ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Nov 24, 2026, 01:00 AM IST
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ತಾಲೂಕು ಘಟಕದಿಂದ ಯಲಬುರ್ಗಾದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ಜನರಿಗೆ ನೀಡಿದ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸುವ ಬದಲು ಬೆಲೆ ಏರಿಕೆಯ ಮೂಲಕ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ತಳ್ಳಲಾಗುತ್ತಿದೆ.

ಯಲಬುರ್ಗಾ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಹಾಗೂ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆ ಖಂಡಿಸಿ ಬಿಜೆಪಿ ತಾಲೂಕು ಘಟಕದಿಂದ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾಜಿ ಸಚಿವ ಹಾಲಪ್ಪ ಆಚಾರ್ ಮಾತನಾಡಿ, ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆಯ ವೈಫಲ್ಯದಿಂದ ಖಜಾನೆ ಖಾಲಿಯಾಗಿದ್ದು, ಆಡಳಿತದ ಹೊರೆ ಸರಿದೂಗಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೇರುತ್ತಿದೆ. ದಿನನಿತ್ಯದ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಬಡವರು, ಮಧ್ಯಮ ವರ್ಗದವರು ಹಾಗೂ ಸಾಮಾನ್ಯ ಜನರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಜನರ ಹಿತ ಕಾಪಾಡಬೇಕಾದ ಸರ್ಕಾರವೇ ಜನರ ಬದುಕಿಗೆ ಹೊರೆಯಾಗುತ್ತಿರುವುದು ಖಂಡನೀಯ ಎಂದರು.

ಜನರಿಗೆ ನೀಡಿದ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸುವ ಬದಲು ಬೆಲೆ ಏರಿಕೆಯ ಮೂಲಕ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ತಳ್ಳಲಾಗುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣವರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನಸಾಮಾನ್ಯರ ಮೇಲೆ ವಿವಿಧ ರೀತಿಯ ತೆರಿಗೆ ಹಾಗೂ ಬೆಲೆ ಏರಿಕೆಯ ಹೊರೆ ಹೊರಿಸುತ್ತಿದ್ದು, ದಿನಬಳಕೆ ವಸ್ತುಗಳ ಬೆಲೆ ಇಳಿಕೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು.

ಸರ್ಕಾರ ಕೂಡಲೇ ಬೆಲೆ ಏರಿಕೆ ನಿಯಂತ್ರಿಸಿ ಜನಸಾಮಾನ್ಯರಿಗೆ ಆರ್ಥಿಕ ಹೊರೆಯಾಗದಂತೆ ಕ್ರಮ ಕೈಗೊಳ್ಳಬೇಕು. ಜನವಿರೋಧಿ ನೀತಿ ಕೈಬಿಟ್ಟು ಜನಪರ ಆಡಳಿತಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಮಾರುತಿ ಗಾವರಾಳ ಮಾತನಾಡಿದರು.

ಈ ಸಂದರ್ಭ ಪ್ರಮುಖರಾದ ಬಸಲಿಂಗಪ್ಪ ಭೂತೆ, ವೀರಣ್ಣ ಹುಬ್ಬಳ್ಳಿ, ಸಿ.ಎಚ್.ಪಾಟೀಲ್, ರತನ್ ದೇಸಾಯಿ, ಶರಣಪ್ಪ ಈಳಿಗೇರ್, ಅಯ್ಯನಗೌಡ ಕೆಂಚಮ್ಮನವರ್, ಅಯ್ಯಪ್ಪ ಗುಳೇದ, ಬಸವರಾಜ ಗುಳಗುಳಿ, ಶಿವಲೀಲಾ ದಳವಾಯಿ, ಶಿವಕುಮಾರ ನಾಗಲಾಪುರಮಠ, ಅಮರೇಶ ಹುಬ್ಬಳ್ಳಿ, ಕಲ್ಲೇಶಪ್ಪ ಕರಮುಡಿ, ಶಂಬು ಜೋಳದ, ಸಂತೋಷಿಮಾ ಜೋಶಿ, ಪಂಪಾಪತಿ ಕುದ್ರಮೋತಿ ಸೇರಿದಂತೆ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಳಂಬ, ನಿರ್ಲಕ್ಷ್ಯ ತೋರಿದರೆ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ
ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕಾರ ಅಗತ್ಯ