ದೆಹಲಿ ಗಲಭೆ ಖಂಡಿಸಿ ಕಾಂಗ್ರೆಸ್ ಕಛೇರಿಗೆ ಬಿಜೆಪಿ ಮುತ್ತಿಗೆ

KannadaprabhaNewsNetwork |  
Published : Jul 25, 2026, 01:30 AM IST
ಫೋಟೋ- ಕಾಂಗ್ರೆಸ್ ಕಛೇರಿಯತ್ತ ಹೊರಟ  ಬಿಜೆಪಿ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಹರಸಾಹಸ | Kannada Prabha

ಸಾರಾಂಶ

BJP lays siege to Congress office, condemning Delhi riots

-ಕಾಂಗ್ರೆಸ್ ಕಛೇರಿಯತ್ತ ಹೊರಟ ಬಿಜೆಪಿ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಹರಸಾಹಸ । ಬಿಜೆಪಿಯ ಹಲವರು ಪೊಲೀಸ್‌ ವಶಕ್ಕೆ

------

ಕನ್ನಡಪ್ರಭ ವಾರ್ತೆ ಕಲಬುರಗಿ

ದೆಹಲಿಯಲ್ಲಿ ನಡೆದ ಗಲಭೆ ಖಂಡಿಸಿ ಕಲಬುರಗಿಯಲ್ಲಿ ಬಿಜೆಪಿ ಶುಕ್ರವಾರ ಪ್ರತಿಭಟನೆ ಆಯೋಜಿಸಿತ್ತು. ಕಲಬುರಗಿಯ ಸರ್ದಾರ ವಲ್ಲಭಭಾಯಿ ಪಟೇಲ್ ಸರ್ಕಲ್ ನಿಂದ ಡಿಸಿ ಕಛೇರಿವರೆಗೆ ಹೊರಟ ಮೆರವಣಿಗೆಯಲ್ಲಿದ್ದ ಪ್ರತಿಭಟನಾಕಾರರು ದಿಢೀರನೇ ಡಿಸಿ ಕಛೇರಿ ಒಳಗೆ ಪ್ರವೇಶಿಸದೇ ಕಾಂಗ್ರೆಸ್ ಕಛೇರಿಯತ್ತ ಹೊರಟಾಗ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ದಾರಿಯಲ್ಲೇ ತಡೆದು ವಶಕ್ಕೆ ಪಡೆದರು.

ವಿರೋಧ ಪಕ್ಷಗಳು ನೀಟ್ ಕುರಿತು ಚರ್ಚಿಸದೇ ಬದಲಾಗಿ ದೇಶದಲ್ಲಿ ಅರಾಜಕತೆಯನ್ನು ಉಂಟು ಮಾಡುವುದನ್ನು ಖಂಡಿಸಿ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಆಯೋಜಿಸಿತ್ತು. ಏಕಾಏಕಿ ರ್‍ಯಾಲಿ ಕಾಂಗ್ರೆಸ್‌ ಕಚೇರಿಯತ್ತ ಹೊರಳಿದಾಗ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ತಡೆಯಲು ಹರಸಾಹಸಪಡಬೇಕಾಯಿತು.

ಈ ಹಂತದಲ್ಲಿ ಪ್ರತಿಭಟನಾ ನಿರತ ಹಲವರನ್ನು ಪೊಲೀಸರು ವಶಕ್ಕೆ ಪಡೆದರು. ಈ ಹಂತದಲ್ಲಿ ಪ್ರತಿಭಟನೆ ನಿರತ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಈ ಹಂತದಲ್ಲಿ ಪತಿಭಟನೆ ಉದ್ವಿಗ್ನತೆಗೆ ತಿರುಗಿತ್ತು.

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನಾಕಾರರು ವಿದ್ಯಾರ್ಥಿಗಳ ಸೋಗಿನಲ್ಲಿ ಪಾರ್ಲಿಮೆಂಟ್ ಎದುರು ಗಲಭೆ ನಡೆಸಿದ್ದಾರೆ.

ಈ ಕೃತ್ಯದ ಹಿಂದೆ ದೇಶ ವಿರೋಧಿಗಳ ಸಂಚಿದೆ.‌ ಇದಕ್ಕೆ ರಾಹುಲ್ ಗಾಂಧಿ ಬೆಂಬಲಿಸುತ್ತಿದ್ದಾರೆ ಎಂದು ಮುಖಂಡರು ಆಕ್ರೋಶ ಹೊರಹಾಕಿದರು

ಕಾಂಗ್ರೆಸ್ ಹಾಗೂ ಸಿಜೆಪಿ ವಿರುದ್ಧ ಪ್ರತಿಭಟನೆ ನಿರತ ಬಿಜೆಪಿ ಕಾರ್ಯಕರ್ತರು ನಿರಂತರ ಆಕ್ರೋಶ ಹೊರಹಾಕಿದರು.

ದೆಹಲಿಯಲ್ಲಿ ವಿದ್ಯಾರ್ಥಿಗಳ ಹೆಸರಲ್ಲಿ ನಡೆದ ಗಲಭೆ ಖಂಡನೀಯ. ಇಲ್ಲಿ ಕಾಂಗ್ರೆಸ್‌ ರಾಜಕೀಯ ಲಾಭಕ್ಕೆ ಯತ್ನಿಸುತ್ತಿದೆ.

ದೆಹಲಿ ಗಲಭೆಯಲ್ಲಿ ದೇಶ ವಿರೋಧಿ ಶಕ್ತಿಗಳ ಕೈವಾಡ ಇದೆ. ಈ ಹೋರಾಟವನ್ನು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷ ದಿಕ್ಕು ತಪ್ಪಿಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಅಮರನಾಥ ಪಾಟೀಲ, ದೇವೇಂದ್ರ ದೇಸಾಯಿ ಕಲ್ಲೂರ, ಶರಣಪ್ಪ ತಳವಾರ, ರಾಜು ವಾಡೇಕರ್, ಸಂತೋಷ ಹಾದಿಮನಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಮಹಿಳೆಯರೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿದ್ದು ಧಿಕ್ಕಾರ ಹಾಕಿದರು.

......ಬಾಕ್ಸ್‌.....

ಶಾಸಕ ಜಾಧವ್ ಸೇರಿ ಹಲವರ ಸೆರೆ

ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಬಿಜೆಪಿ ಶಾಸಕ ಡಾ. ಅವಿನಾಶ್ ಜಾಧವ್, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಅಮರನಾಥ್ ಪಾಟೀಲ್, ಶರಣಪ್ಪ ತಳವಾರ ಸೇರಿ ಹಲವು ಬಿಜೆಪಿ ಮುಖಂಡರು, ಕಾರ್ಯಕರ್ತರನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆಯ ಹಿನ್ನೆಲೆ ಕಾಂಗ್ರೆಸ್ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೆಲಕಾಲ ಆ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದರೂ ಪರಿಸ್ಥಿತಿ ನಿಯಂತ್ರಣದಲ್ಲಿತ್ತು.

-----

ಫೋಟೋ

ಕಾಂಗ್ರೆಸ್ ಕಛೇರಿಯತ್ತ ಹೊರಟ ಬಿಜೆಪಿ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಹರಸಾಹಸ

ಫೋಟೋ

ಕಲಬುರಗಿಯಲ್ಲಿ ವಿರೋಧ ಪಕ್ಷಗಳು ನೀಟ್ ಕುರಿತು ಚರ್ಚಿಸದೇ ದೇಶದಲ್ಲಿ ಅರಾಜಕತೆಯನ್ನು ಉಂಟು ಮಾಡುವುದನ್ನು ಖಂಡಿಸಿ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಾಜದ ಅಗತ್ಯಕ್ಕೆ ಸ್ಪಂದಿಸುವ ಎಐ ಪರಿಹಾರ ರೂಪಿಸಿ
ಮತದಾರರು ಸಮಗ್ರ ಪರಿಷ್ಕರಣೆಗೆ ಸಹಕಾರ ನೀಡಿ