ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕಾಂಗ್ರೆಸ್ ಪಕ್ಷದ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್‌ಯುಐ) ಹೆಸರಿನಲ್ಲಿ ಕರಪತ್ರ ಮುದ್ರಿಸಿ, ವಿತರಣೆ ಮಾಡುತ್ತಿದ್ದಾರೆ. ಮೆಡಿಕಲ್ ಕಾಲೇಜಿಗೆ ನುಗ್ಗಿದ ಕೆಲವು ಯುವಕರು ಕೇಸರಿ ಶಾಲು ಹಾಕಿಕೊಂಡು ಹೋಗಿರುವುದು ಕಾಲೇಜಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅನಧಿಕೃತವಾಗಿ ಕಾಲೇಜಿಗೆ ನುಗ್ಗಿ ಕೇಸರಿ ಶಾಲು ಹಾಕಿಕೊಂಡು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬೆದರಿಕೆ ಕರಪತ್ರ ವಿತರಣೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೇ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದರಿಂದ ಸಾಕಷ್ಟು ಗೊಂದಲ ವಾತಾವರಣ ನಿರ್ಮಾಣವಾಗಿದೆ.ಕೇಸರಿ ಶಾಲು ಹಾಕಿಕೊಂಡು ಬಂದಿದ್ದ ಕಾಂಗ್ರೆಸ್ ಎನ್ಎಸ್‌ಯುಐ ಕಾರ್ಯಕರ್ತರು, ಯಾವುದೇ ಪರವಾನಗಿ ಇಲ್ಲದೆ ಕಾಲೇಜಿನ ಕ್ಯಾಂಪಸ್ ಗೆ ನುಗ್ಗಿದ್ದರು. ಇದನ್ನು ಕಂಡ ಸಿಬ್ಬಂದಿ ಹಾಗೂ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಅವರನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿ ವಶಕ್ಕೆ ಒಪ್ಪಿಸಿದ್ದಾರೆ.
ಠಾಣೆಯಿಂದಲೇ ಫೇಸ್‌ಬುಕ್ ಲೈವ್ ?: ಕೇಸರಿ ಶಾಲು ಹಾಕಿಕೊಂಡು ಅನಧಿಕೃತವಾಗಿ ಕಾಲೇಜು ಕ್ಯಾಂಪಸ್ ಗೆ ನುಗ್ಗಿ ಕರಪತ್ರ ಹಂಚಿದ್ದನ್ನು ಸಮರ್ಥಿಸಿಕೊಂಡು ಆರೋಪಿಗಳು ಪೊಲೀಸ್ ಠಾಣೆಯಿಂದಲೇ ಫೆಸ್‌ಬುಕ್ ಲೈವ್ ನಲ್ಲಿ ಮಾತನಾಡಿದ್ದು ಅಚ್ಚರಿ ಮೂಡಿಸಿದೆ. ಯಾವು ಎನ್ಎಸ್‌ಯುಐ ಕಾರ್ಯಕರ್ತರು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ತಮ್ಮ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಒತ್ತಡ ಹಾಕಿ ಮತ ಹಾಕುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸ್ ಠಾಣೆಯಿಂದ ಫೇಸ್‌ಬುಕ್ ಲೈವ್ ಮಾಡಿದ್ದೇಗೆ? ಠಾಣೆಯಲ್ಲಿ ಇದಕ್ಕೆ ಅವಕಾಶ ಹೇಗೆ ಸಿಕ್ಕಿತು ಎನ್ನುವುದು ಅಚ್ಚರಿಗೆ ಕಾರಣವಾಗಿದೆ.
ಸಂಬಂಧಿಸಿದ ವ್ಯಕ್ತಿಗಳು/ಸಂಸ್ಥೆಗಳ ವಿರುದ್ಧ ತಕ್ಷಣ ನಿಯಮಾನುಸಾರ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು. ಕರಪತ್ರ ಮುದ್ರಿಸಿದವರು, ಪ್ರಕಟಿಸಿದವರು ಹಾಗೂ ಹಂಚಿದವರು ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ವೈದ್ಯಕೀಯ ಕಾಲೇಜು ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ಶಾಂತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.