ಸಚಿವ ಶಿವರಾಜ್‌ ತಂಗಡಗಿ ಹೇಳಿಕೆ ಖಂಡಿಸಿ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರ ಬಂಧನ

KannadaprabhaNewsNetwork |  
Published : Mar 28, 2024, 12:52 AM IST
27ಎಚ್‌ಪಿಟಿ4- ಹೊಸಪೇಟೆಯಲ್ಲಿ ಬುಧವಾರ ಸಚಿವ ಶಿವರಾಜ್‌ ತಂಗಡಗಿ ವಿರುದ್ಧ ಪ್ರತಿಭಟನೆ ನಡೆಸಿ ಪ್ರತಿಕೃತಿ ದಹನ ಮಾಡಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. | Kannada Prabha

ಸಾರಾಂಶ

ದೇಶದ ಮೂಲೆ ಮೂಲೆಯಲ್ಲೂ ಪಕ್ಷದ ಕಾರ್ಯಕರ್ತರಷ್ಟೇ ಅಲ್ಲ, ಜನರು ಕೂಡ ಅವರ ಅಭಿಮಾನಿಗಳಿದ್ದಾರೆ. ಅದರಲ್ಲೂ ಯುವ ಸಮುದಾಯ ಹೆಚ್ಚಿದ್ದಾರೆ.

ಹೊಸಪೇಟೆ: ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ಖಂಡಿಸಿ ನಗರದಲ್ಲಿ ಬುಧವಾರ ಅವರ ಪ್ರತಿಕೃತಿ ದಹನಕ್ಕೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದರು.ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಡಿ ಕೊಟ್ರೇಶ್ ಮಾತನಾಡಿ, ವಿಶ್ವವೇ ಮೆಚ್ಚುವ ನಾಯಕರಾಗಿ ಪ್ರಧಾನಿ ನರೇಂದ್ರ ಮೋದಿ ಬೆಳೆದಿದ್ದಾರೆ. ದೇಶದ ಮೂಲೆ ಮೂಲೆಯಲ್ಲೂ ಪಕ್ಷದ ಕಾರ್ಯಕರ್ತರಷ್ಟೇ ಅಲ್ಲ, ಜನರು ಕೂಡ ಅವರ ಅಭಿಮಾನಿಗಳಿದ್ದಾರೆ. ಅದರಲ್ಲೂ ಯುವ ಸಮುದಾಯ ಹೆಚ್ಚಿದ್ದಾರೆ. ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ತಂಗಡಗಿ ಹೇಳಿಕೆಯಿಂದ ಯುವ ಮತದಾರರು ಆತಂಕಕ್ಕೆ ಒಳಗಾಗುವ ಸಾಧ್ಯತೆ ಇದೆ. ಮತದಾನದಿಂದ ದೂರ ಉಳಿಯುವ ಸಂಭವ ಇದೆ. ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಆಗಿದೆ. ಕೂಡಲೇ ಚುನಾವಣಾ ಆಯೋಗ ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಅವರನ್ನು ಚುನಾವಣಾ ಪ್ರಕ್ರಿಯೆಯಿಂದ ಹಾಗೂ ಕಾಂಗ್ರೆಸ್ ಪಕ್ಷದ ಪರ ಪ್ರಚಾರಕ್ಕೆ ನಿರ್ಬಂಧಿಸಬೇಕು ಎಂದು ಆಗ್ರಹಿಸಿದರು.ತಂಗಡಗಿ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರು ರಾಜೀನಾಮೆ ನೀಡದಿದ್ದರೆ ರಾಜ್ಯ ಸರ್ಕಾರ ವಜಾ ಗೊಳಿಸಬೇಕು ಎಂದು ಒತ್ತಾಯಿಸಿದರು.ನಗರದ ಬಿಜೆಪಿ ಕಚೇರಿಯಿಂದ ಡಾ.ಪುನೀತ್ ರಾಜಕುಮಾರ್ ಸರ್ಕಲ್ ವರೆಗೆ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೂರಿ ಬಂಗಾರು, ಯುವ ಮುಖಂಡರಾದ ಸಚಿನ್, ವಿನೋದ್ ಜಾಡರ್, ಜಗದೀಶ್ ಕಮಟಗಿ, ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಮೇಟಿ, ಮುಖಂಡರಾದ ವ್ಯಾಸರಾಜ, ಹನುಮ ನಾಯಕ, ರಾಘವೇಂದ್ರ, ನಾಗರಾಜ, ಚನ್ನವೀರ, ಮಹಾಲಕ್ಷ್ಮಿ, ಮಧುರ ಚನ್ನ ಶಾಸ್ತ್ರಿ, ರೇವಣಸಿದ್ದಪ್ಪ ಮತ್ತಿತರರಿದ್ದರು.27ಎಚ್‌ಪಿಟಿ4ಹೊಸಪೇಟೆಯಲ್ಲಿ ಸಚಿವ ಶಿವರಾಜ್‌ ತಂಗಡಗಿ ವಿರುದ್ಧ ಪ್ರತಿಭಟನೆ ನಡೆಸಿ ಪ್ರತಿಕೃತಿ ದಹನಕ್ಕೆ ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

PREV

Recommended Stories

ಮದ್ದೂರು ಗಣೇಶ ಗಲಾಟೆಗೆ ಪೂರ್ಣ ಮುಸ್ಲಿಮರೇ ಕಾರಣ: ಸಚಿವ ಚಲುವ
ಬುರುಡೆ ಕೇಸ್‌ : ಸಾಕ್ಷಿದಾರರ ಬಂಧನ..? ಮಟ್ಟಣ್ಣವರ್‌, ಜಯಂತ್‌, ಅಭಿಷೇಕ್, ಮನಾಫಾ ವಿಠಲಗೆ ಗ್ರಿಲ್