ತಾಯಿ ಹೆಸರಿನಲ್ಲಿ ಸಸಿ ನೆಡುವ ಯೋಜನೆಗೆ ಬಿಜೆಪಿ ಚಾಲನೆ

KannadaprabhaNewsNetwork |  
Published : Jun 17, 2025, 02:55 AM IST
ಬಿಜೆಪಿಯಿಂದ ತಾಯಿ ಹೆಸರಿನಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ | Kannada Prabha

ಸಾರಾಂಶ

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಕೊಡಗು ಬಿಜೆಪಿ ವತಿಯಿಂದ ಜಿಲ್ಲಾದ್ಯಂತ ತಾಯಿ ಹೆಸರಿನಲ್ಲಿ ಒಂದು ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಕೊಡಗು ಬಿಜೆಪಿ ವತಿಯಿಂದ ಜಿಲ್ಲಾದ್ಯಂತ ಆ.೧೫ರ ವರೆಗೆ ತಾಯಿ ಹೆಸರಿನಲ್ಲಿ ಒಂದು ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಡಿಕೇರಿಯ ಬನ್ನಿ ಮಂಟಪದ ಬಳಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಲಾಯಿತು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ೧೧ ವರ್ಷಗಳು ತುಂಬಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಕಲ್ಪದಿಂದ ಸಿದ್ಧಿ ಎಂಬ ಜನಸಂಪರ್ಕ ಅಭಿಯಾನವನ್ನು ಬಿಜೆಪಿ ಆರಂಭಿಸಿದೆ. ಇದನ್ನು ಜಿಲ್ಲಾ ಕೇಂದ್ರ ಮಡಿಕೇರಿಯಿಂದ ಕಾರ್ಯಕ್ರಮ ಆರಂಭಿಸಲಾಗಿದೆ. ಮಡಿಕೇರಿ ನಗರ, ಮಂಡಲ ವತಿಯಿಂದ ದಿನಕ್ಕೊಬ್ಬ ಕಾರ್ಯಕರ್ತ ಗಿಡ ನೆಡುವ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದರು.

ಮಡಿಕೇರಿ ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕವನ್ ಕಾವೇರಪ್ಪ ಮಾತನಾಡಿ, ಕಳೆದ ೧೧ ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿ ಶೇ.೮೫ರಷ್ಟು ಆಶ್ವಾಸನೆಯನ್ನು ಈಡೇರಿಸಿದ್ದಾರೆ. ಅದನ್ನು ಜನರಿಗೆ ತಲುಪಿಸುವ ಕೆಲಸವಾಗುತ್ತಿದೆ ಎಂದ ಅವರು, ಮಡಿಕೇರಿ ಮಂಡಲದ ೨೩ ವಾರ್ಡ್‌ಗಳಲ್ಲೂ ಪ್ರತಿನಿತ್ಯ ಸಸಿ ನೆಡುವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಈ ಸಂದರ್ಭ ಪಕ್ಷದ ಜಿಲ್ಲಾ ಖಜಾಂಚಿ ಕನ್ನಂಡ ಸಂಪತ್, ನಗರಸಭೆ ಸದಸ್ಯೆ ಸವಿತಾ ರಾಕೇಶ್, ನಗರ ಮಂಡಲ ಕಾರ್ಯದರ್ಶಿ ಬಿ.ಎಂ.ಹರೀಶ್, ಪ್ರಮುಖರಾದ ಜೀವನ್, ಬೊಳ್ಳಜಿರ ಬಿ.ಅಯ್ಯಪ್ಪ, ರಾಕೇಶ್ ಅನ್ವೇಕರ್, ಬಸವರಾಜು, ರಾಜೇಶ್, ನವ್ಯ ರಾಜೇಶ್, ಗಜೇಂದ್ರ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''