ಹುಬ್ಬಳ್ಳಿ:
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ದೇಶದ 16 ಲಕ್ಷ ಉದ್ಯಮಿಗಳ ಸಾಲಮನ್ನಾ ಮಾಡಿದೆ. ರೈತರ ಸಾಲ ಮನ್ನಾ ಹಾಗೂ ಪರಿಹಾರ ನೀಡಲು ಏನಾಗಿದೆ. ಹಿಂದೆ ರಾಜ್ಯದಲ್ಲಿ ಬಿಜೆಪಿ ಬಿ.ಎಸ್. ಯಡಿಯೂರಪ್ಪ ಅವರು ರೈತರ ಸಾಲಮನ್ನಾ ಮಾಡುವಂತೆ ವಿರೋಧ ಪಕ್ಷಗಳು ಒತ್ತಾಯಿಸಿದಾಗ ನಮ್ಮ ಹತ್ತಿರ ನೋಟ್ ಮುದ್ರಿತ ಯಂತ್ರವಿಲ್ಲ ಎಂದು ಹೇಳಿದ್ದರು. ಇವರಿಗೆ ರೈತರ ಬಗ್ಗೆ ಮಾತನಾಡಲು ಏನು ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಈಗ ರೈತರ ಬಗ್ಗೆ ಅನುಕಂಪ ತೋರಿಸುತ್ತಿರುವ ಬಿಜೆಪಿ ನಾಯಕರು ವಿಶ್ವ ಗುರು (ನರೇಂದ್ರ ಮೋದಿ) ಅವರ ಹತ್ತಿರ ಹೋಗಿ ಪರಿಹಾರ ತರಲಿ. ರೈತರ ವಿಚಾರದಲ್ಲಿ ನಾವು ರಾಜಕೀಯ ಮಾಡುತ್ತಿಲ್ಲ ಎಂದ ಅವರು, ರೈತರು ಸಲ್ಲಿಸುತ್ತಿರುವುದು ನ್ಯಾಯಯುತ ಬೇಡಿಕೆ. ಸದ್ಯ ಬರ ಅಧ್ಯಯನ ಮಾಡುತ್ತಿದ್ದು, ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ. ಮುಂದೆ ಮುಖ್ಯಮಂತ್ರಿ ರೈತರಿಗೆ ಏನು ಪರಿಹಾರ ನೀಡಬೇಕು ಅದನ್ನು ನಿರ್ಧರಿಸಲಿದ್ದಾರೆ ಎಂದರು.ಕೇಂದ್ರ ಸರ್ಕಾರ ದೇಶದಲ್ಲಿ 12 ವರ್ಷದಿಂದ ಅಧಿಕಾರದಲ್ಲಿದ್ದು ರೈತರಿಗೆ ಎಷ್ಟು ಪರಿಹಾರ ನೀಡಿದೆ ಎಂದು ಪ್ರಶ್ನಿಸಿದ ಲಾಡ್, ರಾಷ್ಟ್ರೀಯ ವಿಪತ್ತು ನಿಧಿ (ಎನ್‌ಡಿಆರ್‌ಎ)ಯ ಕೆಲವು ನಿಯಮ ಬದಲಿಸುವಂತೆ, ಸೂಕ್ತ ಪರಿಹಾರ ಹಾಗೂ ಬೆಳೆ ವಿಮೆ ಹೆಚ್ಚಿಸುವಂತೆ ರೈತರು ಮನವಿ ಮಾಡಿದ್ದಾರೆ ಎಂದು ಹೇಳಿದರು.