ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಸರ್ಕಾರದ 5 ಐತಿಹಾಸಿಕ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳುಗಳನ್ನು ಉತ್ಪಾದಿಸುತ್ತ ಅಲೆಯುತ್ತಿದ್ದಾರೆ. ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು, ಇಷ್ಟೆಲ್ಲ ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಐದೂ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ. ಕಾಂಗ್ರೆಸ್‌ನವರು ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ. ಒಂದು ವೇಳೆ ಹಾಗೇನಾದರೂ ಮಾಡಿದರೇ ಸರ್ಕಾರ ಸಂಪೂರ್ಣ ದಿವಾಳಿಯಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಎಲ್ಲ ಬಿಜೆಪಿಯವರು ಹೇಳುತ್ತಿದ್ದಾರೆ. ಹಾಗಾದರೇ ನಮ್ಮ ಸರ್ಕಾರ ಏಕೆ ದಿವಾಳಿಯಾಗಿಲ್ಲ? ನಮ್ಮ ಕಾಂಗ್ರೆಸ್ ಸರ್ಕಾರದ ಜನರ ಯೋಜನೆಗಳನ್ನು ಸಹಿಸಿಕೊಳ್ಳಲು ಆಗದೇ ಹೀಗೆ ಹೇಳಿ ಜನರ ದಾರಿ ತಪ್ಪಿಸುವ ಕಾರ್ಯದಲ್ಲಿ ಬಿಜೆಪಿಯವರು ತೊಡಗಿದ್ದಾರೆ ಎಂದು ದೂರಿದರು.ನಾನು ಬಸವಾದಿ ಶರಣರ ಅನುಯಾಯಿ. ಮೌಢ್ಯ, ಕಂದಾಚಾರ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನ ಕ್ರಾಂತಿ ಆರಂಭಿಸಿದ್ದರಿಂದ ನಾನು ಅವರ ಅನುಯಾಯಿ. ದುಡಿಯುವವರು ಯಾರೋ, ದುಡಿದು ತಿನ್ನುವವರು ಇನ್ಯಾರೋ ಎನ್ನುವ ಪರಿಸ್ಥಿತಿ ಸಮಾಜದಲ್ಲಿತ್ತು. ಈ ತಾರತಮ್ಯ ಮತ್ತು ಮೇಲು-ಕೀಳು ಹೋಗಲಾಡಿಸಲು ಬಸವಣ್ಣರ ನೇತೃತ್ವದಲ್ಲಿ ವಚನ ಕ್ರಾಂತಿ ಶುರು ಆಯಿತು. ಈ ಕಾರಣಕ್ಕೆ ನಾನು ಬಸವಾದಿ ಶರಣರ ಅನುಯಾಯಿ. ಇವರು ಕರ್ಮ ಸಿದ್ಧಾಂತವನ್ನು ಸಂಪೂರ್ಣ ತಿರಸ್ಕರಿಸಿತು ಎಂದು ತಿಳಿಸಿದರು.
ಮಾ.20 ರಂದು ನಾನು ಮುದ್ದೇಬಿಹಾಳ ಚುನಾವಣಾ ಪ್ರಚಾರಕ್ಕೆ ಬಂದಿದ್ದೆ. ಅವತ್ತು ನಾನು ಮುದ್ದೇಬಿಹಾಳದಲ್ಲಿ ಕೊಟ್ಟ ಮಾತಿನಂತೆ ಎಲ್ಲಾ ಗ್ಯಾರಂಟಿಗಳನ್ನೂ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ನಾನು ಕೊಟ್ಟಿದ್ದ ಎಲ್ಲ ಭರವಸೆಗಳನ್ನೂ ಈಡೇರಿಸಿ ನುಡಿದಂತೆ ನಡೆದಿದ್ದೇವೆ. ಈಗಲೂ ಅಷ್ಟೇ. ಬಸವಾದಿ ಶರಣರು ನುಡಿದಂತೆ ನಡೆದರು. ನಾವೂ ಬಸವಾದಿ ಶರಣರ ಮಾರ್ಗದಲ್ಲಿ ನಡೆಯುತ್ತಿದ್ದೇವೆ ಎಂದು ವಿವರಿಸಿದರು.
ಶರಣ ಶ್ರೇಷ್ಠ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 12 ಮಂದಿ ಶರಣ ಸ್ವಾಮೀಜಿಗಳು ವೇದಿಕೆಯಲ್ಲೇ ಅಭಿನಂದಿಸಿ, ಸನ್ಮಾನಿಸಿ ಆಶೀರ್ವದಿಸಿದರು.
----------
ಕಾರ್ಯಕ್ರಮದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರನ್ನು ಮುದ್ದೇಬಿಹಾಳ ಪುರಸಭೆ ವತಿಯಿಂದ ಬೆಳ್ಳಿ ಕಿರೀಟ ತೊಡಿಸಿ, ಬೃಹತ್ ಹಾರಿ ಹಾಕಿ ಸನ್ಮಾನಿಸಲಾಯಿತು. ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಪುರಸಭೆ ಸದಸ್ಯರಾದ ಮೈಬೂಬ ಗೊಳಸಂಗಿ, ಯಲ್ಲಪ್ಪ ನಾಯಕಮಕ್ಕಳ, ಶಾಹಾಜಾದಬಿ ಹುಣಸಗಿ, ಪ್ರತಿಭಾ ಅಂಗಡಗೇರಿ, ರೀಯಾಜಹಮ್ಮದ ಢವಳಗಿ, ವಿರೇಶ ಹಡಲಗೇರಿ, ಪ್ರೀತಿ ದೇಗಿನಾಳ, ಭಾರತಿ ಪಾಟೀಲ ಸೇರಿದಂತೆ ಹಲವರು ಇದ್ದರು.
ಸರೂರಿನ ಶ್ರೀ ರೇವಣಸಿದ್ದೇಶ್ವರ ಮಠಕ್ಕೆ ಸಿಎಂ ಭೇಟಿ
--------
ಕವಡಿಮಟ್ಟಿ ರಾಯಣ್ಣ ಮೂರ್ತಿಗೆ ಪುಷ್ಪಾರ್ಪಣೆಸರೂರಿನಲ್ಲಿ ಶ್ರೀ ರೇವಣೇಶ್ವರ ದೇವಸ್ಥಾನದಲ್ಲಿ ದರ್ಶನ ಪಡೆದುಕೊಂಡ ನಂತರ ಅವರು ಕವಡಿಮಟ್ಟಿ ಗ್ರಾಮಕ್ಕೆ ಭೇಟಿ ನೀಡಿದರು. ಈ ವೇಳೆ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕಿತ್ತೂರು ಚನ್ನಮ್ಮನ ಆಸ್ಥಾನದಲ್ಲಿದ್ದ ರಾಯಣ್ಣ ಅವರು, ಬ್ರಿಟಿಷರ ವಿರುದ್ಧ ಹೋರಾಟ ಮಾಡಿದವರು. ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಅಪ್ರತಿಮ ದೇಶಭಕ್ತರಾಗಿದ್ದರು. ರಾಯಣ್ಣನ ಆದರ್ಶಗಳು, ದೇಶಭಕ್ತಿ, ಸ್ವಾತಂತ್ರ್ಯ ಪ್ರೇಮ ಇಂದಿನ ಯುವಕರಿಗೆ ಆದರ್ಶವಾಗಲಿ ಎಂದು ಆಶಿಸುವೆ. ಇದುವೆ ನಾವು ಅವರಿಗೆ ಅರ್ಪಿಸುವ ನೈಜ ನಮನಗಳು. ಅವರ ತತ್ವ, ಆದರ್ಶಗಳು ಎಂದಿಗೂ ಚಿರಾಯುವಾಗಿವೆ. ಹೀಗಾಗಿ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರವು ಬೈಲಹೊಂಗಲ ತಾಲೂಕಿನಲ್ಲಿ 100 ಎಕರೆ ಪ್ರದೇಶದಲ್ಲಿ ಸೈನಿಕ ಶಾಲೆಯನ್ನು ನಿರ್ಮಿಸಿದೆ ಎಂದು ಹೇಳಿದರು.
-------ಅಪ್ಪಾಜಿ ನಾಡಗೌಡರು ಅತ್ಯಂತ ಹಿರಿಯ, ಸಭ್ಯ ರಾಜಕಾರಣಿ. ಅವರಿಗೆ ಸಚಿವರಾಗುವ ಅರ್ಹತೆ, ಅನುಭವ ಎರಡೂ ಇದೆ. ಮಂತ್ರಿಯಾಗುವ ಎಲ್ಲ ಅರ್ಹತೆಯನ್ನು ಹೊಂದಿದ್ದಾರೆ. ಆದರೆ, ಕಾರಣಾಂತರದಿಂದ ಮಾಡಲಾಗಿಲ್ಲ. ಕಾರಣ ಅವರಿಗೆ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರನ್ನಾಗಿ ಮಾಡಿ ಪಕ್ಷ ಗೌರವಿಸುವ ಕಾರ್ಯ ಮಾಡಿದೆ. ಒಂದೇ ದಿನ ₹227 ಕೋಟಿ ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮಾಡಿದ್ದೇವೆ. ನಾಡಗೌಡರ ಕಾರಣದಿಂದ ಮುದ್ದೇಬಿಹಾಳ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದೆ.
- ಸಿದ್ದರಾಮಯ್ಯ, ಮುಖ್ಯಮಂತ್ರಿಗಳು.