ಬಿಜೆಪಿ, ಜೆಡಿಎಸ್‌ ರಾಜ್ಯಾಧ್ಯಕ್ಷರ ನಿವಾಸಗಳಿಗೆ ಮುತ್ತಿಗೆ : ಸೌಂದರ್ಯ

KannadaprabhaNewsNetwork |  
Published : Aug 10, 2024, 01:42 AM IST
ಚಿಕ್ಕಮಗಳೂರು ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸಖರಾಯಪಟ್ಟಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಂದರ್ಯ ಜಗದೀಶ್ ಅವರು ಮಾತನಾಡಿದರು. ಇಂದಿರಾ, ಆಶಾ, ನೇತ್ರಾವತಿ, ಶೋಭಾ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಶೋಷಿತ ಸಮುದಾಯಗಳ ಜನನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡಿ ರಾಜ್ಯ ಸರ್ಕಾರವನ್ನು ಅಸ್ತಿರಗೊಳಿಸಲು ಷಡ್ಯಂತ್ರ ರೂಪಿಸುತ್ತಿರುವ ಬಿಜೆಪಿ, ಜೆಡಿಎಸ್ ರಾಜ್ಯಾಧ್ಯಕ್ಷರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸ ಲಾಗಿದೆ ಎಂದು ಸಖರಾಯಪಟ್ಟಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಂದರ್ಯ ಜಗದೀಶ್ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಶೋಷಿತ ಸಮುದಾಯಗಳ ಜನನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡಿ ರಾಜ್ಯ ಸರ್ಕಾರವನ್ನು ಅಸ್ತಿರಗೊಳಿಸಲು ಷಡ್ಯಂತ್ರ ರೂಪಿಸುತ್ತಿರುವ ಬಿಜೆಪಿ, ಜೆಡಿಎಸ್ ರಾಜ್ಯಾಧ್ಯಕ್ಷರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸ ಲಾಗಿದೆ ಎಂದು ಸಖರಾಯಪಟ್ಟಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಂದರ್ಯ ಜಗದೀಶ್ ಹೇಳಿದ್ದಾರೆ.

ಮೈಸೂರಿನ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರ ಇಲ್ಲದಿದ್ದರೂ ವಿನಾಃಕಾರಣ ಕೋಮುವಾದಿಗಳು, ಜಾತಿವಾದಿಗಳು, ಪಟ್ಟಬದ್ಧ ಹಿತಾಸಕ್ತಿಗಳು ಅಧಿಕಾರ, ಖುರ್ಚಿ ಆಸೆಗಾಗಿ ಜನಪರ ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರವನ್ನು ಅಸ್ತಿರಗೊಳಿಸಲು ಕೇಂದ್ರ ಸರ್ಕಾರದ ಸಲಹೆಯಂತೆ ಬಿಜೆಪಿ ಜೆಡಿಎಸ್ ಪಾಪದ ಪಾದಯಾತ್ರೆ ನಡೆಸುತ್ತಿದ್ದಾರೆಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಕಳೆದ 40 ವರ್ಷಗಳ ರಾಜಕೀಯ ಭವಿಷ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಪ್ಪುಚುಕ್ಕಿ ಇಲ್ಲದಂತೆ ಆಡಳಿತ ನಡೆಸುತ್ತಿರುವುದನ್ನು ಸಹಿಸದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ. ಕುಮಾರ ಸ್ವಾಮಿ ನಡೆಸುತ್ತಿರುವ ಪಿತೂರಿ ಖಂಡಿಸಿ ಸಧ್ಯದಲ್ಲೆ ಈ ಇಬ್ಬರ ಮನೆಗೂ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ ಎಂದರು.

ಬಿಜೆಪಿ, ಜೆಡಿಎಸ್ ನಾಯಕರ ಕುತಂತ್ರಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರು ಕುಮ್ಮಕ್ಕು ನೀಡುತ್ತಿದ್ದು, ರಾಜ್ಯಪಾಲರ ಮೂಲಕ ರಾಜ್ಯ ಸರ್ಕಾರವನ್ನು ಅಸ್ತಿರಗೊಳಿಸಲು ಕೇಂದ್ರ ಸರ್ಕಾರ ಪಿತೂರಿ ನಡೆಸುತ್ತಿದೆ. ಸಿದ್ದರಾಮಯ್ಯನವರನ್ನು ರಾಜಕೀಯವಾಗಿ ಮುಗಿಸಲು ಮತ್ತು ಹಿಂದುಳಿದ ವರ್ಗಗಳ ನಾಯಕತ್ವವನ್ನು ಕೊನೆಗಾಣಿಸಲು ಸಂಚು ರೂಪಿಸುತ್ತಿದೆ ಎಂದು ದೂರಿದರು.

ಹಿಂದೆ ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಭೋವಿ ನಿಗಮದ 42 ಕೋಟಿ ರು. ಹಗರಣ ನಡೆದಿರುವುದು ಕೋಟಾ ಶ್ರೀನಿವಾಸ್ ಪೂಜಾರಿ ಸಚಿವರಾಗಿದ್ದಾಗ ಎಂದು ಲೆಕ್ಕ ಪರಿಶೋಧನೆಯಲ್ಲಿ ಬಹಿರಂಗ ವಾಗಿದೆ. ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ 220 ಕೋಟಿ ರು. ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಮಾಹಿತಿ ನೀಡಿದರು.

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಮಂಡಿಸಿದ 2024 ರ ಬಜೆಟ್‌ನಲ್ಲಿ ರಾಜ್ಯಕ್ಕೆ ಏನೂ ಕೊಡುಗೆ ನೀಡದಿರುವುದನ್ನು ಮರೆ ಮಾಚಲು ಬಿಜೆಪಿ ಜೆಡಿಎಸ್ ಪಾಪದ ಪ್ರಾಯಶ್ಚಿತ್ತದ ಪಾದಯಾತ್ರೆ ನಡೆಸುತ್ತಿದ್ದಾರೆಂದು ಟೀಕಿಸಿದರು.

ಸುದ್ಧಿಗೋಷ್ಠಿಯಲ್ಲಿ

ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಇಂದಿರಾ ಶಂಕರ್, ಪ್ರಧಾನ ಕಾರ್ಯದರ್ಶಿ ಆಶಾ ಸುರೇಶ್, ಜಿಲ್ಲಾ ಕಾರ್ಯದರ್ಶಿ ನೇತ್ರಾವತಿ, ಶೋಭಾ ಉಪಸ್ಥಿತರಿದ್ದರು. 8 ಕೆಸಿಕೆಎಂ 2ಚಿಕ್ಕಮಗಳೂರು ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸಖರಾಯಪಟ್ಟಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಂದರ್ಯ ಜಗದೀಶ್ ಮಾತನಾಡಿದರು. ಇಂದಿರಾ, ಆಶಾ, ನೇತ್ರಾವತಿ, ಶೋಭಾ ಇದ್ದರು.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ