ಜಾತಿ ರಾಜಕಾರಣ ಮಾಡುವುದರಲ್ಲಿ ಬಿಜೆಪಿಯವರು ಮಗ್ನ

KannadaprabhaNewsNetwork |  
Published : Apr 30, 2024, 02:08 AM IST
ಚಿಕ್ಕೋಡಿ ತಾಲೂಕಿನ ಕಬ್ಬೂರನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಕೆಪಿಸಿಸಿ ವಕ್ತಾರೆ ತೇಜಸ್ವಿನಿಗೌಡ ಅವರು ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಪ್ರಚಾರ ಮಾಡಿದರು | Kannada Prabha

ಸಾರಾಂಶ

ಜಾತಿ ರಾಜಕಾರಣ ಮಾಡುವುದರಲ್ಲಿ ಬಿಜೆಪಿಯವರು ಮಗ್ನರಾಗಿದ್ದಾರೆ. ಇದರಿಂದ ದೇಶದ ಆರ್ಥಿಕ ವ್ಯವಸ್ಥೆಗೆ ತೀವ್ರ ಹೊಡೆತ ಬೀಳುತ್ತಿದೆ. ದೇಶದ ಪ್ರಗತಿಗೆ, ಅಭಿವೃದ್ಧಿಗೆ ಆದ್ಯತೆ ನೀಡುವ ಕಾಂಗ್ರೆಸ್‌ಗೆ ಮತದಾರರು ಆಶೀರ್ವಾದ ಮಾಡಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಬಹುಮತ ಅಂತರದಿಂದ ಗೆಲ್ಲಿಸಿ ಎಂದು ಕೆಪಿಸಿಸಿ ವಕ್ತಾರೆ ಡಾ.ತೇಜಸ್ವಿನಿಗೌಡ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿಜಾತಿ ರಾಜಕಾರಣ ಮಾಡುವುದರಲ್ಲಿ ಬಿಜೆಪಿಯವರು ಮಗ್ನರಾಗಿದ್ದಾರೆ. ಇದರಿಂದ ದೇಶದ ಆರ್ಥಿಕ ವ್ಯವಸ್ಥೆಗೆ ತೀವ್ರ ಹೊಡೆತ ಬೀಳುತ್ತಿದೆ. ದೇಶದ ಪ್ರಗತಿಗೆ, ಅಭಿವೃದ್ಧಿಗೆ ಆದ್ಯತೆ ನೀಡುವ ಕಾಂಗ್ರೆಸ್‌ಗೆ ಮತದಾರರು ಆಶೀರ್ವಾದ ಮಾಡಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಬಹುಮತ ಅಂತರದಿಂದ ಗೆಲ್ಲಿಸಿ ಎಂದು ಕೆಪಿಸಿಸಿ ವಕ್ತಾರೆ ಡಾ.ತೇಜಸ್ವಿನಿಗೌಡ ಮನವಿ ಮಾಡಿದರು.

ತಾಲೂಕಿನ ಕಬ್ಬೂರ ಪಟ್ಟಣ ಪಂಚಾಯತಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಮತಯಾಚಿಸಿ ಮಾತನಾಡಿದ ಅವರು, ಚಿಕ್ಕೋಡಿ ಭಾಗದಲ್ಲಿ ಯುವನಾಯಕಿಗೆ ಇಷ್ಟೊಂದು ಅಪಾರ ಬೆಂಬಲ ನೋಡಿ ತುಂಬಾ ಖುಷಿಯಾಗಿದೆ. ಮತದಾರರು ಇನ್ನೂ ಹೆಚ್ಚಿನ ಮಟ್ಟದಲ್ಲಿ ಪ್ರಿಯಾಂಕಾ ಗೆಲುವಿಗೆ ಶಕ್ತಿ ತುಂಬಿ. ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಚುನಾವಣೆಗೆ ನಿಲ್ಲಿಸಿರೋದೆ ಗೆಲ್ಲಿಸೋದಕ್ಕಾಗಿ, ಆ ಗೆಲುವು ಬಹುಮತ ಅಂತರ ಗೆಲುವು ಆಗಿರಬೇಕು ಎಂದು ಕೋರಿದರು.

ಕೇಂದ್ರಕ್ಕೆ ₹18 ಸಾವಿರ ಕೋಟಿ ಕೇಳಿದರೇ ಕೇಂದ್ರ ಸರ್ಕಾರದ ₹3,500 ಕೋಟಿ ಅನುದಾನ ನೀಡಿದೆ. ಇವನ್ನೆಲ್ಲ ಪ್ರಶ್ನೆ ಮಾಡಬೇಕಾದರೆ ಅಣ್ಣಾಸಾಹೇಬ್ ಜೊಲ್ಲೆ ಅವರಂತವರನ್ನು ಆಯ್ಕೆಮಾಡಿದರೇ ಪ್ರಯೋಜವಿಲ್ಲ. ನಿಮ್ಮ ಪರ ಧ್ವನಿ ಎತ್ತುವ, ಹಗಲಿರುಳು ದುಡಿಯುವ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಗೆಲ್ಲಿಸಿ ಎಂದು ವಿನಂತಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಕಾಂಗ್ರೆಸ್ ಪಕ್ಷವನ್ನೇ ಬೆಂಬಲಿಸಿ. ಸ್ವಾತಂತ್ರ್ಯ ಪೂರ್ವದಿಂದಲೂ ಕಾಂಗ್ರೆಸ್ ಪಕ್ಷ ದೇಶಕ್ಕೆ ಅಪಾರ ಕೊಡುಗೆ ನೀಡಿದೆ. ಕ್ಷೇತ್ರದ ಅಭಿವೃದ್ಧಿ ಜತೆಗೆ ನಿಮ್ಮ ಕುಂದು-ಕೊರತೆಗಳನ್ನು ನಿವಾರಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಭರವಸೆ ನೀಡಿದರು.

ಕೇಂದ್ರದಲ್ಲೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೇ 25 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು. ಮಹಿಳೆಯರಿಗೆ ₹1 ಲಕ್ಷ ಮನೆಗೆ ಬರುವುದು, ಮತಪ್ರಭು ಯೋಚನೆ ಮಾಡಿ ನಿಮ್ಮ ಹಕ್ಕನ್ನು ಚಲಾಯಿಸಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿರುವ ನಿಮ್ಮ ಮನೆ ಮಗಳನ್ನು ಬೆಂಬಲಿಸಿ ಎಂದು ಕೋರಿದರು.

ಕಾಂಗ್ರೆಸ್‌ ಮುಖಂಡ ಅರ್ಜುನ ನಾಯಕವಾಡಿ ಮಾತನಾಡಿ, ಮೇ.7 ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಹೆಚ್ಚಿನ ಮತ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಮೀಲನ ಪಾಟೀಲ್, ಕೆಪಿಸಿಸಿ ಕಾರ್ಯದರ್ಶಿ ಮಹಾವೀರ ಮೋಹಿತೆ, ಅರ್ಜುನ ನಾಯಕವಾಡಿ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನಿರ್ಮಲಾ ಪಾಟೀಲ್ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ