ಕನ್ನಡಪ್ರಭ ವಾರ್ತೆ ಮದ್ದೂರು
79ನೇ ಸ್ವಾತಂತ್ರ್ಯ ಸಂಭ್ರಮದ ಅಂಗವಾಗಿ ಪ್ರತಿಯೊಬ್ಬರ ಮನೆ ಮೇಲೂ ತ್ರಿವರ್ಣ ಧ್ವಜ ಹಾರಿಸುವ ಬಿಜೆಪಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಪಟ್ಟಣದಲ್ಲಿ ಬುಧವಾರ ಚಾಲನೆ ನೀಡಲಾಯಿತು.ಪ್ರವಾಸಿ ಮಂದಿರ ವೃತ್ತದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಿಂದ ಬೈಕ್ ರ್ಯಾಲಿ ಮೂಲಕ ಆರಂಭಗೊಂಡ ತಿರಂಗಾ ಅಭಿಯಾನಕ್ಕೆ ಮನ್ಮುಲ್ ನಿರ್ದೇಶಕ, ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಚಾಲನೆ ನೀಡಿದರು.
ನಂತರ ಕಾರ್ಯಕರ್ತರು ಹಳೇ ಎಂ.ಸಿ.ರಸ್ತೆ, ಬೆಂಗಳೂರು ಮೈಸೂರು ಹಳೇ ಹೆದ್ದಾರಿ ಸೇರಿದಂತೆ ಪ್ರಮುಖ ಬೀದಿಗಳ ಮೂಲಕ ಶಿವಪುರ ಧ್ವಜ ಸತ್ಯಾಗ್ರಹ ಸೌಧದ ವರೆಗೆ ತ್ರಿವರ್ಣ ಧ್ವಜಗಳನ್ನು ಹಿಡಿದು ರ್ಯಾಲಿ ನಡೆಸುವುದರೊಂದಿಗೆ ಪ್ರತಿಯೊಬ್ಬ ಭಾರತೀಯ ನಾಗರೀಕರಲ್ಲಿ ದೇಶದ ಬಗ್ಗೆ ಸದ್ಭಕ್ತಿ, ಶ್ರದ್ಧೆ ಮೂಡಿಸಿ ಪ್ರತಿ ಮನೆಯ ಮೇಲು ಆಗಸ್ಟ್ 13 ರಿಂದ 15 ರವರೆಗೆ ತ್ರಿವರ್ಣ ಧ್ವಜ ಪ್ರದರ್ಶಿಸುವಂತೆ ಪ್ರೇರೇಪಿಸಿದರು.ಈ ವೇಳೆ ಎಸ್.ಪಿ.ಸ್ವಾಮಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಪೇಕ್ಷೆ ಮೇರೆಗೆ 79 ನೇ ಸ್ವಾತಂತ್ರೋತ್ಸವದ ಸಂಭ್ರಮದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮದ್ದೂರು ಕ್ಷೇತ್ರದ ಪ್ರತಿಯೊಬ್ಬ ನಾಗರೀಕರು ತಮ್ಮ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜಗಳನ್ನು ಹಾರಿಸುವುದರೊಂದಿಗೆ ದೇಶದ ಸಾರ್ವ ಭೌಮತ್ಯಕ್ಕೆ ಒಂದು ಅರ್ಥ ತಂದು ಕೊಡುವಂತೆ ಮನವಿ ಮಾಡಿದರು.
ಬಿಜೆಪಿ ಯುವ ಘಟಕದ ಅಧ್ಯಕ್ಷ ಹಾಗಲಹಳ್ಳಿ ರಘು ಮಾತನಾಡಿ, ಮನೆಗಳ ಮೇಲೆ ರಾಷ್ಟ್ರಧ್ವಜ ಪ್ರದರ್ಶನ ಏಕತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವುದು, ನಮ್ಮ ಸ್ವಾಭಿಮಾನ ಸಂಕಲ್ಪದ ಜೊತೆಗೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ, ತ್ಯಾಗ ಬಲಿದಾನ ಮಾಡಿದ ಅಸಂಖ್ಯಾತ ಸ್ವಾತಂತ್ರ್ಯ ಸೇನಾನಿಗಳ ಸಂಕೇತದ ಜೊತೆಗೆ ರಾಷ್ಟ್ರಧ್ವಜದ ಮಹತ್ವವನ್ನು ಬಲಪಡಿಸುವುದೇ ಈ ಹರ್ ಘರ್ ನಿರಂಗಾ ಅಭಿಯಾನದ ಉದ್ದೇಶವಾಗಿದೆ ಎಂದರು.ಅಭಿಯಾನದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎನ್ ಸತೀಶ್, ಕೆಂಪಬೋರಯ್ಯ, ತಾಲೂಕು ಅಧ್ಯಕ್ಷ ಸಿ.ಕೆ.ಸತೀಶ್, ಪ್ರಧಾನ ಕಾರ್ಯದರ್ಶಿ ಎಂ.ಸಿ.ಸಿದ್ದು, ಯುವ ಮೋರ್ಚಾ ಅಧ್ಯಕ್ಷ ಸಂತೋಷ್, ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ, ರೈತ ಮೋರ್ಚಾ ಅಧ್ಯಕ್ಷ ವಿ.ಎಚ್.ರವಿ , ನಗರ ಘಟಕದ ಅಧ್ಯಕ್ಷ ಮಧು, ಮುಖಂಡರಾದ ಚಿಕ್ಕಣ್ಣಾಚಾರ್, ಸತೀಶ, ಶಂಕರೇಗೌಡ, ಎಂ.ಎಸ್. ವೀರಭದ್ರ ಸ್ವಾಮಿ, ಗ್ರಾ.ಪಂ. ಮಾಜಿಅಧ್ಯಕ್ಷ ರವಿ, ಕೋಮಲ, ಮಮತಾರಾಂಕಾ, ಮಾ. ನಾ.ಪ್ರಸನ್ನ ಕುಮಾರ್ ಮತ್ತಿತರರು ಭಾಗವಹಿಸಿದ್ದರು.