ಮಂಡ್ಯ ಜಿಲ್ಲಾ ಗಡಿಭಾಗಕ್ಕೆ ಆಗಮಿಸಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಬಿಜೆಪಿ - ಜೆಡಿಎಸ್‌ ಪಾದಯಾತ್ರೆ

KannadaprabhaNewsNetwork |  
Published : Aug 06, 2024, 12:43 AM ISTUpdated : Aug 06, 2024, 11:27 AM IST
5ಕೆಎಂಎನ್ ಡಿ33 | Kannada Prabha

ಸಾರಾಂಶ

ನಿಡಘಟ್ಟದ ಸುಮಿತ್ರ ದೇವಿ ಕಲ್ಯಾಣ ಮಂಟಪಕ್ಕೆ ಆಗಮಿಸಿದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ತಾಲೂಕು ಬಿಜೆಪಿ ಮಹಿಳಾ ಘಟಕದಿಂದ ಬೆಲ್ಲದ ಆರತಿ ಮಾಡಿ ಹಣೆಗೆ ತಿಲಕವಿಟ್ಟು ಗೌರವಿಸಲಾಯಿತು.

 ಮದ್ದೂರು :  ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಸೋಮವಾರ ಸಂಜೆ ಜಿಲ್ಲೆಯ ಗಡಿ ಭಾಗವಾದ ತಾಲೂಕಿನ ನಿಡಘಟ್ಟ ಗ್ರಾಮದ ಬಳಿ ಗೆ ಆಗಮಿಸಿದಾಗ ಮೈತ್ರಿ ಮುಖಂಡರು ಮತ್ತು ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ ನೀಡಲಾಯಿತು.

ಸಂಜೆ 6.30 ಸುಮಾರಿಗೆ ಜಿಲ್ಲೆಯ ಗಡಿಭಾಗಕ್ಕೆ ಆಗಮಿಸಿದ ಪಾದಯಾತ್ರೆಗೆ ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ನಾರಾಯಣಗೌಡ. ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ಜಿಲ್ಲಾಧ್ಯಕ್ಷ ಇಂದ್ರೇಶ್, ಮಾಜಿ ಅಧ್ಯಕ್ಷ ಸಿದ್ದರಾಮಯ್ಯ ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಸೇರಿದಂತೆ ಅನೇಕ ಮೈತ್ರಿ ಪಕ್ಷದ ಮುಖಂಡರು ಮಾಲಾರ್ಪಣೆ ಮಾಡಿ ಸ್ವಾಗತ ಕೋರಿದರು.

ನಂತರ ನಿಡಘಟ್ಟದ ಸುಮಿತ್ರ ದೇವಿ ಕಲ್ಯಾಣ ಮಂಟಪಕ್ಕೆ ಆಗಮಿಸಿದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ತಾಲೂಕು ಬಿಜೆಪಿ ಮಹಿಳಾ ಘಟಕದಿಂದ ಬೆಲ್ಲದ ಆರತಿ ಮಾಡಿ ಹಣೆಗೆ ತಿಲಕವಿಟ್ಟು ಗೌರವಿಸಲಾಯಿತು. ನಂತರ ವಿಜಯೇಂದ್ರ ಕಲ್ಯಾಣ ಮಂಟಪದಲ್ಲಿ ಸ್ವಲ್ಪ ಸಮಯ ವಿಶ್ರಾಂತಿ ಪಡೆದ ನಂತರ ಮೈತ್ರಿ ಪಕ್ಷದ ಕಾರ್ಯಕರ್ತರೊಂದಿಗೆ ಪಾದಯಾತ್ರೆ ರೂಪರೇಷೆ ಕುರಿತು ಕೆಲಕಾಲ ಚರ್ಚೆ ನಡೆಸಿದರು.

ಈ ವೇಳೆ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಸಿ.ಕೆ.ಸತೀಶ್, ಎಂ.ಸಿ .ಸಿದ್ದು, ಜಿ.ಸಿ. ಮಹೇಂದ್ರ, ಮುಖಂಡರಾದ ಪಿ.ಸಂದರ್ಶ, ಇಂಡವಾಳು ಸಚ್ಚಿದಾನಂದ, ಬಿಜೆಪಿ ಮಹಿಳಾ ಘಟಕದ ಶ್ವೇತಾ, ಜಿಲ್ಲಾ ಕಾರ್ಯದರ್ಶಿ ರಂಜಿತಾ, ಕೋಮಲ, ಪೂರ್ಣಿಮಾ, ಮಂಜುಳಾ ಸೇರಿದಂತೆ ಮೈತ್ರಿ ಪಕ್ಷದ ಅನೇಕ ಮುಖಂಡರುಗಳು ಭಾಗವಹಿಸಿದ್ದರು.

ಪಾದಯಾತ್ರೆ ವೇಳೆ ಅಸ್ವಸ್ಥಗೊಂಡ ಬಿಜೆಪಿ ಮುಖಂಡ

ಮದ್ದೂರು: ಬೆಂಗಳೂರಿನಿಂದ ಮೈಸೂರಿಗೆ ಜೆಡಿಎಸ್- ಬಿಜೆಪಿ ಮುಖಂಡರು, ಕಾರ್ಯಕರ್ತರು ಹಮ್ಮಿಕೊಂಡಿರುವ ಪಾದಯಾತ್ರೆ ವೇಳೆ ಬಿಜೆಪಿ ಮುಖಂಡ ಅಸ್ವಸ್ಥಗೊಂಡ ಘಟನೆ ತಾಲೂಕಿನ ನಿಡಘಟ್ಟದ ಸುಮಿತ್ರಬಾಯಿ ಕಲ್ಯಾಣ ಮಂಟಪದ ಬಳಿ ಸೋಮವಾರ ಸಂಜೆ ಜರುಗಿದೆ.

ಹಾವೇರಿ ಜಿಲ್ಲೆಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಿತರಾಗಿದ್ದ ಗವಿಸಿದ್ದಪ್ಪ ದ್ಯಾವಣ್ಣನವರ್ ತೀವ್ರವಾಗಿ ಅಸ್ವಸ್ಥಗೊಂಡರು. ಅವರನ್ನು ಬೆಂಬಲಿಗರು ಆಂಬ್ಯುಲೆನ್ಸ್ ಮೂಲಕ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದಾರೆ. ಗವಿಸಿದ್ದಪ್ಪ ಅವರು ಬೆಂಗಳೂರಿನಿಂದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ