ಕಾಂಗ್ರೆಸ್ ಸರ್ಕಾರದ ದುರಾಡಳಿತ ಖಂಡಿಸಿ ಬಿಜೆಪಿ ಪ್ರತಿಭಟನೆ

KannadaprabhaNewsNetwork | Updated : Oct 17 2023, 12:46 AM IST

ಸಾರಾಂಶ

ಕಾಂಗ್ರೆಸ್ ಸರ್ಕಾರದ ದುರಾಡಳಿತ ಖಂಡಿಸಿ ಬಿಜೆಪಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಕಾಂಗ್ರೆಸ್ ಸರ್ಕಾರದ ದುರಾಡಳಿತ ಖಂಡಿಸಿ ಬಾಗಲಕೋಟೆ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಬಾಗಲಕೋಟೆ ನಗರದ ಶಿವಾನಂದ ಜಿನ್‌ನಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಬಿಜೆಪಿ ಕಾರ್ಯಕರ್ತರು ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಭಾಗ್ಯಗಳಲ್ಲಿನ ಭ್ರಷ್ಟಾಚಾರ, ರೈತರ ಜಮೀನಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸದೇ ಇರುವುದು ಹಾಗೂ ಸರ್ಕಾರದ ದುರಾಡಳಿತವನ್ನು ಖಂಡಿಸಿ ಮುಖಂಡರು ವಾಗ್ದಾಳಿ ನಡೆಸಿದರು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್, ಬೆಳಗಾವಿ ವಿಭಾಗದ ಪ್ರಭಾರಿ ಬಸವರಾಜ ಯಂಕಂಚಿ, ನಗರ ಘಟಕ ಅಧ್ಯಕ್ಷ ಸದಾನಂದ ನಾರಾ, ಜ್ಯೋತಿ ಭಜಂತ್ರಿ, ಸತ್ಯನಾರಾಯಣ ಹೇಮಾದ್ರಿ, ಉಮೇಶ ಹಂಚನಾಳ, ಸಾಗರ ಬಂಡಿ, ಸುರೇಶ ಮಜ್ಜಗಿ ಸೇರಿ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

Share this article