ತಪ್ಪು ಅಭ್ಯರ್ಥಿ ಆಯ್ಕೆ ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು

KannadaprabhaNewsNetwork |  
Published : Jun 08, 2024, 12:32 AM IST
್್್‌ | Kannada Prabha

ಸಾರಾಂಶ

ಉತ್ತರ ಪ್ರದೇಶದ ಅಯೋಧ್ಯೆ ಲೋಕಸಭಾ ಕ್ಷೇತ್ರದಲ್ಲಿ ತಪ್ಪು ಅಭ್ಯರ್ಥಿ ಆಯ್ಕೆಯೇ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಉತ್ತರ ಪ್ರದೇಶದ ಅಯೋಧ್ಯೆ ಲೋಕಸಭಾ ಕ್ಷೇತ್ರದಲ್ಲಿ ತಪ್ಪು ಅಭ್ಯರ್ಥಿ ಆಯ್ಕೆಯೇ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆಯೇ ತಪ್ಪಾಗಿದೆ. ಇದೇ ಕಾರಣಕ್ಕಾಗಿ ಸೋಲು ಅನುಭವಿಸಿದೆ. ಈ ಚುನಾವಣೆಯಲ್ಲಿ ಮತದಾರರು ಅರ್ಹ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ. ಮತದಾನ ಮಾಡುವುದು, ಅಭ್ಯರ್ಥಿ ಆಯ್ಕೆ ಅವರವರ ವೈಯಕ್ತಿಕ ವಿಚಾರ. ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸರಿಯಾಗಿರಲಿಲ್ಲ. ಹಾಗಾಗಿಯೇ ಬಿಜೆಪಿ ಸೋತಿರಬಹುದು ಎಂಬುವುದು ನಮ್ಮ ಗಮನಕ್ಕೆ ಬಂದಿದೆ ಎಂದು ತಿಳಿಸಿದರು.ಅಯೋಧ್ಯೆಯಲ್ಲಿ ರಾಮಮಂದಿರ ಬಳಿಕ ಕಾಶಿ ವಿಶ್ವನಾಥ ದೇವಸ್ಥಾನ ಮಥುರಾದ ಶ್ರೀಕೃಷ್ಣ ಜನ್ಮಸ್ಥಳದ ಮೂಲ ನಿವೇಶಗಳನ್ನು ಕಾನೂನು ಮತ್ತು ಸಂವಿಧಾನದ ಮೂಲಕ ಹಿಂಪಡೆಯುವ ಪ್ರಕ್ರಿಯೆ ಪ್ರಗತಿ ಹಂತದಲ್ಲಿದೆ. ಎಲ್ಲವೂ ಕಾನೂನು ಪ್ರಕಾರವೇ ನಡೆಸಲಾಗುತ್ತಿದೆ ಎಂದರು.ರಾಜ್ಯ ಸರ್ಕಾರ ಹಿಂದೂ ಧಾರ್ಮಿಕ ಕೇಂದ್ರ, ಮಠ, ಮಂದಿರಗಳನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತೆಗೆದುಕೊಳ್ಳಲು ಮುಂದಾಗಿರುವ ಕ್ರಮ ಸರಿಯಲ್ಲ. ಎಲ್ಲರನ್ನೂ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!