ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಶ್ರೀಕ್ಷೇತ್ರ ಆದಿಚುಂಚನಗಿರಿ ಮಠದ ಪೀಠಾಧಿಪತಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾರಥ್ಯದಲ್ಲಿ ಅಮೆರಿಕಾದ ನ್ಯೂಜೆರ್ಸಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀಕಾಲಭೈರವೇಶ್ವರಸ್ವಾಮಿ ದೇವಸ್ಥಾನದ ಕಾಮಗಾರಿಯನ್ನು ಬಿಜೆಪಿ ಮುಖಂಡ ಇಂಡುವಾಳು ಎಸ್.ಸಚ್ಚಿದಾನಂದ ವೀಕ್ಷಿಸಿ ಮತ್ತಷ್ಟು ಅಭಿವೃದ್ಧಿಗೆ ಮನವಿ ಮಾಡಿದ್ದಾರೆ.ಅಮೆರಿಕಾದ ನ್ಯೂರ್ಜೆಸಿಯ ಆದಿಚುಂಚನಗಿರಿ ಶಾಖಾ ಮಠದ ಆವರಣದಲ್ಲಿ 80 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶ್ರೀಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಅಮೆರಿಕಾದಲ್ಲಿ ನೆಲಸಿರುವ ಕನ್ನಡಿಗರು, ಭಾರತೀಯರ ಸಹಕಾರದೊಂದಿಗೆ ನಡೆಯುತ್ತಿದೆ.
ಭಾರತವನ್ನು ಪ್ರತಿನಿಧಿಸುವಂತಹ ಇಂತಹ ಮತ್ತಷ್ಟು ಸತ್ಕಾರ್ಯಗಳು ಜರುಗುವಂತಾಗಲಿ. ಆದಿಚುಂಚನಗಿರಿ ಮಠದ ಇಂತಹ ಧಾರ್ಮಿಕ ಕಾರ್ಯಕ್ಕೆ ನಾವೇಲ್ಲರೂ ಕೈಜೋಡಿಸುವ ಮೂಲಕ ಪುಣ್ಯ ಪ್ರಾಪ್ತಿಗಾಗಿ ಮಠದ ಜೊತೆಗೆ ಶ್ರಮಿಸೋಣ ಎಂದು ಮನವಿ ಮಾಡಿದ್ದಾರೆ.ರಾಜ್ಯ ಪ್ರಶಸ್ತಿ ನಾಮ ನಿರ್ದೇಶನ ಆಹ್ವಾನಕನ್ನಡಪ್ರಭ ವಾರ್ತೆ ಮಂಡ್ಯಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳು ತಮ್ಮ ಪ್ರ‍್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಪ್ರದಾನ ಮಾಡಲು ನಾಮ ನಿರ್ದೇಶನವನ್ನು ಆಹ್ವಾನಿಸಲಾಗಿದೆ.
ಪ್ರಕರಣವು 01-08-2023 ರಿಂದ 31-07-2024 ರೊಳಗೆ ನಡೆದಿರಬೇಕು. ದಿನಾಂಕ 01-08-2006 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10 ಸಾವಿರ ರು. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.ಇದೇ ವೇಳೆ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ಐದು ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ 25 ಸಾವಿರ ರು. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ಒಂದು ಲಕ್ಷ ರು. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.ಅರ್ಜಿ ಸಲ್ಲಿಸಲು ಸೆ.27 ಕೊನೆಯ ದಿನವಾಗಿದ್ದು, ಮಕ್ಕಳ ದಿನಾಚರಣೆ-2024ನೇ ಸಾಲಿನ ಪ್ರಶಸ್ತಿಗಾಗಿ ನಿಗಧಿಪಡಿಸಿರುವ ಅರ್ಜಿಗಳನ್ನು ಸಂಬಂಧಿಸಿದ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಂದ ಪಡೆದು, ಕನ್ನಡ ಭಾಷೆಯಲ್ಲಿಯೇ ಭರ್ತಿ ಮಾಡಿ ಅರ್ಜಿ ಸಲ್ಲಿಸಕ್ಕದ್ದು ಎಂದು ಮಂಡ್ಯ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.