ಹಾಲು, ಬಸ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Nov 07, 2026, 02:45 AM IST
ಫೋಟೊ6ಬಿಕೆಟಿ1,(1) ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಂದ ಭಿಕ್ಷೆ ಬೇಡುವ ಮೂಲಕ ಬೆಲೆ ಏರಿಕೆ ನೀತಿಯನ್ನು ಖಂಡಿಸಿದರು.) | Kannada Prabha

ಸಾರಾಂಶ

ರಾಜ್ಯ ಕಾಂಗ್ರೆಸ್ ಸರ್ಕಾರದ ಹಾಲು ಹಾಗೂ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಬಿಜೆಪಿ ಬಾಗಲಕೋಟೆ ಮತಕ್ಷೇತ್ರದ ವತಿಯಿಂದ ಶುಕ್ರವಾರ ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಹಾಲು ಹಾಗೂ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಬಿಜೆಪಿ ಬಾಗಲಕೋಟೆ ಮತಕ್ಷೇತ್ರದ ವತಿಯಿಂದ ಶುಕ್ರವಾರ ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು.

ನಗರದ ಪಕ್ಷದ ಕಾರ್ಯಾಲಯದಿಂದ ಪಾದಯಾತ್ರೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಂದ ಭಿಕ್ಷೆ ಬೇಡುವ ಮೂಲಕ ಬೆಲೆ ಏರಿಕೆ ನೀತಿಯನ್ನು ಖಂಡಿಸಿದರು. ಈ ವೇಳೆ ಮುಖ್ಯಮಂತ್ರಿ ಹಾಗೂ ಸಚಿವರ ಮುಖವಾಡ ಧರಿಸಿ ಗಮನ ಸೆಳೆದರು.

ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ, ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆಯಿಂದ ಬಡವರು ಹಾಗೂ ಮಧ್ಯಮವರ್ಗದ ಕುಟುಂಬಗಳ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ. ವಿದ್ಯಾರ್ಥಿಗಳು, ನೌಕರರು ಸೇರಿದಂತೆ ನಿತ್ಯ ಪ್ರಯಾಣಿಸುವ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು.

ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮೂಲಕ ಜನಸಾಮಾನ್ಯರಿಗೆ ಮತ್ತಷ್ಟು ಸಂಕಷ್ಟ ತಂದಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳ ಕೊರತೆ, ಭ್ರಷ್ಟಾಚಾರ ಹಾಗೂ ಬರ ನಿರ್ವಹಣೆಯ ವೈಫಲ್ಯದಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಸ್ಟಿಂಗ್ ಆಪರೇಶನ್ ಮೂಲಕ ತನ್ನ ಮರ್ಯಾದೆಯನ್ನು ತಾನೆ ಕಳದುಕೊಂಡ ಕಾಂಗ್ರೆಸ್ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಡಾ.ಎಂ.ಎಸ್. ದಡ್ಡೆನ್ನವರ, ಸತ್ಯನಾರಾಯಣ ಹೇಮಾದ್ರಿ, ಬಸವರಾಜ್ ಹುನಗುಂದ, ಸಂಗಯ್ಯ ಸರಗಣಾಚಾರಿ,, ಮಂಜುನಾಥ್ ಏಳೆಮ್ಮಿ, ಮಲ್ಲೇಶ ವಿಜಾಪುರ, ಕಲ್ಲಪ್ಪ ಭಗವತಿ, ಸುರೇಶ ಮಜ್ಜಿಗಿ, ಸುಜಾತಾ ಶಿಂಧೆ, ಶಶಿಕಲಾ ಮಜ್ಜಗಿ, ನಾಗರತ್ನಾ ಹೇಬ್ಬಳ್ಳಿ, ಲಕ್ಷ್ಮೀ ಮಡಿವಾಳರ, ಜ್ಯೋತಿ ಚವ್ಹಾಣ, ಶಿವಲೀಲಾ ಹಿರೇಮಠ, ಶ್ರೀನಾಥ ಸಜ್ಜನ, ಶ್ರೀಕಾಂತ ಪತ್ತಾರ, ಮಾನೇಶ ಅಂಬಿಗೇರ, ಬಸವರಾಜ ಅವರಾದಿ, ಗಿರೀಶ ಭಾಂಡಗೆ, ಅಶೋಕ ಪವಾರ, ಬಸವರಾಜ ಕಟಗೇರಿ, ಚಂದ್ರು ರಾಮೋಡಗಿ, ಉಮೇಶ ಹಂಚಿನಾಳ, ಶ್ರೀಧರ ನಾಗರಬೇಟ್ಟ ಸೇರಿದಂತೆ ಅನೇಕರು ಇದ್ದರು.ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ