ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕರಸಭೆಗೆ ಬ್ರೇಕ್‌: ಅಶೋಕ್‌ ಸ್ಷಷ್ಟನೆ

KannadaprabhaNewsNetwork |  
Published : Jun 24, 2026, 02:00 AM IST
ಆರ್‌.ಅಶೋಕ್‌  | Kannada Prabha

ಸಾರಾಂಶ

ವಿಧಾನ ಪರಿಷತ್‌ ಚುನಾವಣೆ ವೇಳೆ ನಡೆದ ಅಡ್ಡಮತದಾನ ಸಂಬಂಧ ಆಣೆ-ಪ್ರಮಾಣಕ್ಕಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮಾಡುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಸ್ಪಷ್ಟಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ನವದೆಹಲಿ

ವಿಧಾನ ಪರಿಷತ್‌ ಚುನಾವಣೆ ವೇಳೆ ನಡೆದ ಅಡ್ಡಮತದಾನ ಸಂಬಂಧ ಆಣೆ-ಪ್ರಮಾಣಕ್ಕಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮಾಡುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನವೀನ್‌ ಭೇಟಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಚರ್ಚಿಸಿದ್ದರು. ಬಳಿಕ, ಈ ವಿಚಾರವಾಗಿ ನಾನು ಪಕ್ಷದ ಹಿರಿಯ ನಾಯಕರ ಜೊತೆ ಚರ್ಚೆ ಮಾಡಿದೆ. ಬಹುತೇಕ ಶಾಸಕರು ಬೇಡ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ತರದ ರಾಜಕೀಯ ಮೊದಲ ಬಾರಿಗೆ ಆಗುತ್ತಿಲ್ಲ. ಹೀಗಾಗಿ, ಇಂತಹ ರಾಜಕೀಯ ವಿಚಾರದಲ್ಲಿ ಪವಿತ್ರ ಕ್ಷೇತ್ರವಾದ ಧರ್ಮಸ್ಥಳವನ್ನು ಎಳೆದು ತರುವುದು ಬೇಡ ಎಂದು ನಿರ್ಧರಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.ಕ್ರಮ ಆಗುತ್ತೆ-ವಿಜಯೇಂದ್ರ:ಪರಿಷತ್‌ ಚುನಾವಣೆಯಲ್ಲಿ ನಡೆದ ಅಡ್ಡಮತದಾನವನ್ನು ಪಕ್ಷದ ಹೈಕಮಾಂಡ್‌ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿ, ಧರ್ಮಸ್ಥಳ ಆಣೆ-ಪ್ರಮಾಣ ವಿಚಾರದಲ್ಲಿ ನನ್ನ ಅಭಿಪ್ರಾಯ ಹಂಚಿಕೊಂಡಿದ್ದೇನೆ. ವಿಪಕ್ಷ ನಾಯಕರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.ಅಡ್ಡಮತದಾನ ಮಾಡಿದವರ ವಿರುದ್ಧ ಕ್ರಮ ಆಗುತ್ತೆ. ರಹಸ್ಯ ಮತದಾನ ಆದರೂ, ಅಡ್ಡಮತದಾನ ಮಾಡಿದವರು ಯಾರು ಎಂಬುದು ಬಯಲಿಗೆ ಬರುತ್ತೆ. ಅವರನ್ನು ಹುಡುಕಿ, ತಕ್ಕ ಪಾಠ ಕಲಿಸುತ್ತೇವೆ ಎಂದು ಕಿಡಿಕಾರಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಂಧ್ರ ಜೋಳ ಕರ್ನಾಟಕದಲ್ಲಿ ಮಾರಾಟ ಮಾಡುವ ಜಾಲ ಪತ್ತೆ; ಪ್ರಕರಣ ದಾಖಲು
ರಾಸಾಯನಿಕ ಗೊಬ್ಬರ ತಗ್ಗಿಸಿ, ಸಾವಯವ ಕೃಷಿಗೆ ಆದ್ಯತೆ ನೀಡಿ