ದ ಯಾವ ಭರವಸೆಗಳನ್ನು ಬಗೆಹರಿಸಿಲ್ಲ. ನಾವು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 165 ರಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೇ 30 ಹೊಸ ಯೋಜನೆಗಳನ್ನು ಜಾರಿ ಮಾಡಿದ್ದೇವೆ. 2023ರಲ್ಲಿ ನಮ್ಮ ಪ್ರಣಾಳಿಕೆಯಲ್ಲಿ ಅನೇಕ ಭರವಸೆ ನೀಡಿ, 82 ಭರವಸೆಗಳನ್ನು ಈಡೇರಿಸಿ 5 ಗ್ಯಾರಂಟಿಗಳನ್ನೂ ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಜಾರಿ ಮಾಡಿದ್ದೇವೆ ಎಂದರು.
ಕರ್ನಾಟಕದಲ್ಲಿ ಕಾಂಗ್ರೆಸ್‌ನ ಗ್ಯಾರಂಟಿಗಳನ್ನು ಅಪಹಾಸ್ಯ ಮಾಡಿ, ಗ್ಯಾರಂಟಿ ಯೋಜನೆಗಳು ಜಾರಿಯಾಗಲ್ಲ, ಜಾರಿಯಾದ್ರೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯಾಗುತ್ತದೆ ಎಂದವರು ಇದೀಗ ಮೋದಿ ಗ್ಯಾರಂಟಿ ಮೋದಿ ಗ್ಯಾರಂಟಿ ಎಂದು ಘೋಷಿಸುತ್ತ ಸಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆ ಆಗಲ್ವ ಎಂದು ಕಿಡಿ ಕಾರಿದರು.
ಯುವ ಜನಾಂಗಕ್ಕೆ ಮೂರು ನಾಮ ಹಾಕಿದ ಮೋದಿ:
ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಈಶ್ವರ ಖಂಡ್ರೆ, ರಹೀಮ್ ಖಾನ್, ಮುಖ್ಯಮಂತ್ರಿಗಳ ಸಲಹೆಗಾರರಾದ ಶಾಸಕ ಬಿಆರ್ ಪಾಟೀಲ್, ಮಾಜಿ ಸಚಿವ ರಾಜಶೇಖರ ಪಾಟೀಲ್, ಶಾಸಕರಾದ ಅಜಯ ಸಿಂಗ್, ಅಭ್ಯರ್ಥಿ ಸಾಗರ್ ಖಂಡ್ರೆ, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.