ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಭವ್ಯ ಭಾರತದ ಭವಿಷ್ಯಕ್ಕಾಗಿ ಬಿಜೆಪಿ ಸದಸ್ಯತ್ವ ಅಭಿಮಾನ ಮಾಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಇಂಡುವಾಳು ಎಸ್. ಸಚ್ಚಿದಾನಂದ ಹೇಳಿದರು.ತಾಲೂಕಿನ ಚನ್ನಹಳ್ಳಿಯಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರ ಜೊತೆಗೂಡಿ ಸದಸ್ಯತ್ವ ಅಭಿಮಾನ ನಡೆಸಿ ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಕೂಡ ಬಿಜೆಪಿ ಸದಸ್ಯರನ್ನಾಗಿ ಮಾಡುವ ನಿಟ್ಟಿನಲ್ಲಿ ಯುವಕರು, ಹಿರಿಯರು, ಕಾರ್ಮಿಕರು, ಸಣ್ಣ, ಸಣ್ಣ ವ್ಯಾಪಾರಸ್ಥರು ಸೇರಿದಂತೆ ಇತರನ್ನು ಸದಸ್ಯತ್ವ ನೀಡಲಾಗುತ್ತಿದೆ. ದೇಶದಲ್ಲಿ ಬಿಜೆಪಿ ಜನಪರವಾಗಿದ್ದು, ಬಹುತೇಕ ಮಂದಿ ಇಷ್ಟುಪಡುವ ಪಕ್ಷ. ಹಾಗಾಗಿ ಸ್ವಯಂ ಪ್ರೇರಣೆಯಿಂದ ಪಕ್ಷದ ಸದಸ್ಯತ್ವ ಪಡೆಯುತ್ತಿದ್ದಾರೆ ಎಂದರು.
ಈ ವೇಳೆ ಸಿ.ವಿ.ನವೀನ್‌ಕುಮಾರ್, ಗೋವರ್ಧನ್, ಅಂಬರೀಶ್, ರವಿಕುಮಾರ್, ಯೋಗೇಶ್, ನಾಗರಾಜು, ನಿತಿನ್, ರಾಹುಲ್, ಬೋರೇಗೌಡ, ದೇವರಾಜು, ಶ್ರೀನಿವಾಸ್, ಸತೀಶ, ಪುನಿ, ರವಿ, ಸಚಿನ್ ಸೇರಿದಂತೆ ಇತರರು ಜೊತೆಯಲ್ಲಿದ್ದರು.ಇಂದು ಮುನಿರತ್ನ ವಿರುದ್ಧ ಪ್ರತಿಭಟನಾ ರ್‍ಯಾಲಿ: ಸುರೇಶ್ ಕಂಠಿ
ಕನ್ನಡಪ್ರಭ ವಾರ್ತೆ ಮಂಡ್ಯಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದಿಂದ ಅ.1ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜಾತಿ ಹೆಸರಿನಲ್ಲಿ ಮಹಿಳೆಯರು ಮತ್ತಿತರರನ್ನು ನಿಂದಿಸಿ ಮಾತನಾಡಿರುವ ಶಾಸಕ ಮುನಿರತ್ನ ವಿರುದ್ಧ ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ತಿಳಿಸಿದರು.ಶಾಸಕ ಮುನಿರತ್ನ ಅವರು ಮಹಿಳೆಯರು ಒಳಗೊಂಡಂತೆ ಪರಿಶಿಷ್ಟ ಮತ್ತು ಒಕ್ಕಲಿಗ ಸಮುದಾಯಗಳ ಬಗ್ಗೆ ಅತ್ಯಂತ ಕೀಳು ಮಟ್ಟದ ಭಾಷೆ ಬಳಸಿ ಅಶ್ಲೀಲ ಮತ್ತು ಅಸಭ್ಯವಾಗಿ ನಿಂದಿಸಿರುವುದು ರಾಜ್ಯದ 7 ಕೋಟಿ ಪ್ರಜ್ಞಾವಂತ ಕನ್ನಡಿಗರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು. ಅಕ್ರಮವಾಗಿ ಗಳಿಸಿರುವ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಕರ್ನಾಟಕ ರಾಜ್ಯದಿಂದ ಗಡಿಪಾರು ಮಾಡಬೇಕು. ಮುನಿರತ್ನ ಅವರಿಗೆ ರಾಜಕೀಯ ಬಹಿಷ್ಕಾರ ಹಾಕಬೇಕು. ಆರೋಪಿ ಮುನಿರತ್ನ ಪ್ರಕರಣ ಸಂಬಂಧ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಯನ್ನು ನಿಗಧಿತ ಕಾಲಮಿತಿಯಲ್ಲಿ ಮುಗಿಸಲು ಸೂಚಿಸಬೇಕು ಎಂದು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ ಎಂದರು. ನಗರಸಭೆ ಸದಸ್ಯ ಶ್ರೀಧರ್, ಇತರರು ಗೋಷ್ಠಿಯಲ್ಲಿದ್ದರು.