ಬಿಜೆಪಿ ನಾಯಕರ ಆರೋಪ ಕೇವಲ ರಾಜಕೀಯ ಪ್ರೇರಿತ: ಪ್ರಸನ್ನ ನಾಯ್ಕ

KannadaprabhaNewsNetwork |  
Published : Jul 17, 2026, 02:15 AM IST
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರಾದ ಜಗದೀಶ ಗೌಡ್ರು,ಸುಮಾ ಉಗ್ರಾಣಕರ್,ಜ್ಯೋತಿ ಗೌಡಾ ಪಾಟಿಲ್,ಶ್ರೀನಿವಾಸ ನಾಯ್ಕ,ಪ್ರಸನ್ನ ಶೆಟ್ಟಿ,ಭಾಸ್ಕರ ಶೆಟ್ಟಿ,ಮಹೇಶ ನಾಯ್ಕ,ದತ್ತುರಾವ್ ಸೇರಿದಂತೆ ಇತರರಿದ್ದರು. | Kannada Prabha

ಸಾರಾಂಶ

ಮಾಜಿ ಶಾಸಕಿ ರೂಪಾಲಿ ನಾಯ್ಕ ಸೇರಿ ಬಿಜೆಪಿ ನಾಯಕರ ಆರೋಪಗಳು, ಹೇಳಿಕೆಗಳು ಕೇವಲ ರಾಜಕೀಯ ಪ್ರೇರಿತವಾಗಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪಿಆರ್‌ಸಿ ಕುರಿತು ಈಗಾಗಲೇ ಸ್ಪಷ್ಟವಾದ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರ ಹೇಳಿಕೆ

ಕನ್ನಡಪ್ರಭ ವಾರ್ತೆ ಶಿರಸಿ

ಮಾಜಿ ಶಾಸಕಿ ರೂಪಾಲಿ ನಾಯ್ಕ ಸೇರಿ ಬಿಜೆಪಿ ನಾಯಕರ ಆರೋಪಗಳು, ಹೇಳಿಕೆಗಳು ಕೇವಲ ರಾಜಕೀಯ ಪ್ರೇರಿತವಾಗಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪಿಆರ್‌ಸಿ ಕುರಿತು ಈಗಾಗಲೇ ಸ್ಪಷ್ಟವಾದ ಮಾಹಿತಿ ನೀಡಿದ್ದಾರೆಂದು ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರ ಪ್ರಸನ್ನ ನಾಯ್ಕ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಕ್ರಮ ಬಾಂಗ್ಲಾ ವಲಸಿಗರು ಕರ್ನಾಟಕಕ್ಕೆ ಬಂದಿರುವ ಮಾಹಿತಿ ಇದೆ ಎಂದು ಪತ್ರಿಕೆಗಳಿಗೆ ಹೇಳಿಕೆ ನೀಡಿರುವ ರೂಪಾಲಿ ನಾಯ್ಕರವರು ತಮ್ಮ ಬಳಿ ಮಾಹಿತಿ ಇದ್ದಾಗಲೂ ದೂರು ನೀಡಿಲ್ಲ ಎಕೆ ಎಂದು ಪ್ರಶ್ನಿಸಿದರು.

ಪಂಡಿತ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಅಗತೈವಿರುವ ವೈದ್ಯಕೀಯ ಉಪಕರಣ, ತಜ್ಞ ವೈದ್ಯರ ನೇಮಕಾತಿ ಸೇರಿ ಎಲ್ಲವನ್ನು ಮಾಡುವ ಉದ್ದೇಶ ಶಾಸಕ ಭೀಮಣ್ಣ ನಾಯ್ಕರಿಗೆ ಇದೆ. ಆ ನಿಟ್ಟಿನಲ್ಲಿ ಶಾಸಕರು ಆಸ್ಪತ್ರೆ ವಿಚಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಪಂಡಿತ ಸಾರ್ವಜನಿಕ ಸರಕಾರಿ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೆಲ್ದರ್ಜೆಗೇರಿಸಲು ಎಲ್ಲಾ ರೀತಿಯ ಪ್ರಯತ್ನ ನಡೆದಿದೆ ಎಂದು ಹೇಳಿದರು.

ಈ ಸಂದರ್ಭ ಕಾಂಗ್ರೆಸ್ ಪ್ರಮುಖರಾದ ಜಗದೀಶ ಗೌಡ್ರು, ಸುಮಾ ಉಗ್ರಾಣಕರ್, ಜ್ಯೋತಿ ಗೌಡ, ಶ್ರೀನಿವಾಸ ನಾಯ್ಕ, ಪ್ರಸನ್ನ ಶೆಟ್ಟಿ, ಭಾಸ್ಕರ ಶೆಟ್ಟಿ, ಮಹೇಶ ನಾಯ್ಕ, ದತ್ತುರಾವ್ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೀವನ ನಿರ್ವಹಣೆಗೆ ಪದವಿ ಮುಖ್ಯವಲ್ಲ, ಕೌಶಲ್ಯ ಬೇಕು
ಹೂಳು ತುಂಬಿದ ಚರಂಡಿ ದುರಸ್ತಿ ಮಾಡಿ: ಡಂಬಳ ಗ್ರಾಮಸ್ಥರ ಆಗ್ರಹ