ಇಂದು ವಿಧಾನಸೌಧ ಎದುರು ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Feb 07, 2024, 01:49 AM IST
ಬಳ್ಳಾರಿಯ ಬಿಜೆಪಿ ಜಿಲ್ಲಾ ಕಚೇರಿ ಸಭಾಂಗಣದಲ್ಲಿ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಸುದ್ದಿಗೋಷ್ಠಿ ನಡೆಸಿದರು. ಎಂಎಲ್ಸಿ ವೈ.ಎಂ.ಸತೀಶ್, ಪಕ್ಷದ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ ಮತ್ತಿತರರಿದ್ದರು.  | Kannada Prabha

ಸಾರಾಂಶ

ಬರಗಾಲದಿಂದ ತತ್ತರಿಸುತ್ತಿರುವ ದೇಶದ ಯಾವ ರಾಜ್ಯಗಳು ಸಹ ಪರಿಹಾರ ನೀಡುವಂತೆ ಪ್ರತಿಭಟನೆ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ಮಾತ್ರ ಪ್ರತಿಭಟನೆ ನಡೆಸುತ್ತಿರುವುದೇಕೆ?

ಬಳ್ಳಾರಿ: ತೆರಿಗೆ ನೀಡುವಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮೋಸ ಮಾಡುತ್ತಿದೆ ಎಂದು ಹಸಿ ಸುಳ್ಳು ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಫೆ. 7ರಂದು ವಿಧಾನಸೌಧ ಮುಂದಿನ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅವಧಿಯಲ್ಲಿ 2004ರಿಂದ 2014ರ ವರೆಗೆ ಕರ್ನಾಟಕಕ್ಕೆ ₹82 ಸಾವಿರ ಕೋಟಿ ತೆರಿಗೆ ಹಣ ಬಂದಿದೆ. ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕಕ್ಕೆ ₹2.13 ಲಕ್ಷ ಕೋಟಿ ತೆರಿಗೆ ಹಣ ಹರಿದು ಬಂದಿದೆ. ಕೋವಿಡ್ ಸಂಕಷ್ಟದ ನಡುವೆಯೂ ಕರ್ನಾಟಕಕ್ಕೆ ಸಾಕಷ್ಟು ತೆರಿಗೆ ಹಣ ನೀಡಲಾಗಿದೆ. ಆದರೆ, ಇದನ್ನು ಸರಿಯಾಗಿ ಅರಿಯದ ಕಾಂಗ್ರೆಸ್ ನಾಯಕರು ವಿನಾಕಾರಣ ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ತೆರಿಗೆ ಹಣ ಹಂಚಿಕೆ ವಿಚಾರದಲ್ಲಿ ಒಂದೇ ಒಂದು ರೂಪಾಯಿ ಅನ್ಯಾಯವಾಗಿಲ್ಲ ಎಂದರು. ಎಂದು ಟೀಕಿಸಿದರು.

ರಾಜ್ಯದಲ್ಲಿ ಬರಗಾಲ ಎದುರಾಗಿದ್ದು, ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಆದರೆ, ರೈತರಿಗೆ ನೆರವಾಗುವುದು ಬಿಟ್ಟು ಅಲ್ಪಸಂಖ್ಯಾತ ಸಮುದಾಯಕ್ಕೆ ₹10 ಸಾವಿರ ಕೋಟಿ ಅನುದಾನ ನೀಡುವುದಾಗಿ ಘೋಷಣೆ ಮಾಡಿರುವ ಮುಖ್ಯಮಂತ್ರಿಗಳು, ಈಗಾಗಲೇ ₹1 ಸಾವಿರ ಕೋಟಿ ಬಿಡುಗಡೆಗೆ ಕಾರ್ಯಾದೇಶ ಮಾಡಿದ್ದು ಎಷ್ಟು ಸರಿ? ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬರಗಾಲದಿಂದ ತತ್ತರಿಸುತ್ತಿರುವ ದೇಶದ ಯಾವ ರಾಜ್ಯಗಳು ಸಹ ಪರಿಹಾರ ನೀಡುವಂತೆ ಪ್ರತಿಭಟನೆ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ಮಾತ್ರ ಪ್ರತಿಭಟನೆ ನಡೆಸುತ್ತಿರುವುದೇಕೆ? ಇಡೀ ದೇಶಕ್ಕೆ ಪರಿಹಾರದ ಹಣ ಬಿಡುಗಡೆಯಾಗುವಾಗ ಕರ್ನಾಟಕದ ಹಣವೂ ಬರುತ್ತದೆ ಎಂದರು.

ಪರೀಕ್ಷಾ ಸಮಯ ಬದಲು: ಮುಸ್ಲಿಂ ಸಮುದಾಯದ ಓಲೈಕೆಗೆ ಕಾಂಗ್ರೆಸ್ ಸರ್ಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ವೇಳಾಪಟ್ಟಿಯಲ್ಲಿನ ಸಮಯವನ್ನೇ ಬದಲಾಯಿಸಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಆಪಾದಿಸಿದರು.

ಮುಸ್ಲಿಂ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಅನುಕೂಲವಾಗಲಿ ಎಂದು ವೇಳಾಪಟ್ಟಿಯ ಸಮಯ ಬದಲಾಯಿಸಿರುವುದು ಎಷ್ಟು ಸರಿ? ರಾಜ್ಯದಲ್ಲಿ ಪ್ರಜಾಪ್ರಭುತ್ವ ಸರ್ಕಾರ ಇದೆಯೋ ಅಥವಾ ಟಿಪ್ಪು ಸುಲ್ತಾನ್ ಸರ್ಕಾರ ಆಡಳಿತದಲ್ಲಿದೆಯೋ ಎಂದು ಪ್ರಶ್ನಿಸಿದರು. ಕೂಡಲೇ ಸರ್ವ ಪಕ್ಷಗಳ ಸಭೆ ಕರೆದು ಪರೀಕ್ಷಾ ವೇಳಾಪಟ್ಟಿ ಬದಲಾಯಿಸಬೇಕು ಎಂದು ಆಗ್ರಹಿಸಿದರು.ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್, ಪಕ್ಷದ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮುರಹರಗೌಡ ಗೋನಾಳ್ ಸುದ್ದಿಗೋಷ್ಠಿಯಲ್ಲಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ