ಮಠಾಧೀಶರ ಕುರಿತು ಸಿಎಂ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Sep 30, 2026, 02:15 AM IST
ಮಠಾಧೀಶರ ಬಗ್ಗೆ ಮುಖ್ಯಮಂತ್ರಿಗಳು ನೀಡಿದ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಸರ್ವೋದಯ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಠಾಧೀಶರ ಕುರಿತು ಹಗುರವಾಗಿ ಮಾತನಾಡುವ ಮೂಲಕ ಅವರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ.

ಹುಬ್ಬಳ್ಳಿ:

ಲಿಂಗಾಯತ ಮಠಗಳು ಹಾಗೂ ಮಠಾಧೀಶರ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿರುವ ಹೇಳಿಕೆ ಖಂಡಿಸಿ ಹು-ಧಾ ಸೆಂಟ್ರಲ್ ಕ್ಷೇತ್ರ ಬಿಜೆಪಿ ಮಂಡಲ ವತಿಯಿಂದ ಮಂಗಳವಾರ ಇಲ್ಲಿನ ಸರ್ವೋದಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಠಾಧೀಶರ ಕುರಿತು ಹಗುರವಾಗಿ ಮಾತನಾಡುವ ಮೂಲಕ ಅವರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಹುಬ್ಬಳ್ಳಿಯ ಮೂರುಸಾವಿರ ಮಠದ ಕುರಿತು "ಮೂರುಸಾವಿರ ಮಠ ಇರಲಿ, ಆರುಸಾವಿರ ಮಠ ಆಗಲಿ " ಎಂಬ ರೀತಿಯಲ್ಲಿ ಮುಖ್ಯಮಂತ್ರಿ ಮಾತನಾಡಿರುವುದು ಮಠಗಳ ಬಗ್ಗೆ ಸರ್ಕಾರದ ನಿಲುವನ್ನು ತೋರಿಸುತ್ತದೆ ಎಂದು ಪ್ರತಿಭಟನಾಕಾರರು ಆಕ್ಷೇಪಿಸಿದರು.

ಮಠಗಳು ಹಾಗೂ ಮಠಾಧೀಶರನ್ನು ಗೌರವದಿಂದ ಕಾಣಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ, ತಮ್ಮ ಹೇಳಿಕೆಗಳನ್ನು ಹಿಂಪಡೆದು ಮಠಾಧೀಶರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ರಾಜು ಕಾಳೆ, ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ರಾಮನಗೌಡ ಶೆಟ್ಟನಗೌಡರ್, ವಿಭಾಗ ಪ್ರಭಾರಿ ಜಯತೀರ್ಥ ಕಟ್ಟಿ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಸಿದ್ದು ಮುಗಳಿ ಶೆಟ್ರು, ದತ್ತಮೂರ್ತಿ ಕುಲಕರ್ಣಿ, ಅಶೋಕ ವಾಲ್ಮೀಕಿ, ಸಿದ್ದರಾಜು, ಪ್ರವೀಣ್ ಬಳಗಲಿ, ಮಂಜುನಾಥ ಊಟ್ವಾಲೆ, ವೆಂಕಟೇಶ ಚಚಡಿ, ವೆಂಕಟೇಶ ಹಬೀಬ್, ವಿಜಯಲಕ್ಷ್ಮಿ ತಿಮ್ಮೋಲಿ, ಗೀತಾ ಬೆಸಳ್ಳಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧಾರ್ಮಿಕತೆ ಜತೆಗೆ ಶಿಕ್ಷಣಕ್ಕೂ ಆದ್ಯತೆ ನೀಡಿ: ಸಚಿವ ಕೆ.ಎಸ್. ಬಸವಂತಪ್ಪ
ಮಾಜಿ ಸಂಸದ ಮಂಜುನಾಥ ಕುನ್ನೂರಗೆ ಕನ್ನಡದ ಕಟ್ಟಾಳು ಬಿರುದು ಪ್ರದಾನ