ವಿಜಯಪುರ : ಬಿಜೆಪಿ ಸದಸ್ಯತ್ವ ಅಭಿಯಾನ ಸೆ.2 ರಿಂದ ಆರಂಭ : 3.50 ಲಕ್ಷ ಸದಸ್ಯತ್ವ ಗುರಿ

KannadaprabhaNewsNetwork |  
Published : Aug 30, 2024, 02:04 AM ISTUpdated : Aug 30, 2024, 11:31 AM IST
ಬಿಜೆಪಿ ಸದಸ್ಯತ್ವ ಅಭಿಯಾನ-2024ರ ಪೂರ್ವಭಾವಿ ಸಭೆ | Kannada Prabha

ಸಾರಾಂಶ

  ಬಿಜೆಪಿ ಸದಸ್ಯತ್ವ ಅಭಿಯಾನ ಸೆ.2 ರಿಂದ ಆರಂಭವಾಗಲಿದ್ದು, ಪ್ರತಿ ಬೂತ್‌ಗೆ 300ರಂತೆ ಪ್ರತಿ ಮಂಡಲಕ್ಕೆ 40 ಸಾವಿರ ಹೊಸ ಸದಸ್ಯರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಜಿ ಶಾಸಕ ಪಿ.ರಾಜೀವ ಕರೆ ನೀಡಿದರು.

 ವಿಜಯಪುರ :  ಬಿಜೆಪಿ ಸದಸ್ಯತ್ವ ಅಭಿಯಾನ ಸೆ.2 ರಿಂದ ಆರಂಭವಾಗಲಿದ್ದು, ಪ್ರತಿ ಬೂತ್‌ಗೆ 300ರಂತೆ ಪ್ರತಿ ಮಂಡಲಕ್ಕೆ 40 ಸಾವಿರ ಹೊಸ ಸದಸ್ಯರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಜಿ ಶಾಸಕ ಪಿ.ರಾಜೀವ ಕರೆ ನೀಡಿದರು.

ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸದಸ್ಯತ್ವ ಅಭಿಯಾನ-2024ರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿಯ ಸದಸ್ಯತ್ವ ಅಭಿಯಾನ ವಿಭಿನ್ನವಾಗಿದ್ದು, ಕೇವಲ ಮಿಸ್ ಕಾಲ ನೀಡಿದರೆ ಸದಸ್ಯರಾಗಲ್ಲ. ಮೊಬೈಲ್‌ಗೆ ಬರುವ ಒಟಿಪಿ ಬಳಸಿ ಐಡಿ ಕಾರ್ಡ್ ಆದ ನಂತರವೇ ಸದಸ್ಯತ್ವ ಪೂರ್ತಿಯಾದಂತೆ. ಅದನ್ನು ಕಾರ್ಯಕರ್ತರು ಗಮನಿಸಬೇಕು ಹೇಳಿದರು.

ಸದಸ್ಯತ್ವ ಅಭಿಯಾನದಲ್ಲಿ ಪ್ರತಿ ಮತಕ್ಷೇತ್ರ-ಮಂಡಲದ ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ಶಾಸಕರು, ಮಾಜಿ ವಿಧಾನ ಪರಿಷತ್, ಜಿಪಂ ಹಾಗೂ ತಾಪಂ ಮಾಜಿ ಸದಸ್ಯರು ಮಾಜಿ ಮಹಾನಗರ ಪಾಲಿಕೆಗಳ ಸದಸ್ಯರು ಕೂಡ ಪ್ರತಿ ಮನೆಗಳಿಗೆ ಹೋಗಿ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಕಾರ್ಯಕರ್ತರಿಗೆ ಯಾವುದೇ ಸೂಚನೆ ಬರದಿದ್ದರೂ ಸ್ವಯಂಪ್ರೇರಿತವಾಗಿ ಅಭಿಯಾನದಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು. ಈ ಮೂಲಕ ವಿಜಯಪುರ ಜಿಲ್ಲೆಯಲ್ಲಿ 3.50 ಲಕ್ಷ ಹೊಸ ಸದಸ್ಯರ ಐಡಿ ರಚಿಸಬೇಕು. ಸೆ.2ರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದು, ಸೆ.30 ರೊಳಗಾಗಿ ಅಭಿಯಾನ ಪೂರ್ತಿಗೊಳಿಸಬೇಕು ಎಂದರು.ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಬಿಜೆಪಿ ಸದಸ್ಯತ್ವ ಅಭಿಯಾನದಿಂದ ಪಕ್ಷದ ಸಂಘಟನೆಗೆ ಹೆಚ್ಚಿನ ಬಲ ಬರಲಿದೆ. ಕಾರ್ಯಕರ್ತರು ಪ್ರಾಮಾಣಿಕವಾಗಿ ಜವಾಬ್ದಾರಿ ವಹಿಸಿ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್.ಪಾಟೀಲ ಕೂಚಬಾಳ ಮಾತನಾಡಿ, ಮುಂದಿನ 1 ತಿಂಗಳ ಕಾಲ ಸದಸ್ಯತ್ವ ಅಭಿಯಾನಕ್ಕೆ ಕಾರ್ಯಕರ್ತರು ದುಡಿಯಬೇಕು. ಆ ಮೂಲಕ ಜಿಲ್ಲಾದ್ಯಂತ ಯಶಸ್ವಿಯಾಗಿ ಸದಸ್ಯತ್ವ ಅಭಿಯಾನ ಮಾಡುವಂತೆ ಕೋರಿದರು.

ಈ ಸಂದರ್ಭದಲ್ಲಿ ವೇದಿಕೆ ಮೇಲೆ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಮಾಜಿ ಶಾಸಕರಾದ ರಮೇಶ ಭೂಸನೂರ, ಸೋಮನಗೌಡ ಪಾಟೀಲ, ಮುಖಂಡರಾದ ವಿಜುಗೌಡ ಪಾಟೀಲ, ಬಸವರಾಜ ಯಂಕಂಚಿ, ಚಂದ್ರಶೇಖರ ಕವಟಗಿ, ಕಾಸುಗೌಡ ಬಿರಾದಾರ, ಸಂಜೀವ ಐಹೊಳೆ, ಸ್ವಪ್ನಾ ಕಣಮುಚನಾಳ, ಈರಣ್ಣ ರಾವೂರ, ಸಾಬು ಮಾಶ್ಯಾಳ, ಮುಳುಗೌಡ ಪಾಟೀಲ, ರಾಜ್ಯ ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಜೆಟಲ್ಲಿ ಹೇಳಿದಂತೆ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಶೀಘ್ರ: ಮಧು
ಬೆಂಗಳೂರಿನ ಕೊಳಚೆ ನೀರಿಂದ ತರಕಾರಿಯೂ ವಿಷ : ಸಂಸತ್ತಲ್ಲಿ ಗೌಡ