ಕಾಂಗ್ರೆಸ್, ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Aug 23, 2024, 01:12 AM IST
ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ  | Kannada Prabha

ಸಾರಾಂಶ

ರಾಜ್ಯಪಾಲರ ವಿರುದ್ಧ ಟೀಕೆಗಳನ್ನು ಮಾಡಿ ಅಸಂವಿಧಾನಾತ್ಮಕವಾಗಿ ವರ್ತಿಸುತ್ತಿರುವ ಕಾಂಗ್ರೆಸ್‌ ಸರ್ಕಾರ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕಾರವಾರ: ರಾಜ್ಯಪಾಲರ ವಿರುದ್ಧ ಅಸಂವಿಧಾನಿಕವಾಗಿ ನಡೆದುಕೊಳ್ಳುತ್ತಿರುವ ಕಾಂಗ್ರೆಸ್‌ ವಿರುದ್ಧ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಅಗ್ರಹಿಸಿ ಗುರುವಾರ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.ರಾಜ್ಯಪಾಲರ ವಿರುದ್ಧ ಟೀಕೆಗಳನ್ನು ಮಾಡಿ ಅಸಂವಿಧಾನಾತ್ಮಕವಾಗಿ ವರ್ತಿಸುತ್ತಿರುವ ಕಾಂಗ್ರೆಸ್‌ ಸರ್ಕಾರ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ. ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಮಾತನಾಡಿ, ಭ್ರಷ್ಟಾಚಾರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದಕ್ಕೆ ಮುಖ್ಯಮಂತ್ರಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆಯನ್ನು ಎದುರಿಸಬೇಕು. ತಮ್ಮ ಅಧಿಕಾರಕ್ಕೆ ಕುತ್ತು ಬರುತ್ತದೆಂದು ತಿಳಿದು ರಾಜ್ಯಪಾಲರ ವಿರುದ್ಧವೇ ಕಾಂಗ್ರೆಸ್‌ ನಡೆದುಕೊಳ್ಳುತ್ತಿದೆಯೆಂದು ಆರೋಪಿಸಿದರು. ಮುಖ್ಯಮಂತ್ರಿ ಸರ್ಕಾರದ ಬೊಕ್ಕಸಕ್ಕೆ ಹಾನಿ ಮಾಡಿದ್ದಾರೆ. ಹೀಗಾಗಿ ಅವರು ತಮ್ಮ ರಾಜ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ನೇರವಾಗಿ ಮುಡಾ ಹಗರಣದಲ್ಲಿ ಸಿಲುಕಿದ್ದಾರೆ. ಹಗರಣದಲ್ಲಿ ಸಿಲುಕಿದರೂ ತಮ್ಮ ಕುರ್ಚಿ ಬಿಡುತ್ತಿಲ್ಲ. ಅವರು ಭ್ರಷ್ಟಾಚಾರ ಮಾಡಿಲ್ಲ ಅಂದರೆ ಜನ ಯಾಕೆ ಪ್ರತಿಭಟನೆ ಮಾಡುತ್ತಿದ್ದರು. ಸಿಎಂ ಅವರ ಪತ್ನಿ ಹೆಸರಲ್ಲಿ ಮುಡಾ ಹಗರಣ ಆರೋಪಿವಿದ್ದರೂ ಹೈಕಮಾಂಡ್ ರಕ್ಷಣೆ ಮಾಡುತ್ತಿದೆ. ತನಿಖೆಗೆ ಆದೇಶಿಸಿದ ರಾಜ್ಯಪಾಲರನ್ನೇ ದೋಷಿ ಎಂದು ಮಾಡಲು ಕಾಂಗ್ರೆಸ್‌ ಹೊರಟಿದೆ. ಎಸ್‌ಸಿ, ಎಸ್‌ಟಿ, ಅನುದಾನ ಯಾಕೆ ದುರುಪಯೋಗ ಆಗಿದೆ ಎಂಬುದನ್ನು ಸಿಎಂ ತಿಳಿಸಬೇಕೆಂದು ಒತ್ತಾಯಿಸಿದರು.

ಸಿಎಂ ರಾಜೀನಾಮೆ ನೀಡುವ ತನಕ ಬಿಜೆಪಿಯಿಂದ ರಾಜ್ಯದಲ್ಲಿ ಪ್ರತಿಭಟನೆ ಮುಂದುವರಿಯಲಿದೆ ಎಂದರು.

ವಿಧಾನಪರಿಷತ್‌ ಸದಸ್ಯ ಗಣಪತಿ ಉಳ್ವೆಕ‌ರ್ ಮಾತನಾಡಿ, ಮುಡಾ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಹೆಗಡೆ, ಪ್ರಶಾಂತ ನಾಯ್ಕ, ಶಿವಾಜಿ ನರ್ಸಾನಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತಾರಾಮ್, ಪ್ರಮುಖರಾದ ರಾಜೇಂದ್ರ ನಾಯ್ಕ ಮಾತನಾಡಿದರು. ಜಿಲ್ಲಾ ಯುವ ಮೋರ್ಚಾ ಪ್ರೇಮ್‌ಕುಮಾರ್, ಎಲ್ಲ ಮಂಡಲ ಅಧ್ಯಕ್ಷರು, ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಕಾರ್ಯಕರ್ತರು, ಮುಖಂಡರು ಇದ್ದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ