ಕೊಪ್ಪಳ:
ಸಂವಿಧಾನದಲ್ಲಿ ಧರ್ಮ ಆಧಾರದಲ್ಲಿ ಮೀಸಲಾತಿ ನೀಡುವುದಕ್ಕೆ ಅವಕಾಶವಿಲ್ಲ. ಗುತ್ತಿಗೆ ನೀಡುವಲ್ಲಿ ಮುಸ್ಲಿಂರಿಗೆ ಶೇ.೪ ಮೀಸಲಾತಿ ನೀಡಿರುವುದು ತುಷ್ಟೀಕರಣದ ಪರಾಮಾವಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಭಾಧ್ಯಕ್ಷರು 18 ಬಿಜೆಪಿ ಶಾಸಕರನ್ನು 6 ತಿಂಗಳು ಅಮಾನತು ಮಾಡಿರುವುದು ಖಂಡನೀಯ. ಇದು ಕಾನೂನು ಬಾಹೀರ ಮತ್ತು ದ್ವೇಷದ ರಾಜಕಾರಣ ಎಂದು ಕಿಡಿಕಾರಿದರು. ಇದೊಂದು ಅಸಂವಿಧಾನಿಕ ಹಾಗೂ ಏಕಪಕ್ಷೀಯ ನಿರ್ಧಾರವಾಗಿದೆ. ಜನರಿಂದ ಆಯ್ಕೆಯಾದ ಶಾಸಕರಿಗೆ ಹಾಗೂ ಕ್ಷೇತ್ರದ ಮತದಾರರಿಗೆ ಮಾಡಿದ ಅಪಮಾನವಾಗಿದೆ ಎಂದು ಆರೋಪಿಸಿದರು.ಶಾಸಕರ ಸಂವಿಧಾನದತ್ತ ಹಕ್ಕನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಂಡಿದೆ. ಸಭಾಧ್ಯಕ್ಷರು ತಮ್ಮ ನಿರ್ಧಾರ ಮರುಪರಿಶೀಲಿಸಿ ಅಮಾನತು ಆದೇಶ ಹಿಂಪಡೆಯಬೇಕು. ಮುಸ್ಲಿಂ ವಿದ್ಯಾರ್ಥಿಗಳು ವಿದೇಶಕ್ಕೆ ಶಿಕ್ಷಣಾಭ್ಯಾಸಕ್ಕೆ ತೆರಳಿದರೆ ಅವರಿಗೆ ₹ ೨೦ರಿಂದ ₹ ೩೦ ಲಕ್ಷಕ್ಕೆ ಹೆಚ್ಚಿಸಿದ್ದು, ಶಾದಿ ಭಾಗ್ಯಕ್ಕೆ ಅನುದಾನ ನೀಡುವುದು, ಮುಸ್ಲಿಂ ಹೆಣ್ಣುಮಕ್ಕಳಿಗೆ ಮಾತ್ರ ಆತ್ಮರಕ್ಷಣೆಗೆ ವಿಶೇಷ ಅನುದಾನ ನೀಡಿದ್ದು ಹಲಾಲ್ ಬಜೆಟ್ ಆಗಿದೆ ಎಂದು ದೂರಿದರು.
ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ಗ್ಯಾರಂಟಿಗಳಿಗೆ ಮೀಸಲಿಟ್ಟ ಅನುದಾನ ಬಳಸಬೇಕು. ಬದಲಿಗೆ ಎಸ್‌ಸಿಪಿ,ಟಿಎಸ್‌ಪಿ ಅನುದಾನ ಬಳಕೆ ಮಾಡಕೂಡದು. ಕಳೆದ ೩ ವರ್ಷಗಳಲ್ಲಿ ₹ ೩೯ ಸಾವಿರ ಕೋಟಿ ಬೇರೆ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿದ್ದು ಪರಿಶಿಷ್ಟ ಸಮುದಾಯಕ್ಕೆ ಮಾಡಿದ ಅಪಮಾನ ಎಂದರಲ್ಲದೇ ಕೂಡಲೇ ಈ ಮೊತ್ತವನ್ನು ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ವಿನಿಯೋಗ ಮಾಡಬೇಕು ಎಂದು ಆಗ್ರಹಿಸಿದರು.