ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಗೆ ಹೊಟ್ಟೆ ಊರಿ

KannadaprabhaNewsNetwork | Published : Mar 13, 2024 2:07 AM

ಸಾರಾಂಶ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ ನೀಡಿದ್ದ ೫ ಗ್ಯಾರಂಟಿ ಯೋಜನೆಗಳನ್ನು ಸಾಕಾರಗೊಳಿಸಿದೆ. ರಾಜ್ಯದಲ್ಲಿ ಸಂಪೂರ್ಣ ಬರಗಾಲ ಆವರಿಸಿದ್ದರೂ ಎಲ್ಲರ ಮುಖದಲ್ಲಿಯೂ ಈ ಗ್ಯಾರಂಟಿ ಯೋಜನೆಗಳಿಂದ ಮಂದಹಾಸ ಮೂಡುವಂತೆ ಮಾಡಿದೆ ಎಂದು ಕರ್ನಾಟಕ ಸರ್ಕಾರದ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ಹೇಳಿದರು.

ಕನ್ನಡಪ್ರಭ ವಾರ್ತೆ ತಾಳಿಕೋಟೆ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ ನೀಡಿದ್ದ ೫ ಗ್ಯಾರಂಟಿ ಯೋಜನೆಗಳನ್ನು ಸಾಕಾರಗೊಳಿಸಿದೆ. ರಾಜ್ಯದಲ್ಲಿ ಸಂಪೂರ್ಣ ಬರಗಾಲ ಆವರಿಸಿದ್ದರೂ ಎಲ್ಲರ ಮುಖದಲ್ಲಿಯೂ ಈ ಗ್ಯಾರಂಟಿ ಯೋಜನೆಗಳಿಂದ ಮಂದಹಾಸ ಮೂಡುವಂತೆ ಮಾಡಿದೆ ಎಂದು ಕರ್ನಾಟಕ ಸರ್ಕಾರದ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ಹೇಳಿದರು.

ಪಟ್ಟಣದ ಶ್ರೀ ಸಂಗಮೇಶ್ವರ ಸಭಾಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಕಮಿಟಿ ವತಿಯಿಂದ ಹಮ್ಮಿಕೊಳ್ಳಲಾದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜಾರಿ ಸಮಯದಲ್ಲಿ ಯಾವುದೇ ಜಾತಿ ಓಡಿಲ್ಲಾ, ಯಾವುದೇ ಪಕ್ಷವನ್ನು ನೋಡಿಲ್ಲಾ ಶ್ರೀಮಂತರು ಬಡವರು ಎಂಬ ವ್ಯತ್ಯಾಸವನ್ನು ಕೂಡಾ ಮಾಡಿಲ್ಲ. ನುಡಿದಂತೆ ನಡೆಯುವಂತಹ ಕೆಲಸ ಕಾಂಗ್ರೆಸ್‌ ಸರ್ಕಾರ ಮಾಡಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯವು ದಿವಾಳಿಯಾಗುತ್ತಿದೆ ಎಂದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಅಧಿಕಾರ ಕಳೆದುಕೊಂಡಿರುವ ಅವರು ನಮ್ಮ ಸರ್ಕಾರದ ಯೋಜನೆಗಳನ್ನು ಕಂಡು ಹೊಟ್ಟೆ ಊರಿಯಿಂದ ಮಾತನಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ. ಅಭಿವೃದ್ಧಿ ಕಾರ್ಯಗಳನ್ನು ಆರಂಭಿಸಲಾಗಿದೆ ಎಂದರು.

ಇನ್ನೋರ್ವ ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ವಿಜಯಪುರ ಕಾಂಗ್ರೆಸ್‌ ಪಕ್ಷದ ಘೋಷಿತ ಲೋಕಸಭಾ ಅಭ್ಯರ್ಥಿ ರಾಜು ಆಲಗೂರ ಅವರು ಮಾತನಾಡಿ, ಕಾಂಗ್ರೆಸ್‌ ಪಕ್ಷವು ಚುನಾವಣೆ ಸಂದರ್ಭದಲ್ಲಿ ನೀಡಿದ ೫ ಗ್ಯಾರಂಟಿ ಯೋಜನೆಯ ಆಶ್ವಾಸನೆಯಂತೆ ಯೋಜನೆಗಳನ್ನು ಜಾರಿಗೆ ತಂದಿದೆ. ನುಡಿದಂತೆ ನಡೆಯುವ ಸರ್ಕಾರ ಕಾಂಗ್ರೆಸ್‌ ಸರ್ಕಾರವಾಗಿದೆ. ಬಿಜೆಪಿ ಸರ್ಕಾರ ಕೊಟ್ಟ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದು, ಇದನ್ನು ಜನರ ಕಣ್ಣಿಗೆ ಮರೆಮಾಚಲು ಧರ್ಮಗಳ ನಡುವೆ ಜಗಳ ಹಚ್ಚುವ ಕೆಲಸಕ್ಕೆ ಮುಂದಾಗಿದೆ ಇಂತಹ ಬಿಜೆಪಿ ಪಕ್ಷವನ್ನು ದೂರಿಡುವುದರ ಜೊತೆಗೆ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ತಮಗೆ ಆಶೀರ್ವದಿಸಬೇಕೆಂದರು.

ಕಾಂಗ್ರೆಸ್‌ ಪಕ್ಷದ ಮುಖಂಡರುಗಳಾದ ಕೆಪಿಸಿಸಿ ಸದಸ್ಯ ಬಿ.ಎಸ್.ಪಾಟೀಲ(ಯಾಳಗಿ), ಡಾ.ಪ್ರಭುಗೌಡ ಲಿಂಗದಳ್ಳಿ, ಶಿವಶಂಕರಗೌಡ ಹಿರೇಗೌಡರ, ವಿದ್ಯಾರಾಣಿ ತುಂಗಳ, ರಾಜು ರಾಯ್ಗೊಂಡ ಅವರು ಕಾಂಗ್ರೆಸ್‌ ಪಕ್ಷವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದರ ಕುರಿತು ಮತ್ತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲಿಸುವ ಕುರಿತು ಮಾತನಾಡಿದರು.ಈ ಸಮಯದಲ್ಲಿ ಮುಸ್ಲಿಂ ಧಾರ್ಮಿಕ ಮುಖಂಡ ಸೈಯದಶಕೀಲಅಹ್ಮದ ಖಾಜಿ, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಮೈಹಿಬೂಬ ಚೋರಗಸ್ತಿ, ಗುರಣ್ಣ ತಾರನಾಳ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ.ಕಟ್ಟಿಮನಿ, ಪ್ರಭುಗೌಡ ಮದರಕಲ್ಲ, ಸುರೇಶಧನಿ ನಾಡಗೌಡ(ಬಿಂಜಲಭಾವಿ), ಕಾಶೀಮಪಟೇಲ ಮೂಕೀಹಾಳ, ಸಿದ್ದನಗೌಡ ಪಾಟೀಲ(ನಾವದಗಿ), ಶರಣುಧನಿ ದೇಶಮುಖ, ಇಬ್ರಾಹಿಂ ಮನ್ಸೂರ, ಸಂಗನಗೌಡ ಅಸ್ಕಿ, ಪುರಸಭಾ ಸದಸ್ಯರಾದ ಅಕ್ಕಮಹಾದೇವಿ ಕಟ್ಟಿಮನಿ, ಪುರಸಭೆ ಮಾಜಿ ಅಧ್ಯಕ್ಷೆ ನೀಲಮ್ಮ ಪಾಟೀಲ, ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಪರಶುರಾಮ ತಂಗಡಗಿ, ರಫೀಕ್ ಬೇಪಾರಿ, ಅಶ್ವಿನಿ ಪಾಟೀಲ, ಮುಸ್ತಫಾ ಚೌದ್ರಿ, ಡಿ.ವ್ಹಿ.ಪಾಟೀಲ, ಮೋದಿನಸಾ ನಗಾರ್ಚಿ, ಶೋಭಾ ಶಳ್ಳಗಿ, ಚಿನ್ನುಧನಿ ನಾಡಗೌಡ, ರಮೀಜಾ ನಧಾಪ ಮೊದಲಾದವರು ಉಪಸ್ಥಿತರಿದ್ದರು.ವೈ.ಎಸ್.ವಿಜಯಕರ ಸ್ವಾಗತಿಸಿದರು. ಅಬ್ದುಲಗನಿ ಮಕಾಂದಾರ ನಿರೂಪಿಸಿದರು.

---

ಕೋಟ್‌

ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ನುಡಿದಂತೆ ನಡೆಯುತ್ತಿದೆ. ರಾಜ್ಯದ ಜನರ ಹಿತಕ್ಕಾಗಿ ೫ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಬಿಜೆಪಿಯವರ ಕುತಂತ್ರ ಬುದ್ಧಿ ಎಂದೂ ನಡೆಯುವುದಿಲ್ಲ. ಜನರಿಂದ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿಯವರು ಹತಾಶರಾಗಿ ರಾಜ್ಯವೂ ಗ್ಯಾರಂಟಿಯಿಂದ ದಿವಾಳಿಯಾಗುತ್ತಿದೆ ಎನ್ನುತ್ತಿದ್ದಾರೆ.

-ಸಿ.ಎಸ್.ನಾಡಗೌಡ(ಅಪ್ಪಾಜಿ), ಶಾಸಕರು ಮುದ್ದೇಬಿಹಾಳ ಕ್ಷೇತ್ರ

Share this article