ಕನ್ನಡಪ್ರಭ ವಾರ್ತೆ ಬೆಂಗಳೂರು
ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‌ಕುಮಾರ್, ವಿಧಾನಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಗುರುವಾರ ಸುದ್ದಿಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿದರು.
ಅಶೋಕ್ ಮಾತನಾಡಿ, ಸಂವಿಧಾನದ ಪ್ರಕಾರ ಧರ್ಮಾಧಾರಿತವಾದ ಮೀಸಲು ನೀಡಲು ಸಾಧ್ಯವಿಲ್ಲ. ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇ.5ರಷ್ಟು ಮೀಸಲು ಹೆಚ್ಚಿಸಿರುವುದರಿಂದ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗುತ್ತದೆ. ಈ ಸಂವಿಧಾನ ವಿರೋಧಿ, ಸಾಮಾಜಿಕ ನ್ಯಾಯ ವಿರೋಧಿ ಮೀಸಲಾತಿ ಹೆಚ್ಚಳವನ್ನು ಹಿಂಪಡೆಯುವವರೆಗೂ ಬಿಜೆಪಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.ಪ್ರಹ್ಲಾದ್ ಜೋಶಿ ಮಾತನಾಡಿ, ಯಾವುದರಲ್ಲೂ ಧರ್ಮಾಧಾರಿತ ಮೀಸಲಾತಿ ಕಲ್ಪಿಸುವುದು ಅಸಂವಿಧಾನಿಕ ಮತ್ತು ಕಾನೂನು ಬಾಹಿರ ಎಂಬುದನ್ನು ಸುಪ್ರೀಂಕೋರ್ಟ್ ಹೇಳಿದೆ. ಎಲ್ಲದರಲ್ಲೂ ಮುಸ್ಲಿಂರಿಗೆ ಮೀಸಲಾತಿ ನೀಡುತ್ತಿರುವುದರಿಂದ ಸಾಮಾನ್ಯ ವರ್ಗದ ಬಡವರಿಗೆ, ಎಸ್ಸಿ-ಎಸ್ಟಿ ಮತ್ತು ಒಬಿಸಿಗಳಿಗೆ ಬಹು ಅನ್ಯಾಯವಾಗುತ್ತದೆ. ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಇತರ ಸಮುದಾಯದವರಿಗೆ ದ್ರೋಹ ಬಗೆಯುತ್ತಿದೆ. ಇದನ್ನು ವಿರೋಧಿಸಿ ರಾಜಕೀಯ ಮತ್ತು ಕಾನೂನು ಹೋರಾಟಕ್ಕೆ ಇಳಿಯುತ್ತೇವೆ ಎಂದು ಸ್ಪಷ್ಟಪಡಿಸಿದರು.ಸುನೀಲ್‌ಕುಮಾರ್ ಮಾತನಾಡಿ, ಇದೊಂದು ಅತ್ಯಂತ ಕಳವಳಕಾರಿ ಸಂಗತಿ. ಮುಸಲ್ಮಾನರಿಗೆ ಆದ್ಯತೆಯ ನಿರ್ಧಾರ ತೆಗೆದುಕೊಂಡಿದ್ದು, ಉಳಿದ ಸಮುದಾಯಗಳು ಲೆಕ್ಕಕ್ಕೆ ಇಲ್ಲ ಎನ್ನುವ ಮಟ್ಟಿಗೆ ಈ ಸರ್ಕಾರದ ವರ್ತನೆ ಕಂಡುಬರುತ್ತಿದೆ. ಈ ನಡೆಯಿಂದ ಬೇರೆ ಬೇರೆ ವೈಫಲ್ಯಗಳನ್ನು ಮುಚ್ಚಿಹಾಕಿಕೊಳ್ಳುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇತ್ತೀಚೆಗಷ್ಟೇ ಎಲ್ಲ ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ಮುಗಿದಿರುವುದರಿಂದ ಹಲವು ಜಿಲ್ಲಾಧ್ಯಕ್ಷರ ನೇಮಕ ಸಂಬಂಧ ಅಸಮಾಧಾನ ತಲೆದೋರಿದೆ. ಜತೆಗೆ ಶೀಘ್ರದಲ್ಲೇ ಜಿಲ್ಲಾ ಪದಾಧಿಕಾರಿಗಳನ್ನು ನೇಮಿಸಬೇಕಾಗಿದೆ. ಹೀಗಾಗಿ, ಜಿಲ್ಲಾ ಮಟ್ಟದಲ್ಲಿ ಒಂದು ಸಮರ್ಥ ತಂಡ ರಚಿಸುವ ಉದ್ದೇಶದಿಂದ ಅಡೆತಡೆಗಳನ್ನು ನಿವಾರಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.ಗುರುವಾರ ಸಿದ್ದೇಶ್ವರ್ ಮತ್ತು ಹರೀಶ್ ಅವರನ್ನು ಪಕ್ಷದ ಕಚೇರಿಗೆ ಆಹ್ವಾನಿಸಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಚಿವರೂ ಆಗಿರುವ ಶಾಸಕರಾದ ಸಿ.ಟಿ.ರವಿ, ವಿ.ಸುನೀಲ್‌ಕುಮಾರ್ ಹಾಗೂ ವಿಧಾನಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಚರ್ಚಿಸಿದರು.
ಅಭಿಯಾನದ ಅಂಗವಾಗಿ ಜೂ.24ರಂದು ಸಂಜೆ ಬೆಂಗಳೂರಿನ ಪುರಭವನದಲ್ಲಿ ಸಮಾರಂಭವೊಂದನ್ನು ಆಯೋಜಿಸಲಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಹಿರಿಯ ಅಂಕಣಕಾರ ಎಸ್.ಗುರುಮೂರ್ತಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.ಅಭಿಯಾನದ ಸಂಚಾಲಕ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಜೂ.25ಕ್ಕೆ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ 50 ವರ್ಷಗಳಾಗಲಿದೆ. 21 ತಿಂಗಳ ಕಾಲ ಅತ್ಯಂತ ಕರಾಳವಾಗಿ ಮಾನವ ಹಕ್ಕುಗಳ ದಮನ ಮಾಡಲಾಯಿತು. ಇಂದಿರಾ ಗಾಂಧಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ರಾಜಕೀಯ ಸ್ವಾರ್ಥಕ್ಕಾಗಿ, ಅಕ್ರಮಗಳನ್ನು ಮುಚ್ಚಿ ಹಾಕಲು, ಕುರ್ಚಿ ಉಳಿಸಿಕೊಳ್ಳಲು ಸಂವಿಧಾನದ ಮೇಲೆ ನಡೆಸಿದ ದೌರ್ಜನ್ಯ ಇದಾಗಿತ್ತು. ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಮಾತ್ರವಲ್ಲದೆ, ಪ್ರಜಾಪ್ರಭುತ್ವದ ಪರವಾಗಿ ಧ್ವನಿ ಎತ್ತಿದ ಎಲ್ಲ ವಿಪಕ್ಷ ನಾಯಕರನ್ನು ಬಂಧಿಸಿ ಜೈಲಿನಲ್ಲಿ ಇಡಲಾಗಿತ್ತು ಎಂದರು.====
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಹರದೀಪ್ ಸಿಂಗ್ ಪುರಿ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಪಕ್ಷದ ಉಸ್ತುವಾರಿಗಳಾದ ರಾಧಾಮೋಹನ್ ದಾಸ್ ಅಗ್ರವಾಲ್, ರಾಷ್ಟ್ರೀಯ ವಕ್ತಾರ ಗುರುಪ್ರಕಾಶ್ ಪಾಸ್ವಾನ್ ಸೇರಿ ಪಕ್ಷದ ಹಿರಿಯ ನಾಯಕರು ಎಲ್ಲ ಜಿಲ್ಲೆಗಳಿಗೆ ತೆರಳಿ ತುರ್ತು ಪರಿಸ್ಥಿತಿ ವಿರುದ್ಧ ಜಾಗೃತಿ ಮೂಡಿಸಲಿದ್ದಾರೆ ಎಂದು ವಿವರಿಸಿದರು.ಫೋಟೋ-