ಕನ್ನಡಪ್ರಭ ವಾರ್ತೆ ಶಿವಮೊಗ್ಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಹಾಕುತ್ತಿರುವುದಷ್ಟೇ ಅಲ್ಲ, ಫಲಾನುಭವಿಗಳು ಕೂಡ ಬಿಜೆಪಿಯವರೇ ಆಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಇವರೆಲ್ಲರೂ ಕಾಂಗ್ರೆಸ್‌ಗೇ ಮತ ನೀಡುತ್ತಾರೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಬಿಜೆಪಿಯವರು ಏನೇ ಟೀಕೆ ಟಿಪ್ಪಣಿ ಮಾಡಿಕೊಳ್ಳಲಿ. ಜನ ಅವರ ಮಾತನ್ನು ಕೇಳುವ ಸ್ಥಿತಿಯಲ್ಲಿ ಇಲ್ಲ. ರಾಜ್ಯ ಸರ್ಕಾರ ಉತ್ತಮ ಆಡಳಿತವನ್ನು ನೀಡುತ್ತಿದೆ. ಜನರು ಸಿದ್ದರಾಮಯ್ಯ ಅವರ ಹೆಸರನ್ನು ನೆನಪಿನಲ್ಲಿಟ್ಟುಕೊಳ್ಳುತ್ತಾರೆ. ಮತ್ತೆ ಕೇಂದ್ರದಲ್ಲಿ ಕೂಡ ನಮಗೇ ಅಧಿಕಾರ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅನಂತಕುಮಾರ್ ವಿರುದ್ಧ ವಾಗ್ದಾಳಿ:ಬಿಜೆಪಿಯವರು ಆ ಪಕ್ಷದಲ್ಲಿ ಕೆಲ ಹುಚ್ಚರನ್ನು ಇಟ್ಟುಕೊಂಡಿದ್ದಾರೆ ಎಂದು ಪರೋಕ್ಷವಾಗಿ ಸಂಸದ ಅನಂತಕುಮಾರ್ ಅವರನ್ನು ಗುರಿಯಾಗಿ ಮಾತನಾಡಿದ ಮಧು ಬಂಗಾರಪ್ಪ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದ ದಾಳಿ ನಡೆಸಿದ ಮಾಜಿ ಸಂಸದ ಅನಂತ್‌ಕುಮಾರ್ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದರು.
ಮುಂದಿನ ಚುನಾವಣೆಯಲ್ಲಿ ಅನಂತಕುಮಾರ್ ಹೆಗಡೆ ಮತ್ತು ನಳಿನ್‌ಕುಮಾರ್ ಕಟೀಲ್ ಅವರಿಗೇ ಬಿಜೆಪಿ ಟಿಕೆಟ್ ನೀಡಬೇಕು. ಮಂಗಳೂರಿನ ಉಸ್ತುವಾರಿ ನಾನೇ ಇದ್ದೇನೆ. ಪಕ್ಕದ ಜಿಲ್ಲೆ ಉತ್ತರ ಕನ್ನಡಕ್ಕೂ ಹೋಗುತ್ತೇನೆ. ಅಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಹೇಗೆ ಗೆಲ್ಲಿಸಿಕೊಂಡು ಬರುತ್ತೇನೆ ನೋಡುತ್ತಿರಿ ಎಂದು ಸವಾಲ್ ಎಸೆದರು. ಅಲ್ಲಮಪ್ರಭುಗೆ ಸಿಎಂ ಗೌರವ:
ಶರಣರ ಸ್ಥಳಗಳು ಅಭಿವೃದ್ಧಿಯಾಗಿಲ್ಲ:
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಪ್ರಮುಖರಾದ ಎನ್.ರಮೇಶ್, ಕಲಗೋಡು ರತ್ನಾಕರ್, ವೈ.ಎಚ್. ನಾಗರಾಜ್, ಜಿ.ಡಿ. ಮಂಜುನಾಥ್, ಎಸ್.ಕೆ. ಮರಿಯಪ್ಪ ಸೇರಿದಂತೆ ಹಲವರಿದ್ದರು.
* ಸಂಸದರ ಧ್ವಂದ್ವ ನಿಲುವು
ಭಾರತ್ ಜೋಡೋ ನ್ಯಾಯ್ ಯಾತ್ರೆ ಆರಂಭವಾಗಿದೆ. ರಾಜ್ಯದ ನಾಯಕರ ಜೊತೆ ನಾನು ಕೂಡ ರಾಹುಲ್ ಗಾಂಧಿ ಅವರ ಜೊತೆ ಹೆಜ್ಜೆ ಹಾಕುತ್ತೇನೆ. ರಾಹುಲ್ ಅವರ ಪ್ರತಿಯೊಂದು ಹೆಜ್ಜೆಯೂ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಬಿಜೆಪಿಯ ಧರ್ಮಾಧಾರಿತ ರಾಜ್ಯಕಾರಣ ಕೊನೆಯಾಗುವ ಕಾಲ ದೂರವಿಲ್ಲ. ನಾವು ರಾಮನ ಭಕ್ತರು, ಹನುಮಂತನ ಭಕ್ತರು, ಲಕ್ಷ್ಮಣನ ಭಕ್ತರು ಕೂಡ. ರಾಮ ಯಾರ ಸ್ವತ್ತು ಅಲ್ಲ ಎಂದರು.
ಟಾಪ್ ಕೋಟ್
ಯುವನಿಧಿ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡಿರುವುದು ಸಂತೋಷದ ವಿಷಯ. ಗ್ಯಾರಂಟಿ ಯೋಜನೆಗೆ ಪ್ರತಿ ಜಿಲ್ಲೆ ಹಾಗೂ ಪ್ರತಿ ತಾಲೂಕಿಗೆ ವಿಶೇಷ ಅಧಿಕಾರಿ ನೇಮಿಸಲು ಸರ್ಕಾರ ಸಿದ್ಧತೆ ನಡೆಸಲಾಗುತ್ತಿದೆ
- ಮಧು ಬಂಗಾರಪ್ಪ, ಸಚಿವ- - - -ಫೋಟೋ:
ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದರು.