ದೇಶದಲ್ಲಿ ಜನರಿಗೋಸ್ಕರ ಇರುವ ಏಕೈಕ ಪಕ್ಷ ಬಿಜೆಪಿ: ಸೈಯದಲಿ ತಿಮ್ಮಾಪೂರ

KannadaprabhaNewsNetwork | Updated : Sep 29 2024, 01:46 AM IST

ಸಾರಾಂಶ

ದೇಶದಲ್ಲಿ ಜನರಿಗೋಸ್ಕರ ಇರುವ ಏಕೈಕ ಪಾರ್ಟಿಯೆಂದರೆ ಭಾರತೀಯ ಜನಾತಾ ಪಕ್ಷ ಎಂದು ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಹಾಗೂ ರಾಜ್ಯ ಸದಸ್ಯತ್ವ ಅಭಿಯಾನದ ಸಂಚಾಲಕ ಸೈಯದಲಿ ತಿಮ್ಮಾಪೂರ ಹೇಳಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ದೇಶದಲ್ಲಿ ಜನರಿಗೋಸ್ಕರ ಇರುವ ಏಕೈಕ ಪಾರ್ಟಿಯೆಂದರೆ ಭಾರತೀಯ ಜನಾತಾ ಪಕ್ಷ ಎಂದು ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಹಾಗೂ ರಾಜ್ಯ ಸದಸ್ಯತ್ವ ಅಭಿಯಾನದ ಸಂಚಾಲಕ ಸೈಯದಲಿ ತಿಮ್ಮಾಪೂರ ಹೇಳಿದರು.

ಶನಿವಾರ ನಗರದಲ್ಲಿ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆ, ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ಹಾಗೂ ಅಲ್ಪಸಂಖ್ಯಾತರ ಮೋರ್ಚಾ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಬಿಜೆಪಿ ಸದಸ್ಯತ್ವ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಈಗಾಗಲೇ 18 ಕೋಟಿಗೂ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ಪಕ್ಷ ಬಿಜೆಪಿ. ಈಗ ಇನ್ನೂ 10 ಕೋಟಿ ಸದಸ್ಯರನ್ನು ಮಾಡುವ ಗುರು ಹೊಂದಲಾಗಿದ್ದು. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಪ್ರತಿ ಬೂತ್ ನಲ್ಲಿ ಕನಿಷ್ಠ 100 ಜನರನ್ನು ಸದಸ್ಯರನ್ನಾಗಿ ಮಾಡಬೇಕು. ರಾಷ್ಟ್ರಮಟ್ಟದಲ್ಲಿ 50 ಲಕ್ಷ ಸದಸ್ಯರನ್ನು ಮಾಡುವ ಗುರಿಯನ್ನು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ನೀಡಿದ್ದಾರೆ. ಇದು ಪತ್ರಿಯೊಬ್ಬರ ಕಾರ್ಯಕರ್ತನ ಜವಾಬ್ದಾರಿ. ಚಾಚೂ ತಪ್ಪದೆ ಮಾಡಿ ಎಂದು ಹೇಳಿದರು.

ಗ್ರಾಮೀಣ ಮಂಡಳ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಮಾತನಾಡಿ, ಗೋಕಾಕ ಮತಕ್ಷೇತ್ರದಲ್ಲಿ 21 ಸಾವಿರಕ್ಕೂ ಅಧಿಕ ಸದಸ್ಯರನ್ನು ಮಾಡಿದ್ದೇವೆ. ಶಾಸಕರ ಸೂಚನೆಯಂತೆ ಈಗಾಗಲೇ ಪ್ರತಿಬೂತ್‌ಗೆ 300 ಸದಸ್ಯರನ್ನು ಮಾಡಿದ್ದೇವೆ. ಉಳಿದಿರುವ ಸಮಯದಲ್ಲಿ ಹೆಚ್ಚಿನ ಸದಸ್ಯತ್ವ ಮಾಡಲಾಗುವುದು. ಹೆಚ್ಚು ಸದಸ್ಯರನ್ನು ಮಾಡಿದವರಿಗೆ ಶಾಸಕ ರಮೇಶ ಜಾರಕಿಹೊಳಿ ಅವರಿಂದ ಸತ್ಕಾರ ಮಾಡಲಾಗುವುದು. ರಾಜ್ಯದಲ್ಲಿಯೇ ಗೋಕಾಕ ಮತಕ್ಷೇತ್ರದಿಂದ ಅತ್ಯಧಿಕ ಸದಸ್ಯರನ್ನು ಮಾಡುವ ಗುರಿ ಹೊಂದಲಾಗಿದ್ದು, ಕಾರ್ಯಕರ್ತರು ಸಹಕರಿಸಬೇಕು ಎಂದರು.

ಬಿಜೆಪಿ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಶಕೀಲ್ ಧಾರವಾಡಕರ ಮಾತನಾಡಿ, ಗೋಕಾಕ ಮತಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ 25 ಸಾವಿರ ಸದಸ್ಯರನ್ನು ಮಾಡುವ ಗುರಿ ಹೊಂದಲಾಗಿದ್ದು, ಈಗಾಗಲೇ 5 ಸಾವಿರ ಸದಸ್ಯರನ್ನು ಮಾಡಲಾಗಿದ್ದು, ಬರುವ ದಿನಗಳಲ್ಲಿ 20 ಸಾವಿರ ಅಲ್ಪಸಂಖ್ಯಾತ ಸದಸ್ಯರನ್ನು ಮಾಡಲಾಗುವುದು ಎಂದರು

ಬಿಜೆಪಿ ನಗರ ಮಂಡಳ ಅಧ್ಯಕ್ಷ ಭೀಮಶಿ ಭರಮನ್ನವರ, ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷ ಜಾವೇದ್ ಗೋಕಾಕ, ಕಾರ್ಯದರ್ಶಿ ಜುಬೇರ್‌ ತರಾಸಗರ, ಹಾಜಿ ಗಫಾರ್ ಕಾಗಜಿ, ಸುರೇಶ್ ಸನದಿ, ಹನುಮಂತ ದುರಗಣ್ಣವರ ಉಪಸ್ಥಿತರಿದ್ದರು.

Share this article