ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

KannadaprabhaNewsNetwork |  
Published : Oct 18, 2023, 01:00 AM IST
ನರಸಿಂಹರಾಜಪುರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ನಡೆದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಅರುಣಕುಮಾರ್ ಮಾತನಾಡಿದರು | Kannada Prabha

ಸಾರಾಂಶ

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ಗುತ್ತಿಗೆದಾರನ ಮನೆಯೊಂದರಲ್ಲಿ ಸಿಕ್ಕಿದ 40 ಕೋಟಿ ರುಪಾಯಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಅರುಣಕುಮಾರ್ ಆಗ್ರಹಿಸಿದರು.ಅವರು ಮಂಗಳವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲೂಕು ಬಿಜೆಪಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಗುತ್ತಿಗೆದಾರರ ಸಂಘದ ಉಪಾಧ್ಯಕ್ಷನ ಮನೆಯಲ್ಲಿ ಕೋಟಿಗಟ್ಟಲೆ ಹಣ ದೊರೆತಿದೆ. ಈ ಮಾರ್ಗವಾಗಿ ಕಾಂಗ್ರೆಸ್ ಪಂಚ ರಾಜ್ಯಗಳ ಚುನಾವಣೆಗೆ ಹಣ ವರ್ಗಾವಣೆ ಮಾಡುವ ದಂಧೆ ಮಾಡುತ್ತಿರುವುದು ಸಾಬೀತಾಗಿದೆ. ಜನರಿಗೆ ಬಿಟ್ಟಿ ಭಾಗ್ಯಗಳ ಆಮಿಷವೊಡ್ಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯ ದಿವಾಳಿ ಆಗುವ ದಿನಗಳು ದೂರವಿಲ್ಲ ಎಂದು ಭವಿಷ್ಯ ನುಡಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿ: ಅರುಣ್‌ ಕುಮಾರ್ ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ಗುತ್ತಿಗೆದಾರನ ಮನೆಯೊಂದರಲ್ಲಿ ಸಿಕ್ಕಿದ 40 ಕೋಟಿ ರುಪಾಯಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಅರುಣಕುಮಾರ್ ಆಗ್ರಹಿಸಿದರು. ಅವರು ಮಂಗಳವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲೂಕು ಬಿಜೆಪಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಗುತ್ತಿಗೆದಾರರ ಸಂಘದ ಉಪಾಧ್ಯಕ್ಷನ ಮನೆಯಲ್ಲಿ ಕೋಟಿಗಟ್ಟಲೆ ಹಣ ದೊರೆತಿದೆ. ಈ ಮಾರ್ಗವಾಗಿ ಕಾಂಗ್ರೆಸ್ ಪಂಚ ರಾಜ್ಯಗಳ ಚುನಾವಣೆಗೆ ಹಣ ವರ್ಗಾವಣೆ ಮಾಡುವ ದಂಧೆ ಮಾಡುತ್ತಿರುವುದು ಸಾಬೀತಾಗಿದೆ. ಜನರಿಗೆ ಬಿಟ್ಟಿ ಭಾಗ್ಯಗಳ ಆಮಿಷವೊಡ್ಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯ ದಿವಾಳಿ ಆಗುವ ದಿನಗಳು ದೂರವಿಲ್ಲ ಎಂದು ಭವಿಷ್ಯ ನುಡಿದರು. ಬಿಜೆಪಿ ಮುಖಂಡ ಬಿ.ಎಸ್.ಆಶೀಶ್‌ ಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಭಾಗ್ಯಗಳ ಮೂಲಕ ಅಧಿಕಾರದ ಸೌಭಾಗ್ಯ ಪಡೆದುಕೊಂ ಡಿದೆ. ಅಧಿಕಾರ ಪಡೆದ ಕೆಲವೇ ದಿನಗಳಲ್ಲಿ ಲೂಟಿ ಪ್ರಾರಂಭಿಸಿದೆ. ಜನರ ಹಣವನ್ನು ಲೂಟಿ ಮಾಡಿ ಪಂಚ ರಾಜ್ಯಗಳ ಚುನಾವಣೆಗೆ ಹಣ ವರ್ಗಾವಣೆ ಮಾಡಲು ಮುಂದಾಗಿದೆ. ಬಿಟ್ಟಿ ಭಾಗ್ಯಗಳಿಂದ ಕರ್ನಾಟಕ ರಾಜ್ಯ ಈಗ ಕಗ್ಗತ್ತಲೆಯಲ್ಲಿ ಇರುವ ಪರಿಸ್ಥಿತಿ ನಿರ್ಮಾಣ ಮಾಡಿದೆ. 5 ಭಾಗ್ಯಗಳು ಇನ್ನೂ ಜನರಿಗೆ ಸರಿಯಾಗಿ ತಲುಪಿಲ್ಲ. ಕಾಂಗ್ರೆಸ್ ಸರ್ಕಾರದಿಂದ ರಾಜ್ಯದೆಲ್ಲೆಡೆ ಭ್ರಷ್ಟಾಚಾರ ತಾಂಡವ ಆಡುತ್ತಿದೆ ಎಂದು ಆರೋಪಿಸಿದರು. ಕಡಹಿನಬೈಲು ಗ್ರಾ.ಪಂ. ಸದಸ್ಯ ಎ.ಬಿ.ಮಂಜುನಾಥ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಿಟ್ಟಿ ಭಾಗ್ಯಗಳನ್ನು ನೀಡಲು ಹೋಗಿ ಗ್ರಾ.ಪಂ. ಮಟ್ಟದಲ್ಲೂ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದರು. ಸಭೆಯಲ್ಲಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ದಯಾನಂದ್, ಬಿಜೆಪಿ ಮುಖಂಡರಾದ ಬೆಮ್ಮನೆ ಮೋಹನ್, ಗ್ರಾ.ಪಂ. ಸದಸ್ಯ ಡಿ.ಆರ್.ಶ್ರೀನಾಥ್,ವಿಜಯಕುಮಾರ್‌, ಎನ್.ಎಂ.ಕಾಂತರಾಜ್, ಪ.ಪಂ. ಮಾಜಿ ಉಪಾಧ್ಯಕ್ಷೆ ಸಾವಿತ್ರಿ ಮಾತನಾಡಿದರು. ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಸುರಭಿರಾಜೇಂದ್ರ, ಮುಖಂಡರುಗಳಾದ ವೈ.ಎಸ್.ರವಿ,ಕೆಸವೆಮಂಜುನಾಥ್, ಎನ್.ಡಿ.ಪ್ರಸಾದ್, ಹೆರಂದೂರು ದಿವಾಕರ್,ಸೀತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ, ಉಪಾಧ್ಯಕ್ಷೆ ಪ್ರೇಮ, ಜಯಪಾಲ್, ಜಿ.ವಿ.ಸಂದೇಶ್,ಹಂಚಿನಮನೆ ರಾಘವೇಂದ್ರ, ಟಿ.ಆರ್.ಜಯರಾಂ,ಸೈಯದ್‌ಫರ್ವೀಜ್, ಮುರುಳಿ, ಅಣ್ಣಪ್ಪ, ಮುತ್ತಿನಕೊಪ್ಪನಾಗರಾಜ್, ಮಂಜುನಾಥ್‌ ಲಾಡ್, ವಿಜಯ ಮತ್ತಿತರರು ಉಪಸ್ಥಿತರಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ