ನೆಲಮಂಗಲ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿರುವ ಹಿನ್ನೆಲೆಯಲ್ಲಿ ತಾಲೂಕು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಸಮಾವೇಶಗೊಂಡ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಾಧಿಸಿರುವ ಹಿನ್ನೆಲೆಯಲ್ಲಿ ತಾಲೂಕು ಕಚೇರಿಯಿಂದ ನಗರದ ಬಸ್ ನಿಲ್ದಾಣವರೆಗೂ ಮೆರವಣಿಗೆ ಮಾಡಿ ಪಟಾಕಿ ಸಿಡಿಸಿ ಬಳಿಕ ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಾಚರಿಸಿದರು.ಕುಣಿದು ಕುಪ್ಪಳಿಸಿದ ಮುಖಂಡರು: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ದೆಹಲಿ ಅಧಿಕಾರ ಗದ್ದುಗೆ ಹಿಡಿದಿರುವ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತ ತಮಟೆ ಸದ್ದಿಗೆ ಕುಳಿದು ಕುಪ್ಪಳಿಸಿದರು. ಬಳಿಕ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.
ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಮಾತಮಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಸುಳ್ಳು, ಭ್ರಷ್ಟಾಚಾರ ಮತ್ತು ದೇಶ ಒಡೆಯುವ ಕೆಲಸ ಹಳೆಯ ಸರ್ಕಾರದ್ದಾಗಿತ್ತು. ಅವರಿಗೆ ದೆಹಲಿ ಜನತೆ ತಕ್ಕ ಉತ್ತರ ನೀಡಿದ್ದಾರೆ. ದೆಹಲಿ ಫಲಿತಾಂಶ ರಾಷ್ಟ್ರದಲ್ಲೇ ಬಿಜೆಪಿ ಶಕ್ತಿಯನ್ನು ಮತ್ತೊಮ್ಮೆ ಎತ್ತಿ ತೊರಿಸಿದೆ ಎಂದು ಹೇಳಿದರು.ಬಿಜೆಪಿ ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷೆ ಮಂಜುಳಾಸುರೇಶ್ ಮಾತನಾಡಿ, ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಪಕ್ಷ ಎರಡು ದಶಕಗಳ ಬಳಿಕ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದು ಸಂತಸ ತಂದಿದೆ. ಬಿಜೆಪಿಯ ಜರಪರ ಯೋಜನೆಗಳನ್ನು ರಾಜ್ಯದ ಜನತೆ ಅರ್ಥೈಸಿಕೊಳ್ಳಬೇಕಿದೆ. ಮುಂಬರುವ ಬಹುತೇಕ ಚುನಾವಣೆಗಳಲ್ಲಿ ಬಿಜೆಪಿ ಪಕ್ಷ ಅಧಿಕಾರ ವಹಿಸಿಕೊಳ್ಳಲಿದೆ ಎಂದು ಭವಿಷ್ಯ ನುಡಿದರು.
ಈ ಸಂದರ್ಭದಲ್ಲಿ ನೆ.ಯೋ. ಪ್ರಾಧಿಕಾರ ಮಾಜಿ ಅಧ್ಯಕ್ಷ ಎಸ್.ಮಲ್ಲಯ್ಯ, ನಗರಸಭೆ ಹೆಚ್ಚುವರಿ ಸದಸ್ಯ ಮುನಿರಾಜು, ಅಂಜನಮೂರ್ತಿ, ರಾಮಮೂರ್ತಿ, ಬಿಜೆಪಿ ಜಿಲ್ಲಾ ಸಾಮಾಜಿಕ ತಾಣದ ಸಂಚಾಲಕ ಮಂಜುನಾಥ್, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ್, ಉಪಾದ್ಯಕ್ಷ ರಾಜಶೇಖರ್ ಮುಖಂಡ ರಮೇಶ್, ರಾಜಮ್ಮಪ್ರಕಾಶ್, ವೇದಾವತಿ, ಸೌಮ್ಯ ಮತ್ತಿತರರು ಉಪಸ್ಥಿತರಿದ್ದರು.ಪೊಟೊ 8 ಕೆ ಎನ್ ಎಲ್ ಎಮ್ 1-
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿರುವ ಹಿನ್ನೆಲೆಯಲ್ಲಿ ನೆಲಮಂಗಲದ ಬಸ್ ನಿಲ್ದಾಣ ಬಳಿ ತಾಲೂಕು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.