ಹಾಲಿನ ದರಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

KannadaprabhaNewsNetwork |  
Published : Nov 04, 2026, 12:15 AM IST
್ಿ್ಿಿ್ | Kannada Prabha

ಸಾರಾಂಶ

ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಮಂಗಳವಾರ ನಗರದ ಬಿಜಿಎಸ್ ವೃತ್ತದಲ್ಲಿ ಹಾಲಿನ ಖಾಲಿ ಕ್ಯಾನ್ ಹೊತ್ತು ಪ್ರತಿಭಟನೆ ನಡೆಸಿದರು. ಏರಿಸಿರುವ ಹಾಲಿನ ದರ ವಾಪಸ್ ಪಡೆಯುವಂತೆ ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಮಂಗಳವಾರ ನಗರದ ಬಿಜಿಎಸ್ ವೃತ್ತದಲ್ಲಿ ಹಾಲಿನ ಖಾಲಿ ಕ್ಯಾನ್ ಹೊತ್ತು ಪ್ರತಿಭಟನೆ ನಡೆಸಿದರು. ಏರಿಸಿರುವ ಹಾಲಿನ ದರ ವಾಪಸ್ ಪಡೆಯುವಂತೆ ಒತ್ತಾಯಿಸಿದರು.

ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಹಿಳಾ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಾಲಿನ ದರಏರಿಕೆಯಿಂದ ಸಾಮಾನ್ಯ ಕುಟುಂಬಗಳು, ಅದರಲ್ಲೂ ಮಕ್ಕಳಿಗೆ ಹಾಲು ನೀಡುವ ತಾಯಂದಿರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಕಿಡಿಕಾರಿದರು.

ಈ ವೇಳೆ ಮಾತನಾಡಿದ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಚೈತ್ರಾ ಮಂಜುನಾಥ್, ರಾಜ್ಯದ ಕಾಂಗ್ರೆಸ್ ಸರ್ಕಾರ 2023 ರಿಂದ ನಾಲ್ಕು ಬಾರಿ ಹಾಲಿನ ದರ ಹೆಚ್ಚಳ ಮಾಡಿದೆ. ಇದರಿಂದ ಜನ ಸಾಮಾನ್ಯರ ಕುಟುಂಬದ ಮೇಲೆ ಹೆಚ್ಚುವರಿ ಹೊರೆ ಬಿದ್ದಿದೆ. ಮಕ್ಕಳಿಗೆ ನಿತ್ಯ ನೀಡುವ ಹಾಲಿನ ದರವೂ ಹೆಚ್ಚಳವಾಗಿರುವುದರಿಂದ ತಾಯಂದಿರಾಗಿ ನಾವು ಬೀದಿಗಿಳಿದು ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದರು.

ಹಾಲು ಉತ್ಪಾದಕರಿಗೆ ನೀಡಬೇಕಾಗಿರುವ ಬಾಕಿ ಪ್ರೋತ್ಸಾಹ ಧನ ನೀಡದ ಸರ್ಕಾರ ಹಾಲಿನ ಬೆಲೆ ಹೆಚ್ಚಳ ಮಾಡಿ ರೈತರ ಕಣ್ಣೊರೆಸುವ ತಂತ್ರ ಮಾಡಿ ಸಾಮಾನ್ಯ ಜನರನ್ನು ಕಷ್ಟಕ್ಕೆ ಸಿಲುಕಿಸಿದೆ. ಸರ್ಕಾರ ತನ್ನ ಬೊಕ್ಕಸದಿಂದಲೇ ಪ್ರೋತ್ಸಾಹಧನ ನೀಡಬೇಕು. ಗ್ರಾಹಕರಿಗೆ ಹೇರಬಾರದು. ಉಚಿತ ಯೋಜನೆಗಳನ್ನು ಜಾರಿಗೊಳಿಸುವ ಹೆಸರಿನಲ್ಲಿ ಜನರ ಜೇಬಿಗೆ ಕತ್ತರಿ ಹಾಕುವುದು ಎಷ್ಟು ಸಮಂಜಸ ಎಂದು ಚೈತ್ರಾ ಮಂಜುನಾಥ್‌ ಪ್ರಶ್ನಿಸಿದರು.

ಸರ್ಕಾರ ಕೂಡಲೇ ಹಾಲಿನ ದರಏರಿಕೆ ನಿರ್ಧಾರವನ್ನು ಹಿಂಪಡೆದು, ಹೆಚ್ಚಿಸಿರುವ ದರವನ್ನು ತಕ್ಷಣ ಇಳಿಸಬೇಕು. ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಮಹಿಳಾ ಮೋರ್ಚಾ ವತಿಯಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.ಬಿಜೆಪಿ ಹಿರಿಯ ಮುಖಂಡ, ಜಿ.ಪಂ. ಮಾಜಿ ಅಧ್ಯಕ್ಷ ವೈ.ಎಚ್. ಹುಚ್ಚಯ್ಯ ಮಾತನಾಡಿ, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಬದಲಾಗಿ ದಿನ ಬಳಕೆಯ ವಸ್ತುಗಳು, ಹಾಲು ಸೇರಿದಂತೆ ವಿವಿಧ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ಬಡವರ ಬದುಕು ದುಸ್ತ ರವಾಗಿದೆ ಎಂದು ಟೀಕಿಸಿದರು.

ಪರಿಶಿಷ್ಟ ಪಂಗಡದಕಲ್ಯಾಣಕ್ಕೆ ಮೀಸಲಾಗಿದ್ದ 187 ಕೋಟಿ ರು.ಗಳನ್ನು ಚುನಾವಣೆಗೆ ಬಳಸಿಕೊಂಡು ಆ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ, ಬರದ ಬೇಗೆಯಲ್ಲಿ ಜನ ತತ್ತರಿಸಿದ್ದಾರೆ, ಅವರ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಯತ್ನವನ್ನೂ ಸರ್ಕಾರಮಾಡುತ್ತಿಲ್ಲ. ಈ ಸರ್ಕಾರದ ಆಡಳಿತ ವೈಖರಿಗೆ ರಾಜ್ಯದ ಜನ ಬೇಸತ್ತಿದ್ದಾರೆ. ಮಂತ್ರಿಮಂಡಲವನ್ನು ಕೂಡಲೇ ವಿಸರ್ಜಿಸಿ ಚುನಾವಣೆಗೆ ಹೋಗಲಿ ಎಂದು ವೈ.ಎಚ್. ಹುಚ್ಚಯ್ಯ ಒತ್ತಾಯಿಸಿದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಭೈರಣ್ಣ, ಕಾರ್ಯದರ್ಶಿ ಕೆ. ವೇದಮೂರ್ತಿ, ಖಜಾಂಚಿ ಗಣೇಶ್‌ಪ್ರಸಾದ್, ಮಹಿಳಾ ಮೋರ್ಚಾ ನಗರಅಧ್ಯಕ್ಷೆ ಬಿ.ಎಚ್. ವಸಂತ, ನಗರ ಅಧ್ಯಕ್ಷ ಧನುಷ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸತ್ಯಮಂಗಲ ಜಗದೀಶ್, ಮುಖಂಡರಾದ ಬನಶಂಕರಿ ಬಾಬು, ಹನುಮಂತರಾಜು, ಬಂಬೂ ಮೋಹನ್, ರೇಖಾ ಶಿವಕುಮಾರ್, ತಾರಾದೇವಿ, ಡಾ.ಫರ್ಜಾನ ರಹಿಂಜೆ, ವೆಂಕಟೇಶಾಚಾರ್, ಕಲ್ಪನಾ ಪ್ರಸಾದ್, ಅಂಬುಜಾ, ಕವಿತಾ ರವಿಚಂದ್ರ, ಚೆನ್ನಮ್ಮ, ಗಾಯತ್ರಿ ಮಂಜುನಾಥ್, ವಿಜಯಲಕ್ಷ್ಮಿ, ನೇತ್ರಾವತಿ, ಪುಷ್ಪಾ ಪಾಲಾಕ್ಷಯ್ಯ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರ ಚೆನ್ನಮ್ಮ, ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ
ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌