ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳವಾರ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದನೇ ಹಂತದಲ್ಲಿ 1,876 ಬೂತ್‌ಗಳಲ್ಲಿ ಬೂತ್ ಅಭಿಯಾನ ಪೂರ್ತಿಯಾಗಿದೆ. ಬೂತ್ ಮಟ್ಟದ ಸಭೆಗಳನ್ನು ನಡೆಸಲಾಗಿದೆ. ಎರಡನೇ ಸುತ್ತಿನಲ್ಲಿ ಏ.19ರಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಅವರು ಮಂಗಳೂರಿನಲ್ಲಿ ವಕೀಲರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಏ.20ರಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಧ್ಯಾಹ್ನ ಬಂಟ್ವಾಳ, ಸಂಜೆ ಬೆಳ್ತಂಗಡಿಯಲ್ಲಿ ಪ್ರಚಾರ ಸಭೆ ನಡೆಸುವರು. ಏ.22ರಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಸುಳ್ಯ ಹಾಗೂ ಮಂಗಳೂರಿನಲ್ಲಿ ರೋಡ್‌ಶೋ ನಡೆಸುವರು.
ಪ್ರಧಾನಿ ಭದ್ರತೆಯ ಎಸ್‌ಪಿಜಿ ಅಧಿಕಾರಿಗಳ ಸೂಚನೆ ಪ್ರಕಾರ ಸಾಮಾನ್ಯರು ಸೇರಿದಂತೆ ಪಕ್ಷದ ಪದಾಧಿಕಾರಿಗಳಿಗೆ ಪ್ರಧಾನಿಯ ಸ್ವಾಗತಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಕೊನೆಕ್ಷಣದಲ್ಲಿ ಮೇಯರ್ ಹಾಗೂ ಇತರೆ ಪ್ರಮುಖರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ತಾಂತ್ರಿಕ ತೊಂದರೆಯಾಗಿದ್ದು, ಇದು ನಮಗೂ ಬೇಸರವಾಗಿದೆ ಎಂದರು. ಪ್ರಧಾನಿ ಅವರು ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ನಾರಾಯಣಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ನಾರಾಯಣಗುರು ಪ್ರತಿಮೆಯನ್ನು ಇಡೀ ವಿಶ್ವದ ಜನತೆ ನೋಡುವಂತಾಯಿತು. ಇಡೀ ರೋಡ್‌ಶೋ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದರು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಜಿಲ್ಲಾ ಚುನಾವಣಾ ಸಂಚಾಲಕ ನಿತಿನ್‌ಕುಮಾರ್, ಮುಖಂಡರಾದ ರವಿಶಂಕರ ಮಿಜಾರ್, ಜಗದೀಶ ಶೇಣವ, ಸಂಜಯ ಪ್ರಭು ಇದ್ದರು.