ಸೊರಬ: ದೇಶಕ್ಕೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಲ್ಪಿಸಿದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರನ್ನು ಬಿಜೆಪಿ ನಿತ್ಯ ಹತ್ಯೆ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಆರೋಪಿಸಿದರು.ತಾಲೂಕಿನ ಮಾವಲಿ ಗ್ರಾಪಂ ವ್ಯಾಪ್ತಿಯ ಜಿರಲೆಕಪ್ಪ ಗ್ರಾಮದಲ್ಲಿ ಆರೇಕೊಪ್ಪ ಗ್ರಾಮ ರಸ್ತೆಯಿಂದ ಜಿರಲೆಕೊಪ್ಪಕ್ಕೆ ಸಾಗುವ ೭೦ ಲಕ್ಷ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.ದೇಶದಲ್ಲಿ ಶಾಂತಿ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾತ್ಮ ಗಾಂಧೀಜಿಯವರ ಹೆಸರಿನಲ್ಲಿ ಜಾರಿಗೆ ತಂದ ಮನರೇಗಾ ಯೋಜನೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಿರಾಮ್ ಜಿ ಎಂದು ಬದಲಾವಣೆ ಮಾಡಿರುವುದು ಖಂಡನೀಯ. ಈ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು ಮತ್ತು ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ತಾಪಂ ಮಾಜಿ ಅಧ್ಯಕ್ಷ ಎಚ್.ಗಣಪತಿ ಹುಲ್ತಿಕೊಪ್ಪ, ಬಗರ್‌ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ.ಶೇಖರ್, ತಾಪಂ ಮಾಜಿ ಸದಸ್ಯ ನಾಗರಾಜ್ ಚಿಕ್ಕಸವಿ, ಕೆಡಿಪಿ ಸದಸ್ಯ ಸುರೇಶ್ ಬಿಳವಾಣಿ, ಗ್ಯಾರಂಟಿ ಜಿಲ್ಲಾ ಸದಸ್ಯ ಪ್ರಭಾಕರ ಶಿಗ್ಗಾ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜಿ.ಶಶಿಧರ, ಶಿವಕುಮಾರ್, ಶ್ರೀನಿವಾಸ್, ದೇವೇಂದ್ರಪ್ಪ, ಬಂಗಾರಪ್ಪ, ಬಸವೇಶ್ವರ್, ಪಂಚಾಕ್ಷರಿ ಇತರರಿದ್ದರು.