ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ 50 ಕೋಟಿ ರು. ಆಫರ್‌: ಸಿದ್ದರಾಮಯ್ಯ

KannadaprabhaNewsNetwork | Updated : Mar 23 2024, 12:49 PM IST

ಸಾರಾಂಶ

ಬಿಜೆಪಿಯವರು ರಾಜ್ಯದಲ್ಲಿ ಆಪರೇಷನ್ ಕಮಲದ ಯತ್ನವನ್ನು ಮುಂದುವರೆಸಿದ್ದಾರೆ. ಈಗಲೂ ನಮ್ಮ ಶಾಸಕರಿಗೆ 50 ಕೋಟಿ ರು. ಆಫರ್‌ ಮಾಡಿ ಆಪರೇಷನ್‌ ಕಮಲಕ್ಕೆ ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ, ಬೆಂಗಳೂರು

ಬಿಜೆಪಿಯವರು ರಾಜ್ಯದಲ್ಲಿ ಆಪರೇಷನ್ ಕಮಲದ ಯತ್ನವನ್ನು ಮುಂದುವರೆಸಿದ್ದಾರೆ. ಈಗಲೂ ನಮ್ಮ ಶಾಸಕರಿಗೆ 50 ಕೋಟಿ ರು. ಆಫರ್‌ ಮಾಡಿ ಆಪರೇಷನ್‌ ಕಮಲಕ್ಕೆ ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್‌ ಕಮಲವನ್ನು ಮೊದಲು ಪ್ರಾರಂಭ ಮಾಡಿದ್ದೇ ಬಿಜೆಪಿ. ಅಂತಹವರ ಮೇಲೆ ಆದಾಯ ತೆರಿಗೆ ಅಥವಾ ಜಾರಿ ನಿರ್ದೇಶನಾಲಯದಿಂದ ಯಾವ ಕ್ರಮವೂ ಆಗುವುದಿಲ್ಲ. 

ಅವರ ಖಾತೆಗಳು ಜಪ್ತಿ ಆಗುವುದಿಲ್ಲ. ಈಗಲೂ ಕರ್ನಾಟಕದಲ್ಲಿ ಆಪರೇಷನ್‌ ಕಮಲಕ್ಕೆ ಯತ್ನ ನಡೆಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.ನಮ್ಮ ಶಾಸಕರಿಗೆ ರಾಜೀನಾಮೆ ನೀಡಿದರೆ 50 ಕೋಟಿ ರು. ನೀಡುತ್ತೇವೆ. 

ಉಪ ಚುನಾವಣೆ ಖರ್ಚು ನೋಡಿಕೊಳ್ಳುತ್ತೇವೆ ಎಂದು ಆಮಿಷ ಒಡ್ಡುತ್ತಿದ್ದಾರೆ. ತನ್ಮೂಲಕ ಬಿಜೆಪಿಯವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ನಾಶ ಮಾಡಲು ಹೊರಟಿದ್ದಾರೆ. 

ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಆದರೆ ನಮ್ಮ ಪಕ್ಷದ ಶಾಸಕರು ಗಟ್ಟಿಯಾಗಿ ಪಕ್ಷದ ಜತೆ ನಿಂತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share this article