ಬಿಜೆಪಿಯಿಂದ ಅಶಾಂತಿಗೆ ಪ್ರೇರಣೆ: ಎಂ.ಸಿ. ವೇಣುಗೋಪಾಲ್‌

KannadaprabhaNewsNetwork |  
Published : Jun 19, 2025, 12:35 AM IST
ಸಮಾಲೋಚನಾ ಸಭೆಯಲ್ಲಿ ಮಾತನಾಡುತ್ತಿರುವ ಎಂ.ಸಿ. ವೇಣುಗೋಪಾಲ್‌. | Kannada Prabha

ಸಾರಾಂಶ

ದ.ಕ. ಜಿಲ್ಲೆಯಲ್ಲಿ ಬಿಜೆಪಿ ಸದಾ ಅಶಾಂತಿಗೆ ಪ್ರೇರಣೆ ನೀಡುತ್ತಾ ಬಂದಿದ್ದು, ಸುಳ್ಳುನ್ನು ಸತ್ಯವೆಂದು ಬಿಂಬಿಸಿ ಜನರಲ್ಲಿ ಅಪನಂಬಿಕೆ ಸೃಷ್ಟಿಸಿದೆ. ಜಿಲ್ಲೆಯ ಶಾಂತಿ ಸೌಹಾರ್ದತೆ ಮರುಸ್ಥಾಪನೆಗೆ ಸರ್ಕಾರದ ಗಮನ ಸೆಳೆಯುವುದಾಗಿ ಕೆಪಿಸಿಸಿ ಉಪಾಧ್ಯಕ್ಷ, ದ.ಕ. ಜಿಲ್ಲಾ ಕೆಪಿಸಿಸಿ ಉಸ್ತುವಾರಿ ಎಂ.ಸಿ. ವೇಣುಗೋಪಾಲ್ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ದ.ಕ. ಜಿಲ್ಲೆಯಲ್ಲಿ ಬಿಜೆಪಿ ಸದಾ ಅಶಾಂತಿಗೆ ಪ್ರೇರಣೆ ನೀಡುತ್ತಾ ಬಂದಿದ್ದು, ಸುಳ್ಳುನ್ನು ಸತ್ಯವೆಂದು ಬಿಂಬಿಸಿ ಜನರಲ್ಲಿ ಅಪನಂಬಿಕೆ ಸೃಷ್ಟಿಸಿದೆ. ಜಿಲ್ಲೆಯ ಶಾಂತಿ ಸೌಹಾರ್ದತೆ ಮರುಸ್ಥಾಪನೆಗೆ ಸರ್ಕಾರದ ಗಮನ ಸೆಳೆಯುವುದಾಗಿ ಕೆಪಿಸಿಸಿ ಉಪಾಧ್ಯಕ್ಷ, ದ.ಕ. ಜಿಲ್ಲಾ ಕೆಪಿಸಿಸಿ ಉಸ್ತುವಾರಿ ಎಂ.ಸಿ. ವೇಣುಗೋಪಾಲ್ ಹೇಳಿದ್ದಾರೆ.

ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳ ಕುರಿತು ಇತ್ತೀಚೆಗೆ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಹಿರಿಯ ನಾಯಕರು, ವಿವಿಧ ಪದಾಧಿಕಾರಿಗಳನ್ನು ಭೇಟಿಯಾಗಿ ಅವರು ಸಮಾಲೋಚನೆ ನಡೆಸಿದರು.

ದ.ಕ. ಜಿಲ್ಲೆ ಶಾಂತಿ ಸೌಹಾರ್ದತೆಯ ಜಿಲ್ಲೆಯಾಗಿದ್ದು, ಶಿಕ್ಷಣ, ವೈದ್ಯಕೀಯ ಮತ್ತು ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ವಿಶ್ವವಿಖ್ಯಾತಿ ಪಡೆದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಅಪರಾಧ ಕಾರಣಗಳಿಗಾಗಿ ಗುರುತಿಸುತ್ತಿರುವುದು ವಿಪರ್ಯಾಸ. ಇಲ್ಲಿನ ಜನರು ಬುದ್ಧಿವಂತಿಕೆಯನ್ನು ಕೋಮು ಸಂಘರ್ಷಕ್ಕೆ ಉಪಯೋಗಿಸಿಕೊಳ್ಳಬಾರದು. ಸಮಾಜವನ್ನು ಒಟ್ಟಿಗೆ ಕೊಂಡೊಯ್ಯುವ ಪ್ರಯತ್ನ ಮಾಡಿದರೆ ಇಲ್ಲಿ ಬದಲಾವಣೆ ಸಾಧ್ಯ ಎಂದರು.

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ ಬಾವ, ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಮುಂಚೂಣಿ ಘಟಕಾಧ್ಯಕ್ಷ ಮನೋರಾಜ್ ರಾಜೀವ ಮಾತನಾಡಿ, ಕೋಮು ಹಿಂಸೆ ತಡೆಗೆ ನಿರ್ಣಾಯಕ ಕ್ರಮಗಳನ್ನು ಸರ್ಕಾರ ಯಾವ ರೀತಿ ಕೈಗೊಳ್ಳಬೇಕು ಎನ್ನುವ ಬಗ್ಗೆ ಸಲಹೆ ನೀಡಿದರು.

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರ್, ಬ್ಲಾಕ್ ಅಧ್ಯಕ್ಷರಾದ ಜೆ.ಅಬ್ದುಲ್ ಸಲೀಂ, ಸುರೇಂದ್ರ ಕಂಬಳಿ, ರಮೇಶ್ ಶೆಟ್ಟಿ, ಮಾಜಿ ಮೇಯರಾದ ಹರಿನಾಥ್ ಜೋಗಿ, ಕೆ.ಅಶ್ರಫ್, ಡಿಸಿಸಿ ಉಪಾಧ್ಯಕ್ಷರಾದ ಅಬೂಬಕ್ಕರ್ ಕುದ್ರೋಳಿ, ಶುಭೋದಯ ಆಳ್ವ, ನೀರಜ್ ಚಂದ್ರಪಾಲ್, ಟಿ.ಹೊನ್ನಯ್ಯ ಮುಖಂಡರಾದ ಪಿಯೂಸ್ ರೋಡ್ರಿಗಸ್, ಬೇಬಿ ಕುಂದರ್, ನವೀನ್ ಡಿಸೋಜ, ಜಯಶೀಲ ಅಡ್ಯಂತಾಯ, ಟಿ.ಕೆ.ಸುಧೀರ್, ಎಂ.ಪಿ.ಮನುರಾಜ್, ಕೆ.ಅಪ್ಪಿ, ಜೀತೇಂದ್ರ ಸುವರ್ಣ, ಭರತೇಶ್ ಅಮೀನ್, ಯೋಗೀಶ್ ಕುಮಾರ್, ಗಣೇಶ್ ಪೂಜಾರಿ, ಕಿರಣ್ ಬುಡ್ಲೆಗುತ್ತು, ಸುರೇಶ್ ಪೂಜಾರಿ, ಕವಿತ ವಾಸು, ಯಶವಂತ ಪ್ರಭು ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ