ಕನ್ನಡಪ್ರಭ ವಾರ್ತೆ ಬಂಟ್ವಾಳ
ಬಿ.ಸಿ. ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಶನಿವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ರಕ್ತದಲ್ಲಿ ಹಿಂದುತ್ವದ ಕಣಗಳಿರುವ ದ.ಕ. ಜಿಲ್ಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು 3 ಲಕ್ಷಗಿಂತಲೂ ಅಧಿಕ ಮತಗಳಿಂದ ಗೆಲ್ಲಿಸಿ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದ ವಿಜಯೇಂದ್ರ, ದೇಶದಲ್ಲಿ ವಯಸ್ಸಿನ ಇತಿಮಿತಿ ಇಲ್ಲದೆ ಮೋದಿಯವರ ಪರ ಒಲವು , ವಿಶ್ವಾಸ ಹೆಚ್ಚಾಗುತ್ತಿದೆ, ಮೋದಿ ಮೇಲಿನ ಅಭಿಮಾನದಿಂದಲೇ ಬೇರೆ ಬೇರೆ ಪಕ್ಷಗಳ ಮುಖಂಡರು ಸ್ವಯಂಪ್ರೇರಿತರಾಗಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎಂದರು.ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರ ತುಷ್ಟೀಕರಣ: ವಿಧಾನ ಸಭೆಯಲ್ಲಿ ಪಾಕಿಸ್ತಾನಕ್ಕೆ ಜೈಕಾರ ಕೂಗುವ ದೇಶದ್ರೋಹಿಗಳನ್ನು ರಕ್ಷಣೆ ಮಾಡುವ ಕೆಲಸ ಕಾಂಗ್ರೆಸ್‌ನಿಂದ ನಡೆಯುತ್ತಿದ್ದು, ಜನತೆ ಆತಂಕದಲ್ಲಿರುವಂತಾಗಿದೆ, ಹುಬ್ಬಳ್ಳಿ ಘಟನೆಯ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ನೀಡಿದ ಹೇಳಿಕೆಯ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಬಗ್ಗೆ ಒಲವು ತೋರಿಸುವ ತುಷ್ಟೀಕರಣದ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.ಲೋಕಸಭಾ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ, ನರೇಂದ್ರ ಮೋದಿಯವರು ಕಳೆದ 10 ವರ್ಷಗಳಲ್ಲಿ ಭಾರತವನ್ನು ಬೆಳೆಸಿದ ರೀತಿ ಅದ್ಭುತವಾಗಿದೆ. ಚುನಾವಣೆ ನಡೆಯುವವರೆಗೂ ಬಿಜೆಪಿಯ ವಿಚಾರವನ್ನು ಪ್ರತಿ ಮನ, ಮನೆಗೂ ತಿಳಿಸುವ ಕಾರ್ಯ ಮಾಡಿ. ನನ್ನ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಯಾವುದೇ ರೀತಿಯಲ್ಲಿ ಚ್ಯುತಿ ಬಾರದಂತೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಭರವಸೆ ನೀಡಿದರು.
ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮಾಜಿ ಶಾಸಕ ಎ. ರುಕ್ಮಯ ಪೂಜಾರಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೈ. ಭರತ್ ಶೆಟ್ಟಿ, ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕೆ. ಪದ್ಮನಾಭ ಕೊಟ್ಟಾರಿ, ಜಿಲ್ಲಾ ಕಾರ್ಯದರ್ಶಿ ಕಿಶೋರ್ ಭಂಡಾರಿ ಪುತ್ತೂರು, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿಗಳಾದ ಜಗದೀಶ ಶೇಣವ, ಪೂಜಾ ಪೈ, ಮಂಗಳೂರು ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಯುವ ಜನತಾದಳದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಮತ್ತಿತರರು ಉಪಸ್ಥಿತರಿದ್ದರು.
ನೇಹಾ ಪ್ರಕರಣ ರಾಜಕೀಯಕ್ಕೆ ಬಳಸುವ ಉದ್ದೇಶ ಬಿಜೆಪಿಗಿಲ್ಲ: ವಿಜಯೇಂದ್ರ