ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಡಿಸಿಗೆ ದೂರು

KannadaprabhaNewsNetwork |  
Published : Oct 11, 2026, 03:45 AM IST
ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾದಿಂದ ಡಿಸಿಗೆ ಮನವಿ  | Kannada Prabha

ಸಾರಾಂಶ

ಕಾರ್ಕಳದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರ, ಶಾಸಕರ ಮತ್ತು ನಾಯಕರ ವಿರುದ್ಧ ಕಾಂಗ್ರೆಸ್ ಭಾಷಣಗಾರರು ನಡೆಸಿದ ವೈಯಕ್ತಿಕ ತೇಜೋವಧೆಯನ್ನು ಖಂಡಿಸಿ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಉಡುಪಿ; ಕಾರ್ಕಳದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರ, ಶಾಸಕರ ಮತ್ತು ನಾಯಕರ ವಿರುದ್ಧ ಕಾಂಗ್ರೆಸ್ ಭಾಷಣಗಾರರು ನಡೆಸಿದ ವೈಯಕ್ತಿಕ ತೇಜೋವಧೆಯನ್ನು ಖಂಡಿಸಿ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಅ.5ರಂದು ಮಾಜಿ ಸಚಿವ, ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ನೇತೃತ್ವದಲ್ಲಿ ಜಿಲ್ಲೆಯ ಸಂಸದರು, ಶಾಸಕರು, ಬಿಜೆಪಿ ನಾಯಕರುಗಳು ಉಪಸ್ಥಿತಿಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯಗಳನ್ನು ವಿರೋಧಿಸಿ ಕಾರ್ಕಳದಲ್ಲಿ ನಡೆದ ಬೃಹತ್ ಪ್ರತಿಭಟನೆಗೆ ಪ್ರತಿಯಾಗಿ ಕಾರ್ಕಳ ಕಾಂಗ್ರೆಸ್ ವತಿಯಿಂದ ಅ. 8ರಂದು ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು, ಬಿಜೆಪಿ ಸಂಸದರು, ಶಾಸಕರ ವಿರುದ್ಧ ಕೀಳು ಮಟ್ಟದ ವೈಯಕ್ತಿಕ ನಿಂದನೆ, ತೇಜೋವಧೆ ಮಾಡಿದ್ದಾರೆ ಎಂದು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಆರೋಪಿಸಿದೆ.ಕಾಂಗ್ರೆಸ್ ನಾಯಕರು ಪದೇಪದೇ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಸಹಿತ ಸತ್ಯಕ್ಕೆ ದೂರವಾದ ವಿಚಾರಗಳನ್ನೇ ಬಂಡವಾಳ ಮಾಡಿಕೊಂಡು ಬಿಜೆಪಿ ಜನಪ್ರತಿನಿಧಿಗಳು ಮತ್ತು ನಾಯಕರನ್ನು ಅವಾಚ್ಯ ಪದಗಳಿಂದ ತೆಗಳಿ, ಹೀಯಾಳಿಸುತಿದ್ದಾರೆ. ಈ ಕಾಂಗ್ರೆಸ್ ಮುಖಂಡರ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಂಡು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಷಾ ಪ್ರಕಾಶ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಜ್ಯೋತಿ ಉದಯ ಪೂಜಾರಿ, ನಳಿನಿ ಪ್ರದೀಪ್ ರಾವ್, ಪ್ರಮುಖರಾದ ನೀತಾ ಪ್ರಭು, ಮಂಜುಳಾ ಪ್ರಸಾದ್, ವಿದ್ಯಾ ಶ್ಯಾಮಸುಂದರ್, ಗ್ರಾಮಾಂತರ ಅಧ್ಯಕ್ಷೆ ರಮ್ಯಾ ರಾವ್, ಭಾರತಿ ಚಂದ್ರಶೇಖರ್, ದಯಾಶಿನಿ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನ ದಕ್ಷ ಬಳಕೆ ಎಲ್ಲರಿಗೂ ಅನಿವಾರ್ಯ: ಅನಂತ ಪದ್ಮನಾಭ
ಪ್ರಜಾಪ್ರಭುತ್ವ ಆಶಯ ಅರಿಯಲು ಯುವಸಂಸತ್ತು ಸಹಕಾರಿ: ಪ್ರೊ.ಆಲೂರ