ದೇಶ, ಯೋಧರ ಹೆಸರಿನಲ್ಲಿ ಬಿಜೆಪಿ ರಾಜಕೀಯ

KannadaprabhaNewsNetwork |  
Published : Jul 27, 2025, 12:00 AM IST
26ಕೆಡಿವಿಜಿ19, 20, 21-ದಾವಣಗೆರೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಮಾಜಿ ಯೋಧರೊಂದಿಗೆ ಅಮರ್ ಜವಾನ್ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು. | Kannada Prabha

ಸಾರಾಂಶ

ದೇಶ, ಯೋಧರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿರುವುದು ದೇಶಕ್ಕೆ ಒಳ್ಳೆಯ ಬೆಳವಣಿಗೆಯಲ್ಲ. ಬಿಜೆಪಿಯವರು ತಮ್ಮ ಕೆಲಸದ ಮೂಲಕ ಜನರ ಬಳಿ ಹೋಗಬೇಕು. ದೇಶ, ಯೋಧರ ವಿಚಾರ ಮುಂದಿಟ್ಟುಕೊಂಡು ಚುನಾವಣೆ ಎದುರಿಸುವುದಲ್ಲ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.

- ಕಾರ್ಗಿಲ್ ವಿಜಯ್ ದಿವಸ್ ಆಚರಣೆಯಲ್ಲಿ ಕಾಂಗ್ರೆಸ್‌ ಮುಖಂಡ ದಿನೇಶ ಶೆಟ್ಟಿ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ದೇಶ, ಯೋಧರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿರುವುದು ದೇಶಕ್ಕೆ ಒಳ್ಳೆಯ ಬೆಳವಣಿಗೆಯಲ್ಲ. ಬಿಜೆಪಿಯವರು ತಮ್ಮ ಕೆಲಸದ ಮೂಲಕ ಜನರ ಬಳಿ ಹೋಗಬೇಕು. ದೇಶ, ಯೋಧರ ವಿಚಾರ ಮುಂದಿಟ್ಟುಕೊಂಡು ಚುನಾವಣೆ ಎದುರಿಸುವುದಲ್ಲ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದರು.

ನಗರದ ಎಸ್.ನಿಜಲಿಂಗಪ್ಪ ಬಡಾವಣೆಯ ಅಮರ್ ಜವಾನ್ ಪಾರ್ಕ್‌ನಲ್ಲಿ ಶನಿವಾರ ಕಾಂಗ್ರೆಸ್ ಪಕ್ಷದಿಂದ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಮರ್ ಜವಾನ್ ಸ್ಮಾರಕ್ಕೆ ಪುಷ್ಪನಮನ ಅರ್ಪಿಸಿ ಅವರು ಮಾತನಾಡಿದರು.

ಯಾರೇ ಆಗಲಿ, ದೇಶ ಮತ್ತು ಯೋಧರ ಹೆಸರನ್ನು ಬಳಸಿ ರಾಜಕೀಯ ಮಾಡುವುದು ಒಳ್ಳೆಯದಲ್ಲ. ಈ ಹಿಂದೆ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿ ಅನೇಕ ಯುದ್ಧಗಳನ್ನು ಎದುರಿಸಿ ವಿಜಯೋತ್ಸವ ಆಚರಿಸಿದೆ. ಆದರೆ, ಎಂದಿಗೂ ಅದನ್ನು ತನ್ನ ರಾಜಕೀಯಕ್ಕೆ ಬಳಸಿಕೊಳ್ಳಲಿಲ್ಲ. ಆದರೆ, ಇಂದು ಬಿಜೆಪಿ ಭಾರತದ ಮೇಲೆ ಶತ್ರು ದೇಶಗಳಿಂದ ಆಗಿರುವ ದಾಳಿ ಬಗ್ಗೆ ದೇಶದ ನಾಗರೀಕರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದೆ ಎಂದು ದೂರಿದರು.

ಮಾಜಿ ಉಪ ಮಹಾಪೌರ ಸೋಗಿ ಶಾಂತಕುಮಾರ ಮಾತನಾಡಿದರು. ನಿವೃತ್ತ ಯೋಧರಾದ ಮಹೇಂದ್ರಕರ್, ಮಂಜಾನಾಯ್ಕ, ಸುರೇಶ್ ರಾವ್, ಸತ್ಯಪ್ರಕಾಶ, ಬೀರೇಶ, ಶ್ರೀನಿವಾಸ್, ರೆಡ್ಡಿ, ಪಕ್ಷದ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬಿ.ಎಚ್. ವೀರಭದ್ರಪ್ಪ, ನಗರಸಭೆ ಮಾಜಿ ಅಧ್ಯಕ್ಷ ಆರ್.ಎಚ್. ನಾಗಭೂಷಣ, ಪಾಲಿಕೆ ಮಾಜಿ ಸದಸ್ಯರಾದ ಎ.ನಾಗರಾಜ, ಮಂಜುನಾಥ ಗಡಿಗುಡಾಳ, ಎಲ್.ಡಿ.ಗೋಣೆಪ್ಪ, ಸಪ್ತಗಿರಿ ಶಾಲೆಯ ರಾಮಮೂರ್ತಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಮಲ್ಲಿಕಾರ್ಜುನ, ಮಹಿಳಾ ಘಟಕದ ಅಧ್ಯಕ್ಷೆ, ಮಾಜಿ ಮೇಯರ್ ಅನಿತಾಬಾಯಿ ಮಾಲತೇಶ ಜಾಧವ್, ಸರ್ವಮಂಗಳ ಮತ್ತಿತರರು ಇದ್ದರು.

- - -

-26ಕೆಡಿವಿಜಿ19, 20, 21.ಜೆಪಿಜಿ:

ದಾವಣಗೆರೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಮಾಜಿ ಯೋಧರೊಂದಿಗೆ ಅಮರ್ ಜವಾನ್ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು.

PREV

Recommended Stories

ಕಾರ್ಮಿಕರು ಒಪ್ಪಿದ್ರೆ 10 ಗಂಟೆ ಕೆಲಸಕ್ಕೆ ಓಕೆ : ಲಾಡ್‌
‘ಸಾವಿರಾರು ಶವ ಹೂಳಲು ಧರ್ಮಸ್ಥಳ ಗ್ರಾಮದಲ್ಲಿ ಮಹಾಭಾರತ ಯುದ್ಧ ನಡೆದಿಲ್ಲ’