ಯಲಬುರ್ಗಾ: ದೇಶದಲ್ಲಿ ಬಿಜೆಪಿ ಪಕ್ಷದಿಂದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿ ಕೆಲಸ ನಡೆಯುತ್ತಿದೆ. ಇದಕ್ಕೆ ಮತದಾನದ ಮೂಲಕ ತಕ್ಕ ಪಾಠ ಕಲಿಸಬೇಕು. ಯಾವುದೇ ಕಾರಣಕ್ಕೂ ಅರ್ಹ ಮತದಾರರು ಪಟ್ಟಿಯಿಂದ ಕೈಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದರು.
ದೇಶದ ನಾನಾ ರಾಜ್ಯಗಳಲ್ಲಿ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಮೂಲಕ ಕೋಟ್ಯಂತರ ಮತದಾರರನ್ನು ತೆಗೆದು ಹಾಕಿದ್ದಾರೆ. ಬಿಜೆಪಿ ಸರ್ಕಾರ ಚುನಾವಣಾ ಆಯೋಗವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿರುವುದು ಸಂವಿಧಾನಕ್ಕೆ ಮಾಡುವ ಅಪಮಾನವಾಗಿದೆ. ಬಿಎಲ್ಎ ೨ಗಳು ತಮ್ಮ ತಮ್ಮ ಬೂತ್ ಮತಗಟ್ಟೆಯಲ್ಲಿ ಅರ್ಹ ಮತದಾರರನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು. ಈ ಬಗ್ಗೆ ದೇಶದ ಎಲ್ಲ ಕಡೆ ಕಾಂಗ್ರೆಸ್‌ನಿಂದ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಬೂತ್ ಏಜೆಂಟರ ಪ್ರಮುಖ ಕೆಲಸ ಬಿಇಒಗಳಿಗೆ ಸರಿಯಾಗಿ ಮಾಹಿತಿ ನೀಡಿ ಮತದಾರರನ್ನು ಪಟ್ಟಿಯಲ್ಲಿ ಉಳಿಯವ ಕೆಲಸ ಮಾಡಬೇಕು. ಅಲ್ಲದೇ ಮ್ಯಾಪಿಂಗ್ ಸಂದರ್ಭದಲ್ಲಿ ಬಹಳ ಎಚ್ಚರಿಕೆ ವಹಿಸಬೇಕು ಎಂದರು.
ಮರಣ ಹೊಂದಿದವರು, ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಇರುವವರನ್ನು ತೆಗೆಯಲು ನಮ್ಮದು ಅಭ್ಯಂತರವಿಲ್ಲ. ಪಟ್ಟಿಯಲ್ಲಿ ಅರ್ಹರಾಗಿದ್ದವರನ್ನು ತೆಗೆಯುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಯಲಬುರ್ಗಾ ಕ್ಷೇತ್ರದ ಬಿಎಲ್ಎಗಳು ಅರ್ಹ ಮತದಾರರನ್ನು ಪಟ್ಟಿಯಲ್ಲಿ ಇರುವಂತೆ ಮಾಡಬೇಕು ಎಂದು ಸಲಹೆ ನೀಡಿದರು.ಕೆಪಿಸಿಸಿ ಉಪಾಧ್ಯಕ್ಷ ಜಾನ್ ನೆಲಸ್ಲಿ, ಕಾರ್ಯದರ್ಶಿಗಳಾದ ಶೈಲಜಾ ಹಿರೇಮಠ, ಗಿರೀಶ
ಕಾರ್ಡ್ ವಿತರಣೆ: ಕ್ಷೇತ್ರದ ಬಿಎಲ್ಎ ೨ಗಳಿಗೆ ಪಕ್ಷದಿಂದ ಐಡಿ ಕಾರ್ಡ್, ಪ್ರಮಾಣ ಪತ್ರವನ್ನು ಜಿಲ್ಲಾಧ್ಯಕ್ಷರು ವಿತರಿಸಿದರು.