ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ತಹಸೀಲ್ದಾರ ಕಚೇರಿಯ ದ್ವಿತೀಯ ದರ್ಜೆ ಗುಮಾಸ್ತ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲೇ ತನ್ನ ಸಾವಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆಪ್ತ ಸಹಾಯಕ ಸೋಮು, ತಹಸೀಲ್ದಾರ ಬಸವರಾಜ ನಾಗರಾಳ, ಮತ್ತೋರ್ವ ಸಹೋದ್ಯೋಗಿ ಅಶೋಕ ಕಟ್ಟಲಗಿ ಕಾರಣವಾಗಿದ್ದಾರೆ ಎಂದು ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಸಂದೇಶ ಕಳುಹಿಸಿದ್ದರು. ಆತ್ಮಹತ್ಯೆ ಮಾಡಿಕೊಂಡಿರುವ ರುದ್ರಣ್ಣ ಕುಟುಂಬಕ್ಕೆ ನ್ಯಾಯ ಸಿಗಬೇಕು. ಕಾಂಗ್ರೆಸ್ ಮುಖಂಡರು ರುದ್ರಣ್ಣ ಅವರ ಮನೆಗೆ ತೆರಳಿ, ಕುಟುಂಬಕ್ಕೆ ಸಾಂತ್ವನ ಹೇಳದಿರುವುದು ವಿಷಾದನೀಯ. ಈ ಪ್ರಕರಣದಲ್ಲಿ ಸಚಿವರ ಆಪ್ತ ಇದ್ದಾನೆ. ಹಾಗಾಗಿ, ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಬೇಕು. ಈ ಹಿಂದಿನ ಕಾರಣಕರ್ತರು ಯಾರು ಎಂಬುದನ್ನು ಪತ್ತೆ ಮಾಡಬೇಕು. ಈ ತನಿಖೆ ನಿಷ್ಪಕ್ಷಪಾತವಾಗಿ ನಡೆದು ಸತ್ಯ ಹೊರಬರಬೇಕಾದರೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ರಾಜೀನಾಮೆ ನೀಡಬೇಕು. ಬೆಳಗಾವಿ ತಹಸೀಲ್ದಾರ ಬಸವರಾಜ ನಾಗರಾಳ ಅವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು. ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.
ಬೀದರ ಜಿಲ್ಲೆಯ ಗುತ್ತಿಗೆದಾರ ಸಚಿನ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಕೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು. ಗುತ್ತಿಗೆದಾರನ ಆತ್ಮಹತ್ಯೆಗೆ ಸಚಿವರ ಆಪ್ತನ ಕಿರುಕುಳವೇ ಕಾರಣ ಎಂಬುದನ್ನು ಡೆತ್‌ನೋಟ್ ನಲ್ಲಿ ಬರೆಯಲಾಗಿದೆ.ಎಲ್ಲ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು,ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ಪ್ರಧಾನ ಕಾರ್ಯದರ್ಶಿ ಸಂದೀಪ್ ದೇಶಪಾಂಡೆ, ಬೆಳಗಾವಿ ಗ್ರಾಮೀಣ ಮಂಡಲ ಅಧ್ಯಕ್ಷ ಯುವರಾಜ ಜಾಧವ, ವಿಜಯ ಕೊಡಗನೂರ, ಪ್ರಶಾಂತ್ ಕಂಗ್ರಾಳಕರ್, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಯಲ್ಲೇಶ ಕೊಲಕಾರ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಕಡಿ, ಮಹಿಳಾ ಮೋರ್ಚಾ ಅಧ್ಯಕ್ಷೆ ನಯನಾ ಬಸ್ಮೆ, ಮುರುಗೇಂದ್ರಗೌಡ ಪಾಟೀಲ, ವಿನಯ್ ಕದಮ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ ಇತರರು ಪಾಲ್ಗೊಂಡಿದ್ದರು.
ತೀವ್ರ ಹೋರಾಟದ ಎಚ್ಚರಿಕೆ: ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಮತ್ತು ಪ್ರಿಯಾಂಕ ಖರ್ಗೆ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ತೀವ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.