ರಾಮನಗರ: ದಕ್ಷಿಣ ಭಾರತದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸದಿದ್ದರೆ ಪ್ರತ್ಯೇಕ ದೇಶದ ಧ್ವನಿ ಏಳುತ್ತದೆ ಅಂತ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಅನ್ಯಾಯವಾದಾಗ ಪ್ರತಿಭಟಿಸೋದು ತಪ್ಪಾ. ಇಲ್ಲ ಬಿಜೆಪಿ ಸಂಸದರಂತೆ ಶೋ ಪೀಸ್ ಆಗಿರಬೇಕಾ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ. ಬಾಲಕೃಷ್ಣ ವ್ಯಂಗ್ಯವಾಡಿದರು.
ದೇಶ ಕಟ್ಟಿದ್ದು ಇದೇ ಕಾಂಗ್ರೆಸ್ ಪಕ್ಷ. ಆದರೆ, ನಮಗಾಗುತ್ತಿರುವ ಅನ್ಯಾಯವನ್ನು ಸರಿಮಾಡಬೇಕು. ಅದಕ್ಕಾಗಿ ಹೋರಾಟ ಮಾಡಬೇಕಿದೆ. ಅನುದಾನದ ವಿಚಾರವಾಗಿ ಬಹಿರಂಗ ಚರ್ಚೆಗೆ ಬರಲಿ ಎಂದು ಬಿಜೆಪಿ ನಾಯಕರಿಗೆ ಆಹ್ವಾನ ನೀಡಿದರು.
ದೇಶದಲ್ಲಿ ಅತಿಹೆಚ್ಚು ತೆರಿಗೆ ಸಂಗ್ರಹಿಸುವ ರಾಜ್ಯಗಳ ಪೈಕಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಆ ತೆರಿಗೆ ಹಣವನ್ನು ಎಲ್ಲ ರಾಜ್ಯಗಳಿಗೂ ಹಂಚಿಕೆ ಮಾಡುತ್ತಿದೆ. ಈ ಬಗ್ಗೆ ನಮಗೆ ತಕರಾರು ಇಲ್ಲ. ಆದರೆ, ಕರ್ನಾಟಕಕ್ಕೆ ಸಿಗಬೇಕಾದ ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ. ಅದಕ್ಕಾಗಿ ಒತ್ತಾಯ ಮಾಡುತ್ತಿದ್ದೇವೆ ಎಂದು ಹೇಳಿದರು.ಕರ್ನಾಟಕದಿಂದ ಆಯ್ಕೆಯಾಗಿರುವ ಹೋಗಿರುವ ಬಿಜೆಪಿ ಸಂಸದರು ಪ್ರಧಾನಿ ಮೋದಿ ಎದುರು ಎದ್ದೆಳುವುದು ಇಲ್ಲ, ಕೂರುವುದು ಇಲ್ಲ. ಕೇವಲ ಬಸ್ಕಿ ಹೊಡೆದು ಬರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ನಾವಿದ್ದೀವಿ. ಇವರೆಲ್ಲರು ಮೋದಿ ಹೆಸರಿನಲ್ಲಿ ಗೆಲ್ಲುತ್ತಾರೆಯೋ ಹೊರತು ಯಾರಿಗೂ ವೈಯಕ್ತಿಕ ವರ್ಚಸ್ಸು ಎಂಬುದಿಲ್ಲ.
ತಮಿಳುನಾಡಿನ ಸಂಸದರು ತಮ್ಮ ರಾಜ್ಯದ ಹಕ್ಕಿಗಾಗಿ ಹೋರಾಟ ಮಾಡುತ್ತಾರೆ. ಅಂತಹ ಮನೋಭಾವನೆಯನ್ನು ಬೆಳೆಸಿಕೊಳ್ಳದ ಬಿಜೆಪಿ ಸಂಸದರು ದೆಹಲಿಯಲ್ಲಿ ಶೋ ಪೀಸ್ ಗಳಾಗಿದ್ದಾರೆ. ಟಿಎ - ಡಿಎ ತೆಗೆದುಕೊಂಡು ಬರುವುದನ್ನು ಬಿಟ್ಟರೆ ಬೇರೇನೂ ಮಾಡುತ್ತಿಲ್ಲ. ಮುಂಬರುವ ಸಂಸತ್ ಚುನಾವಣೆಯಲ್ಲಿ ಇಂತಹವರಿಗೆ ಜನರು ತಕ್ಕ ಪಾಠ ಕಲಿಸಬೇಕು ಎಂದರು.
ಮನಮೋಹನ್ ಸಿಂಗ್ ಅವಧಿಯಲ್ಲಿ ಬಜೆಟ್ ಗಾತ್ರ ಎಷ್ಟಿತ್ತು. ಈಗ ಮೋದಿ ಅವಧಿಯಲ್ಲಿ ಎಷ್ಟಾಗಿದೆ ಎಂಬುದನ್ನು ನೋಡಲಿ. ಅದನ್ನು ತುಲನೆ ಮಾಡಲಿ. ಆನಂತರ ಅನುದಾನ ಹಂಚಿಕೆ ವಿಚಾರವಾಗಿ ಚರ್ಚೆಗೆ ಬರಲಿ ಎಂದು ಬಾಲಕೃಷ್ಣ ಪಂಥಾಹ್ವಾನ ನೀಡಿದರು.
ಲೋಕಸಭಾ ಸದಸ್ಯ ಜನಸಾಮಾನ್ಯರ ಜೊತೆ ಬೆರೆತು ಕೆಲಸ ಮಾಡಬಹುದು ಎಂಬುದನ್ನು ಸುರೇಶ್ ತೋರಿಸಿಕೊಟ್ಟಿದ್ದಾರೆ. ಈ ವಿಚಾರವಾಗಿ ಬೇಕಿದ್ದರೆ ಸಾರ್ವಜನಿಕವಾಗಿ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.
ಕೋಟ್ .............
- ಎಚ್.ಸಿ. ಬಾಲಕೃಷ್ಣ, ಶಾಸಕರು, ಮಾಗಡಿ ಕ್ಷೇತ್ರ5ಕೆಆರ್ ಎಂಎನ್ 3.ಜೆಪಿಜಿ