ಬಿಜೆಪಿ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ: ಜೋಶಿ

KannadaprabhaNewsNetwork |  
Published : Dec 04, 2023, 01:30 AM IST
ಪ್ರಹ್ಲಾದ ಜೋಶಿ. | Kannada Prabha

ಸಾರಾಂಶ

ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಪ್ರಧಾನಿ ಮೋದಿ ನೇತೃತ್ವದಲ್ಲಿ ನಾವು ಈ ಚುನಾವಣೆ ಗೆದ್ದಿದ್ದೇವೆ ಎಂದು ಹೇಳಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದಲ್ಲಿ ಜನತೆಯ ಆಶೀರ್ವಾದ ನಮಗೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಮತದಾರರು ಮನ್ನಣೆ ನೀಡಿದ್ದಾರೆ. ಈ ಯಶಸ್ಸಿನಿಂದಾಗಿ ಪಕ್ಷದ ಕಾರ್ಯಕರ್ತರ ಆತ್ಮವಿಶ್ವಾಸ ಇಮ್ಮಡಿಯಾಗಿದೆ. ಕಾಂಗ್ರೆಸಿನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಪ್ರಧಾನಿ ಮೋದಿ ನೇತೃತ್ವದಲ್ಲಿ ನಾವು ಈ ಚುನಾವಣೆ ಗೆದ್ದಿದ್ದೇವೆ ಎಂದು ಹೇಳಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದಲ್ಲಿ ಜನತೆಯ ಆಶೀರ್ವಾದ ನಮಗೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಮತದಾರರು ಮನ್ನಣೆ ನೀಡಿದ್ದಾರೆ. ಈ ಯಶಸ್ಸಿನಿಂದಾಗಿ ಪಕ್ಷದ ಕಾರ್ಯಕರ್ತರ ಆತ್ಮವಿಶ್ವಾಸ ಇಮ್ಮಡಿಯಾಗಿದೆ. ಕಾಂಗ್ರೆಸಿನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ನೆಲಕಚ್ಚಿದೆ. ಬಿಆರ್‌ಎಸ್ ದುರಾಡಳಿತದ ಪರಿಣಾಮ ಕಾಂಗ್ರೆಸ್ ಗೆಲ್ಲುವಂತಾಗಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ದುರಾಡಳಿತ ಬಗ್ಗೆ ಜನರಿಗೆ ತಿಳಿಸಿದ್ದೆವು. ಮಧ್ಯಪ್ರದೇಶದಲ್ಲಿ ಡಬಲ್ ಎಂಜಿನ್ ಸರ್ಕಾರ ಕೆಲಸ ಮಾಡಿದೆ ಎಂದಿದ್ದಾರೆ.

ಮಧ್ಯಪ್ರದೇಶದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ. ರಾಜಸ್ಥಾನದಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಜಯಭೇರಿ ಬಾರಿಸಿದೆ. ಛತ್ತೀಸ್‌ಗಢದಲ್ಲಿ ಕೂಡ ಬಿಜೆಪಿ ಅದ್ಬುತ ಗೆಲುವು ದಾಖಲಿಸಿದೆ. ತೆಲಂಗಾಣದಲ್ಲಿ ಕಳೆದ ಬಾರಿ ಬಿಜೆಪಿ ಕೇವಲ ಒಂದು ಸ್ಥಾನ ಗೆದ್ದಿದೆ. ಆದರೆ, ಈ ಬಾರಿ ಅಲ್ಲಿಂದ ಎರಡಂಕಿಗೆ ಹೋಗಿದ್ದೇವೆ. ಇದರಿಂದ ಪ್ರಧಾನಿ ಮೋದಿ ಮೇಲಿನ ಜನರ ನಂಬಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಸ್ಪಷ್ಟಪಡಿಸುತ್ತದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓರಿಯನ್‌ ಧರೆಗಿಳಿಯೋದು ಹೇಗೆ ?
ಗೃಹಲಕ್ಷ್ಮೀ ಹಣ ಸಾಲದ ಕಂತಿಗೆ ಕಡಿತ ಮಾಡಂಗಿಲ್ಲ : ಸಿಎಂ