)
ಕನ್ನಡಪ್ರಭ ವಾರ್ತೆ ಬೆಂಗಳೂರು
ಚಾಮರಾಜನಗರದಲ್ಲಿ ಚಾಮರಾಜೇಶ್ವರ ಸ್ವಾಮಿ ದೇವಾಲಯದ ಆವರಣದಿಂದ ಘೋಷಣೆಗಳನ್ನು ಕೂಗುತ್ತಾ, ಭುವನೇಶ್ವರಿ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಬೆಂಬಲಿತ ನಾರಿ ಶಕ್ತಿ ಫೋರಂನ ಕಾರ್ಯಕರ್ತರು, ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಾವೇರಿಯಲ್ಲಿ ಪುರಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಪಾದಯಾತ್ರೆ ನಡೆಸಿದ ಬಿಜೆಪಿ ಮಹಿಳಾ ಕಾರ್ಯಕರ್ತೆಯರು, ಜೆ.ಪಿ.ವೃತ್ತದಲ್ಲಿ ಸಮಾವೇಶಗೊಂಡರು. ರಸ್ತೆ ತಡೆ ನಡೆಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಮಹಿಳಾ ವಿರೋಧಿ ಧೋರಣೆ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟದ ಬೆಂಬಲಿತ ಪಕ್ಷಗಳ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ, ಬೆಳಗಾವಿ ಜಿಲ್ಲೆ ಚಿಕ್ಕೋಡಿ, ರಾಯಚೂರು, ಶಿವಮೊಗ್ಗ ಸೇರಿ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು.