ಭ್ರಷ್ಟರಿಗೆ ರತ್ನಗಂಬಳಿ ಹಾಸಿ ಸ್ವಾಗತಿಸುತ್ತಿರುವ ಬಿಜೆಪಿ: ಶಾಸಕ ಶ್ರೀನಿವಾಸ ಮಾನೆ

KannadaprabhaNewsNetwork |  
Published : Apr 19, 2024, 01:01 AM IST
ಫೋಟೊ: 18ಎಚ್‌ಎನ್‌ಎಲ್3ಹಾನಗಲ್ಲ ತಾಲೂಕಿನ ಕ್ಯಾಸನೂರು ಗ್ರಾಮದಲ್ಲಿ ನಡೆದ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಪ್ರಚಾರ ಸಭೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಮಾತನಾಡಿದರು. | Kannada Prabha

ಸಾರಾಂಶ

ಬಿಜೆಪಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಬಳಿಕವೂ ಸುಳ್ಳು ಹೇಳುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಕನ್ನಡಪ್ರಭ ವಾರ್ತೆ ಹಾನಗಲ್ಲ

ಬಿಜೆಪಿ ಭಾರತವನ್ನು ಭ್ರಷ್ಟಾಚಾರ ಮುಕ್ತವನ್ನಾಗಿಸುವ ಭರವಸೆ ನೀಡಿತ್ತು. ಆದರೀಗ ಭ್ರಷ್ಟರನ್ನೆಲ್ಲ ರತ್ನಗಂಬಳಿ ಹಾಸಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಕಿಡಿಕಾರಿದರು.

ಹಾನಗಲ್ ತಾಲೂಕಿನ ಕ್ಯಾಸನೂರು ಗ್ರಾಮದಲ್ಲಿ ನಡೆದ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದದೇವರಮಠ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಬಳಿಕವೂ ಸುಳ್ಳು ಹೇಳುತ್ತಿದೆ. ಬರಗಾಲದಂಥ ವಿಚಾರದಲ್ಲಿಯೂ ರಾಜಕಾರಣ ಮಾಡುತ್ತಿದೆ. ಒಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬರ ಪರಿಹಾರ ಬಿಡುಗಡೆಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮೂರು ತಿಂಗಳು ವಿಳಂಬ ಮಾಡಿದೆ ಎನ್ನುತ್ತಾರೆ. ಇನ್ನೊಂದೆಡೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರದಿಂದಲೇ ತಾಂತ್ರಿಕ ಕಾರಣಗಳಿಂದ ಬರ ಪರಿಹಾರ ಬಿಡುಗಡೆ ವಿಳಂಬವಾಗಿದೆ ಎನ್ನುತ್ತಾರೆ. ಕೇಂದ್ರದ ಸಚಿವರು ಭಿನ್ನ ಹೇಳಿಕೆಗಳ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ. ಈ ಇಬ್ಬರೂ ಕೇಂದ್ರ ಸಚಿವರ ಹೇಳಿಕೆಗಳಲ್ಲಿ ಯಾವುದು ಸತ್ಯ ಎನ್ನುವುದನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರಿಸಬೇಕು. ರೈತ ಸಮುದಾಯಕ್ಕೆ ಆಗಿರುವ ಹಾನಿಯನ್ನು ಯಾರು ತುಂಬಿಕೊಡಬೇಕು? ಎಂದು ಶ್ರೀನಿವಾಸ ಮಾನೆ ಪ್ರಶ್ನಿಸಿದರು.

ಸಾಹಿತಿ ವಿಜಯಕಾಂತ ಪಾಟೀಲ ಮಾತನಾಡಿ, ಕೇಂದ್ರದ ಬಿಜೆಪಿ ಸರಕಾರದ ಮಲತಾಯಿ ಧೋರಣೆ ವಿರುದ್ಧ ಯಾವೊಬ್ಬ ಸಂಸದರೂ ಧ್ವನಿ ಎತ್ತದ ಕಾರಣ ಕರ್ನಾಟಕಕ್ಕೆ ಅನ್ಯಾಯವಾಗಿದೆ. ನ್ಯಾಯಸಮ್ಮತ ಹಕ್ಕುಗಳಿಗೆ ಬೇಡುವ ದಯನೀಯ ಸ್ಥಿತಿ ತಂದಿಟ್ಟಿದ್ದಾರೆ. ಇಂಥ ಬಿಜೆಪಿಗೆ ಚುನಾವಣೆಯಲ್ಲಿ ಸೋಲಿಸುವ ಮೂಲಕ ಪಾಠ ಕಲಿಸಬೇಕಿದೆ ಎಂದರು.

ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ್ ಜಮಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಗ್ರಾಪಂ ಅಧ್ಯಕ್ಷ ವೀರಭದ್ರಗೌಡ ಪಾಟೀಲ, ತಾಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಪಾಟೀಲ, ನಾಗರಾಜ ಗಾಜಿಪುರ, ಚಂದ್ರು ಸುಣ್ಣದಕೊಪ್ಪ, ಹರೀಶ ಈಳಿಗೇರ, ಶಿವಾನಂದಪ್ಪ ಈಳಿಗೇರ, ರಾಜೇಂದ್ರ ರೆಡ್ಡೇರ, ಚನ್ನಬಸನಗೌಡ ಪಾಟೀಲ, ವೀರೇಶ ಭಜಂತ್ರಿ, ಮಹದೇವ ಬ್ಯಾಡಗಿ, ಮಲ್ಲಿಕಾರ್ಜುನಗೌಡ ಪಾಟೀಲ, ಪುಟ್ಟರಾಜಗೌಡ ಪಾಟೀಲ, ಸಂಜಯ ಪಾಟೀಲ ಮೊದಲಾದವರು ಈ ಸಂದರ್ಭದಲ್ಲಿದ್ದರು.ಕನ್ನಡಪ್ರಭ ವಾರ್ತೆ ಹಾನಗಲ್ಲ

ಬಿಜೆಪಿ ಭಾರತವನ್ನು ಭ್ರಷ್ಟಾಚಾರ ಮುಕ್ತವನ್ನಾಗಿಸುವ ಭರವಸೆ ನೀಡಿತ್ತು. ಆದರೀಗ ಭ್ರಷ್ಟರನ್ನೆಲ್ಲ ರತ್ನಗಂಬಳಿ ಹಾಸಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಕಿಡಿಕಾರಿದರು.

ಹಾನಗಲ್ ತಾಲೂಕಿನ ಕ್ಯಾಸನೂರು ಗ್ರಾಮದಲ್ಲಿ ನಡೆದ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದದೇವರಮಠ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಬಳಿಕವೂ ಸುಳ್ಳು ಹೇಳುತ್ತಿದೆ. ಬರಗಾಲದಂಥ ವಿಚಾರದಲ್ಲಿಯೂ ರಾಜಕಾರಣ ಮಾಡುತ್ತಿದೆ. ಒಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬರ ಪರಿಹಾರ ಬಿಡುಗಡೆಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮೂರು ತಿಂಗಳು ವಿಳಂಬ ಮಾಡಿದೆ ಎನ್ನುತ್ತಾರೆ. ಇನ್ನೊಂದೆಡೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರದಿಂದಲೇ ತಾಂತ್ರಿಕ ಕಾರಣಗಳಿಂದ ಬರ ಪರಿಹಾರ ಬಿಡುಗಡೆ ವಿಳಂಬವಾಗಿದೆ ಎನ್ನುತ್ತಾರೆ. ಕೇಂದ್ರದ ಸಚಿವರು ಭಿನ್ನ ಹೇಳಿಕೆಗಳ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ. ಈ ಇಬ್ಬರೂ ಕೇಂದ್ರ ಸಚಿವರ ಹೇಳಿಕೆಗಳಲ್ಲಿ ಯಾವುದು ಸತ್ಯ ಎನ್ನುವುದನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರಿಸಬೇಕು. ರೈತ ಸಮುದಾಯಕ್ಕೆ ಆಗಿರುವ ಹಾನಿಯನ್ನು ಯಾರು ತುಂಬಿಕೊಡಬೇಕು? ಎಂದು ಶ್ರೀನಿವಾಸ ಮಾನೆ ಪ್ರಶ್ನಿಸಿದರು.

ಸಾಹಿತಿ ವಿಜಯಕಾಂತ ಪಾಟೀಲ ಮಾತನಾಡಿ, ಕೇಂದ್ರದ ಬಿಜೆಪಿ ಸರಕಾರದ ಮಲತಾಯಿ ಧೋರಣೆ ವಿರುದ್ಧ ಯಾವೊಬ್ಬ ಸಂಸದರೂ ಧ್ವನಿ ಎತ್ತದ ಕಾರಣ ಕರ್ನಾಟಕಕ್ಕೆ ಅನ್ಯಾಯವಾಗಿದೆ. ನ್ಯಾಯಸಮ್ಮತ ಹಕ್ಕುಗಳಿಗೆ ಬೇಡುವ ದಯನೀಯ ಸ್ಥಿತಿ ತಂದಿಟ್ಟಿದ್ದಾರೆ. ಇಂಥ ಬಿಜೆಪಿಗೆ ಚುನಾವಣೆಯಲ್ಲಿ ಸೋಲಿಸುವ ಮೂಲಕ ಪಾಠ ಕಲಿಸಬೇಕಿದೆ ಎಂದರು.

ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ್ ಜಮಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಗ್ರಾಪಂ ಅಧ್ಯಕ್ಷ ವೀರಭದ್ರಗೌಡ ಪಾಟೀಲ, ತಾಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಪಾಟೀಲ, ನಾಗರಾಜ ಗಾಜಿಪುರ, ಚಂದ್ರು ಸುಣ್ಣದಕೊಪ್ಪ, ಹರೀಶ ಈಳಿಗೇರ, ಶಿವಾನಂದಪ್ಪ ಈಳಿಗೇರ, ರಾಜೇಂದ್ರ ರೆಡ್ಡೇರ, ಚನ್ನಬಸನಗೌಡ ಪಾಟೀಲ, ವೀರೇಶ ಭಜಂತ್ರಿ, ಮಹದೇವ ಬ್ಯಾಡಗಿ, ಮಲ್ಲಿಕಾರ್ಜುನಗೌಡ ಪಾಟೀಲ, ಪುಟ್ಟರಾಜಗೌಡ ಪಾಟೀಲ, ಸಂಜಯ ಪಾಟೀಲ ಮೊದಲಾದವರು ಈ ಸಂದರ್ಭದಲ್ಲಿದ್ದರು.

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ