ಬೆಳಗಾವಿ ಬೆತ್ತಲೆ ಪ್ರಕರಣ ಖಂಡಿಸಿ ಕೊಪ್ಪಳದಲ್ಲಿ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Dec 17, 2023, 01:45 AM IST
16ಕೆಪಿಎಲ್21 ಬೆಳಗಾವಿ ಬೆತ್ತಲೇ ಪ್ರಕರಣ ಖಂಡಿಸಿ ಕೊಪ್ಪಳದಲ್ಲಿ ಬಿಜೆಪಿ ಕಾರ್ಯಕರ್ತರು ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಬಸವೇಶ್ವರ ವೃತ್ತದಲ್ಲಿ ಹೆದ್ದಾರಿಯಲ್ಲಿಯೇ ಏಕಾಏಕಿ ಪ್ರತಿಭಟನೆಯನ್ನು ನಡೆಸಿದ್ದರಿಂದ ಕೆಲಕಾಲ ಟ್ರಾಫಿಕ್ ಸಮಸ್ಯೆಯಾಯಿತು. ರಸ್ತೆ ಬಂದ್ ಮಾಡಿ, ಪ್ರತಿಭಟನೆ ಮಾಡಲು ಪೊಲೀಸರು ಅವಕಾಶ ನೀಡಲಿಲ್ಲ. ಹೀಗಾಗಿ, ಬಸವೇಶ್ವರ ವೃತ್ತದಲ್ಲಿ ಕಾರ್ಯಕರ್ತರು ಘೋಷಣೆಗಳನ್ನು ಹಾಕಿ, ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ಮಾಡಿರುವ ಅಮಾನವೀಯ ಘಟನೆ ಖಂಡಿಸಿ ಮತ್ತು ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕೊಪ್ಪಳದ ಬಸವೇಶ್ವರ ವೃತ್ತದಲ್ಲಿ ಶನಿವಾರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ರಾಜ್ಯದಲ್ಲಿ ಮಹಿಳೆಯ ಬೆತ್ತಲೆ ಪ್ರಕರಣ ಮತ್ತು ಭ್ರೂಣ ಹತ್ಯೆಯಂತಹ ಹೇಯ ಕೃತ್ಯಗಳು ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಹುತೇಕ ಹದಗೆಟ್ಟಿದೆ. ಅಮಾನವೀಯ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಬರ ಸಮಸ್ಯೆ ಇದ್ದರೂ ಸ್ಪಂದಿಸದೇ ಇರುವುದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಬಸವೇಶ್ವರ ವೃತ್ತದಲ್ಲಿ ಹೆದ್ದಾರಿಯಲ್ಲಿಯೇ ಏಕಾಏಕಿ ಪ್ರತಿಭಟನೆಯನ್ನು ನಡೆಸಿದ್ದರಿಂದ ಕೆಲಕಾಲ ಟ್ರಾಫಿಕ್ ಸಮಸ್ಯೆಯಾಯಿತು. ರಸ್ತೆ ಬಂದ್ ಮಾಡಿ, ಪ್ರತಿಭಟನೆ ಮಾಡಲು ಪೊಲೀಸರು ಅವಕಾಶ ನೀಡಲಿಲ್ಲ. ಹೀಗಾಗಿ, ಬಸವೇಶ್ವರ ವೃತ್ತದಲ್ಲಿ ಕಾರ್ಯಕರ್ತರು ಘೋಷಣೆಗಳನ್ನು ಹಾಕಿ, ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದು ಅಲ್ಲದೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಜನರ ನೆಮ್ಮದಿಯಿಂದ ಇರಲು ಆಗುತ್ತಿಲ್ಲ. ಅಮಾನವೀಯ ಘಟನೆಗಳು ನಡೆಯುತ್ತಿರುವುದು ದುರಂತವೇ ಸರಿ ಎಂದು ಮುಖಂಡರು ಆಕ್ರೋಶ ಹೊರಹಾಕಿದರು.

ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಮಂಜುಳಾ ಕರಡಿ, ಅಪ್ಪಣ್ಣ ಪದಕಿ, ನಗರ ಅಧ್ಯಕ್ಷ ಸುನೀಲ್ ಹೆಸರೂರ, ಮಹೇಶ ಅಂಗಡಿ, ಮಹಾಂತೇಶ್ ಮೈನಹಳ್ಳಿ, ಚಂದ್ರು ಹಲಿಗೇರಿ, ವಾಣಿಶ್ರೀ ಮಠದ, ಗಣೇಶ, ಶರಣಯ್ಯ, ಪಂಪಯ್ಯ, ರಾಜು ವಸ್ತ್ರದ್, ರವಿಚಂದ್ರನ್, ಮಹೇಶ್ ಹಾದಿಮನಿ, ಕಂಠಯ್ಯ ಹಿರೇಮಠ, ವೆಂಕಟೇಶ್, ಬಸಯ್ಯ ಇತರ ಕಾರ್ಯಕರ್ತರು ಭಾಗವಹಿಸಿದ್ದರು.ಬೆಳಗಾವಿ ಬೆತ್ತಲೆ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಭ್ರೂಣ ಹತ್ಯೆಯಂತಹ ಅಮಾನವೀಯ ಘಟನೆ ಪದೇ ಪದೇ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ, ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ ಎಂದು ವಿಪ ಸದಸ್ಯೆ ಹೇಮಲತಾ ನಾಯಕ ಹೇಳಿದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ