ಕುಶಾಲನಗರ ತಾಲೂಕು ಕಚೇರಿ ಎದುರು ಬಿಜೆಪಿ ಧರಣಿ

KannadaprabhaNewsNetwork |  
Published : Sep 21, 2024, 01:58 AM IST
ತಾಲೂಕು ಕಚೇರಿ ಮುಂಭಾಗ ಧರಣಿ | Kannada Prabha

ಸಾರಾಂಶ

ಕುಶಾಲನಗರ ಪಟ್ಟಣ ಪಂಚಾಯಿತಿ ಎರಡನೆಯ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ 25ರಂದು ನಿಗದಿಯಾಗಿದ್ದು, ಇಬ್ಬರು ನಾಮ ನಿರ್ದೇಶಿತ ಸದಸ್ಯರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ತಹಸಿಲ್ದಾರ್ ನೋಟಿಸ್ ನೀಡಿರುವುದನ್ನು ವಿರೋಧಿಸಿ ಕುಶಾಲನಗರದಲ್ಲಿ ಬಿಜೆಪಿ ಪ್ರಮುಖರು ಮತ್ತು ಪುರಸಭೆ ಸದಸ್ಯರು ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕುಶಾಲನಗರ ಪಟ್ಟಣ ಪಂಚಾಯಿತಿ ಎರಡನೆಯ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ 25ರಂದು ನಿಗದಿಯಾಗಿದ್ದು, ಇಬ್ಬರು ನಾಮ ನಿರ್ದೇಶಿತ ಸದಸ್ಯರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ತಹಸಿಲ್ದಾರ್ ನೋಟಿಸ್ ನೀಡಿರುವುದನ್ನು ವಿರೋಧಿಸಿ ಕುಶಾಲನಗರದಲ್ಲಿ ಬಿಜೆಪಿ ಪ್ರಮುಖರು ಮತ್ತು ಪುರಸಭೆ ಸದಸ್ಯರು ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಿದರು.

ತಹಸೀಲ್ದಾರ್ ಹಾಗೂ ಚುನಾವಣೆ ಅಧಿಕಾರಿಯಾಗಿರುವ ಕಿರಣ್ ಜಿ. ಗೌರಯ್ಯ ನಿಯಮಬಾಹಿರವಾಗಿ ನಾಮನಿರ್ದೇಶಿತ ಸದಸ್ಯರಿಗೆ ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಅವಕಾಶ ಕಲ್ಪಿಸುತ್ತಿರುವುದು ನಿಯಮಬಾಹಿರವಾಗಿದೆ. ತಹಸೀಲ್ದಾರ್ ಸರ್ಕಾರದ ಕೈ ಗೊಂಬೆಯಂತೆ ಕೆಲಸ ನಿರ್ವಹಿಸುತ್ತಿರುವುದಾಗಿ ಆರೋಪಿಸಿದ ಬಿಜೆಪಿ ಪ್ರಮುಖರು ತಕ್ಷಣ ಈ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿದರು.

ಕುಶಾಲನಗರ ನಗರ ಬಿಜೆಪಿ ಅಧ್ಯಕ್ಷ ಎಂ.ಎಂ.ಚರಣ್‌ ಮಾತನಾಡಿ, ಪೌರಾಡಳಿತ ಕಾಯಿದೆ ಹೆಸರಿನಲ್ಲಿ ತಹಸೀಲ್ದಾರ್ ಗೊಂದಲ ಮೂಡಿಸಿದ್ದಾರೆ. ನಾಮನಿರ್ದೇಶಿತ ಸದಸ್ಯರಿಗೆ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ಇರುವುದಿಲ್ಲ. ತಕ್ಷಣ ತಹಸೀಲ್ದಾರ್ ಈ ಬಗ್ಗೆ ಕ್ರಮ ಕೈಗೊಂಡು ಪಾರದರ್ಶಕವಾಗಿ ಚುನಾವಣೆ ನಡೆಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಬಿಜೆಪಿ ಮಾಜಿ ಅಧ್ಯಕ್ಷ ಕೆ.ಜಿ. ಮನು ಮಾತನಾಡಿ, ತಹಸೀಲ್ದಾರ್ ಸರ್ಕಾರದ ಕೈಗೊಂಬೆಯಂತೆ ಕೆಲಸ ನಿರ್ವಹಿಸುತ್ತಿರುವುದು ಕಂಡುಬಂದಿದೆ. ಸಮರ್ಪಕವಾಗಿ ಸಮಜಾಯಿಷಿ ನೀಡುತ್ತಿಲ್ಲ. ಪುರಸಭೆಯಾಗಿ ಮೇಲ್ದರ್ಜೆಗೆ ಏರಿದ ಕುಶಾಲನಗರ ಪಟ್ಟಣ ಪಂಚಾಯಿತಿಗೆ ಇದೀಗ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಗಾದಿಯ ಚುನಾವಣೆ ನಡೆಸುತ್ತಿರುವ ಸಂದರ್ಭ ನಿಯಮಬಾಹಿರವಾಗಿ ಮುಳ್ಳುಸೋಗೆ ಭಾಗದಿಂದ ಇಬ್ಬರು ನಾಮ ನಿರ್ದೇಶಿತ ಸದಸ್ಯರನ್ನು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮತದಾನ ಮಾಡುವಂತೆ ಮಾಡುತ್ತಿರುವುದು ಗೊಂದಲಮಯ ವಿಷಯವಾಗಿದೆ ಎಂದರು.

ಕುಶಾಲನಗರ ಪಟ್ಟಣ ಪಂಚಾಯಿತಿ ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ ಜೆಡಿಎಸ್ ಬೆಂಬಲಿತ ಸದಸ್ಯ ಜಗದೀಶ್ ಸೇರಿದಂತೆ ಪಕ್ಷದ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಘೋಷಣೆ ಕೂಗಿದರು.

ಬೆಳಗ್ಗಿನಿಂದ ಸಂಜೆ ತನಕ ಪ್ರತಿಭಟನೆ ಮುಂದುವರಿಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್, ವಿರಾಜಪೇಟೆ ತಾಲೂಕು ಅಧ್ಯಕ್ಷ ಸವಿನ್, ಕುಶಾಲನಗರ ತಾಲೂಕು ಅಧ್ಯಕ್ಷ ಗೌತಮ್ ಗೌಡ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಎಚ್ ಎಸ್ ಅಶೋಕ್, ಸದಸ್ಯರಾದ ದೀಪಕ್, ಮಂಜುಳಾ, ಸುನಿಲ್ ಕುಶಾಲನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಧುಸೂದನ್, ಪುರಸಭೆ ಸದಸ್ಯ ಡಿ ಕೆ ತಿಮ್ಮಪ್ಪ ,ಅಮೃತರಾಜ್ ಜಯವರ್ಧನ್, ರೇಣುಕಾ ಪ್ರಮುಖರಾದ ಕೆ ಜಿ ಮನು ,ಎಂ ಡಿ ಕೃಷ್ಣಪ್ಪ ,ಉಮಾಶಂಕರ್, ಬಿಜೆಪಿ ಪಕ್ಷದ ವಿವಿಧ ಘಟಕಗಳ ಪ್ರಮುಖರು ಕಾರ್ಯಕರ್ತರು ಇದ್ದರು.

PREV

Recommended Stories

15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌