ಹುಬ್ಬಳ್ಳಿ:
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಪೂರ್ಣಗೊಂಡಿರುವ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಶನಿವಾರ ಹುಬ್ಬಳ್ಳಿಯಲ್ಲಿ ನಡೆದ 42,354 ಮನೆ ಹಂಚಿಕೆಯಲ್ಲಿ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಿದ್ದಾಗ ಸಾಕಷ್ಟು ಅವಕಾಶಗಳಿದ್ದರೂ ಒಂದೂ ಮನೆಯನ್ನು ನೀಡದ ಬಿಜೆಪಿ ಸರ್ಕಾರ, ಈಗ ಸಾವಿರಾರು ಬಡವರಿಗೆ ಮನೆ ಹಂಚುತ್ತಿರುವುದು ತಡೆಯಲಾಗುತ್ತಿಲ್ಲ. ಇಂತಹ ಕಾರ್ಯಕ್ರಮ ಕೊಟ್ಟಿದ್ದು ಕಾಂಗ್ರೆಸ್ ಸರ್ಕಾರದ ಸಾಧನೆ ಎಂದರು.
ಒಂದು ಮನೆ ನಿರ್ಮಾಣಕ್ಕೆ ₹ 7.5 ಲಕ್ಷ ಖರ್ಚಾಗುತ್ತದೆ. ಈ ಪೈಕಿ ಕೇಂದ್ರ ಸರ್ಕಾರ ₹ 1.50 ಲಕ್ಷ ನೀಡುತ್ತಿದ್ದು, ರಾಜ್ಯ ಸರ್ಕಾರ ಎಸ್ಸಿ-ಎಸ್ಟಿಗೆ ₹ 2 ಲಕ್ಷ, ಇತರೆ ವರ್ಗಕ್ಕೆ ₹ 1.20 ಲಕ್ಷ ಮತ್ತು ಫಲಾನುಭವಿಗಳ ವಂತಿಕೆ ಮೊತ್ತ ಅವರೇ ಭರಿಸಬೇಕಿತ್ತು. ಫಲಾನುಭವಿಗಳು ಬಡವರಾಗಿದ್ದು ಬ್ಯಾಂಕ್ ಸಾಲ ಸಹ ಸಿಗದ ಸ್ಥಿತಿಯಲ್ಲಿತ್ತು. ಇದನ್ನು ಮನಗಂಡು ಸರ್ಕಾರ ಫಲಾನುಭವಿಗಳಿಂದ ಬರೀ ₹ 1 ಲಕ್ಷ ಸಂಗ್ರಹಿಸಲು ಮತ್ತು ಬಾಕಿ ವಂತಿಕೆಯನ್ನು ರಾಜ್ಯ ಸರ್ಕಾರದಿಂದಲೇ ಭರಿಸಲು ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದು, ಗ್ಯಾರಂಟಿ ಯೋಜನೆ ಒತ್ತಡದ ಮಧ್ಯೆಯೂ ಇಷ್ಟೊಂದು ಸಂಖ್ಯೆಯ ಮನೆಗಳನ್ನು ಬಡವರಿಗೆ ನೀಡುತ್ತಿರುವುದು ಸರ್ಕಾರದ ಸಾಧನೆ ಅಲ್ಲವೇ ಎಂದು ಪ್ರಶ್ನಿಸಿದರು.ಬಿಜೆಪಿಯಿಂದ ಅಪಪ್ರಚಾರ:
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾತನಾಡಿ, ಅಧಿಕಾರಕ್ಕೆ ಬಂದರೆ ಸ್ವಿಸ್ ಬ್ಯಾಂಕ್ ಹಣ ತರುತ್ತೇನೆ, ಯುವಕರಿಗೆ ಉದ್ಯೋಗ ಕೊಡುತ್ತೇನೆ. ರೈತರ ಆದಾಯ ದ್ವಿಗುಣ ಮಾಡುತ್ತೇನೆಂದು ಮೋದಿ ಹೇಳಿದ್ದರು. ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಭರವಸೆಗಳೆಲ್ಲವೂ ಏನಾಗಿವೆ? ದೇಶದಲ್ಲಿ ಬಡವರು ಜೀವನ ಮಾಡದಷ್ಟು ಬೆಲೆ ಏರಿಕೆ ಆಗಿದ್ದು, ಈ ಬಗ್ಗೆ ಬಿಜೆಪಿ ಮುಖಂಡರನ್ನು ಜನರು ಪ್ರಶ್ನಿಸಬೇಕೆಂದರು.
ವೇದಿಕೆ ಮೇಲೆ ಅದ್ಭುತವಾಗಿ ನಿರ್ಮಿಸಿದ ಮಾದರಿ ಮನೆಗಳ ಬಳಿ ಸಾಂಕೇತಿಕವಾಗಿ ಫಲಾನುಭವಿಗಳಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮನೆಯ ಕೀ ಹಸ್ತಾಂತರಿಸಿದರು. ವಿಪ ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷತೆ ವಹಿಸಿದ್ದರು. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ವಿಪ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹಮ್ಮದ್, ವಿಪ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಚಿವ ಎಚ್.ಕೆ. ಪಾಟೀಲ, ಶಾಸಕರಾದ ಎನ್.ಎಚ್. ಕೋನರಡ್ಡಿ, ಬಿ.ಆರ್. ಪಾಟೀಲ, ಬಿ.ಕೆ. ಹರಿಪ್ರಸಾದ, ಎಫ್.ಎಚ್. ಜಕ್ಕಪ್ಪನವರ, ಅಶೋಕ ಪಟ್ಟಣ, ಬಿ. ನಾಗೇಂದ್ರ, ಯು.ಬಿ. ಬಣಕಾರ, ಯಾಸೀನ ಪಠಾಣ, ಕಾಂಗ್ರೆಸ್ ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರ, ಪಾಲಿಕೆ ವಿರೋಧ ಪಕ್ಷದ ನಾಯಕ ಇಮ್ರಾನ ಎಲಿಗಾರ, ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಮಾಧ್ಯಮ ವಕ್ತಾರ ಶಿವಾನಂದ ಮುತ್ತಣ್ಣವರ, ಮುಖಂಡರಾದ ಸದಾನಂದ ಡಂಗನವರ ಸೇರಿದಂತೆ ಮತ್ತಿತರರು ಇದ್ದರು.